
ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ
ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ಸಾಕ್ಷಿ : ಮಮತಾ ಬ್ಯಾನರ್ಜಿ
Team Udayavani, Mar 24, 2023, 5:28 PM IST

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ವಿಪಕ್ಷಗಳ ನಾಯಕರು ಬಿಜೆಪಿ ವಿರುದ್ಧ ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿ ರಾಹುಲ್ ಅವರನ್ನು ಅನರ್ಹಗೊಳಿಸಲು ಎಲ್ಲಾ ರೀತಿಯಲ್ಲಿ ಪ್ರಯತ್ನಿಸಿದರು. ಸತ್ಯ ಹೇಳುವವರನ್ನು ಇಟ್ಟುಕೊಳ್ಳಲು ಅವರು ಬಯಸುವುದಿಲ್ಲ ಆದರೆ ನಾವು ಸತ್ಯವನ್ನೇ ಮಾತನಾಡುತ್ತೇವೆ. ಜೆಪಿಸಿಗೆ ಬೇಡಿಕೆ ಇಡುತ್ತೇವೆ, ಬೇಕಾದರೆ ಪ್ರಜಾಪ್ರಭುತ್ವ ಉಳಿಸಲು ಜೈಲಿಗೆ ಹೋಗುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿಯವರ ನವ ಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣಕ್ಕಾಗಿ ಅನರ್ಹಗೊಳಿಸಲಾಗಿದೆ. ಇಂದು, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.
ಭಾರತ್ ಜೋಡೋ ಯಾತ್ರೆಯು ಯಶಸ್ವಿಯಾಗಿ ಮುಕ್ತಾಯವಾದಾಗಿನಿಂದ, ಸರಕಾರವು ವಿಚಲಿತವಾಗಿದೆ.ರಾಷ್ಟ್ರಪ್ರೇಮಿ ರಾಹುಲ್ ಗಾಂಧಿ ಇಡೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಅವರ ಅಜ್ಜಿ ಮತ್ತು ತಂದೆ ಹತ್ಯೆಯಾದ ದೇಶಭಕ್ತರು. ಸಂಸತ್ತಿನಲ್ಲಿ ಮಾತನಾಡಲು ಮತ್ತು ಬರದಂತೆ ನಿರ್ಬಂಧಿಸಲಾಗಿದೆ.ಇದರಿಂದ ಬಿಜೆಪಿಗೆ ದೊಡ್ಡ ನಷ್ಟವಾಗಲಿದೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಮಾಡಿದ ರಾಜಕೀಯ ಷಡ್ಯಂತ್ರ ಇಂದು ರಾಷ್ಟ್ರದ ಮುಂದೆ ಇದೆ. ಸದಸ್ಯತ್ವವನ್ನು ತೆಗೆದುಹಾಕುವುದರಿಂದ ಅವರು ಸರಕಾರವನ್ನು ಪ್ರಶ್ನಿಸುವುದನ್ನು ತಡೆಯಲಾಗುವುದಿಲ್ಲ ಎಂದು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಕಿಡಿ ಕಾರಿದ್ದಾರೆ.
ರಾಹುಲ್ ಗಾಂಧಿ ವಿರುದ್ಧದ ಕ್ರಮವನ್ನು ಸರ್ಕಾರ ಹಿಂಪಡೆಯಬೇಕು ಎಂದು ಮಿತ್ರ ಪಕ್ಷ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಅದಾನಿ, ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಪ್ರಶ್ನೆ ಎತ್ತಿದ್ದ ದಿನವೇ ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸಲು ಈ ರೀತಿಯ ಷಡ್ಯಂತ್ರ ಆರಂಭಿಸಲಾಗಿತ್ತು. ಇದು ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರದ ಧೋರಣೆಯ ಸ್ಪಷ್ಟ ನಿದರ್ಶನ ಎಂದು ಕಾಂಗ್ರೆಸ್ ನಾಯಕ, ಸಂಸದ ಕೆಸಿ ವೇಣುಗೋಪಾಲ್ ಪ್ರತಿಕ್ರಿಯಿಸಿದ್ದಾರೆ.
ನಮ್ಮ ದೇಶದಲ್ಲಿ ಕಳ್ಳ, ಕಳ್ಳ ಎಂದು ಕರೆಯುವುದು ಅಪರಾಧವಾಗಿಬಿಟ್ಟಿದೆ. ಕಳ್ಳರು ಮತ್ತು ಲೂಟಿಕೋರರು ಇನ್ನೂ ಮುಕ್ತರಾಗಿದ್ದಾರೆ ಮತ್ತು ರಾಹುಲ್ ಗಾಂಧಿಯವರಿಗೆ ಶಿಕ್ಷೆಯಾಗಿದೆ. ಇದು ಪ್ರಜಾಪ್ರಭುತ್ವದ ನೇರ ಕೊಲೆ. ಎಲ್ಲಾ ಸರಕಾರಿ ವ್ಯವಸ್ಥೆಗಳು ಒತ್ತಡದಲ್ಲಿವೆ. ಇದು ಸರ್ವಾಧಿಕಾರದ ಅಂತ್ಯದ ಆರಂಭ. ಹೋರಾಟಕ್ಕೆ ಮಾತ್ರ ನಿರ್ದೇಶನ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಇದು ನಿರಂಕುಶ ಸರಕಾರದ ಅತ್ಯಂತ ಕ್ರೂರ ಪ್ರದರ್ಶನ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.