‘ಮ್ಯಾಂಗಲೋರ್ ಮುಸ್ಲಿಂ’ ಖಾತೆಯ ಪೋಸ್ಟ್ ವಿರುದ್ಧ ಪೊಲೀಸರಿಗೆ ದೂರು: ಕಟ್ಟೆಚ್ಚರ
ಹರ್ಷ ಹತ್ಯೆ ಬಳಿಕ ಮಂಗಳೂರಿನಲ್ಲಿ ಗರಿಷ್ಠ ಮುನ್ನೆಚ್ಚರಿಕಾ ಕ್ರಮ
Team Udayavani, Feb 21, 2022, 6:34 PM IST
ಮಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಮತ್ತು ಆನಂತರ ಅಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪೊಲೀಸರು ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಸೋಮವಾರ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೊಲೀಸರ ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಸಿದ್ಧತೆ ನಡೆಸಲಾಗಿದೆ.
ಇದನ್ನೂ ಓದಿ :ಶಿವಮೊಗ್ಗ ಉದ್ವಿಗ್ನ: ಹರ್ಷ ಶವಯಾತ್ರೆ ವೇಳೆ ಹಿಂಸಾಚಾರ; ವಾಹನಗಳಿಗೆ ಬೆಂಕಿ
ಮ್ಯಾಂಗಲೋರ್ ಮುಸ್ಲಿಂ ಎಂಬ ಸಾಮಾಜಿಕ ತಾಣದ ಖಾತೆಯ ಮೂಲಕ ಹರ್ಷ ಹತ್ಯೆಯ ಕುರಿತು ಪ್ರಚೋದನಾ ಬರಹ ಟ್ರೆಂಡಿಂಗ್ ಆಗುತ್ತಿದ್ದು, ಇಸ್ಲಾಮ್ ವಿರೋಧಿ ಪೋಸ್ಟ್ ಹಾಕಿದ್ದಕ್ಕಾಗಿ ಹರ್ಷ ವಿರುದ್ಧ ಕ್ರಮಕ್ಕೆ ಪೋಸ್ಟ್ ನಲ್ಲಿ ಆಗ್ರಹಿಸಲಾಗಿತ್ತು. ಹತ್ಯೆಯ ಬಳಿಕ ಸಮರ್ಥನೆ ಮಾಡಿ ಅದೇ ಖಾತೆಯಿಂದ ಪ್ರಚೋದನಾ ಕಾರಿ ಬರಹಗಳು ಪ್ರಕಟವಾದ ಹಿನ್ನಲೆಯಲ್ಲಿ, ಮಂಗಳೂರು ನಗರ ಸಿಇ ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.