![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 5, 2023, 8:24 PM IST
ಗಂಗಾವತಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗಲಿದ್ದು ಪ್ರತಿಯೊಬ್ಬರೂ ತಮ್ಮ ಮತಗಳನ್ನು ವ್ಯರ್ಥ ಮಾಡದೆ ಕಾಂಗ್ರೆಸ್ ಗೆ ಚಲಾಯಿಸುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅನ್ಸಾರಿ ಮನವಿ ಮಾಡಿದ್ದಾರೆ.
ವೆಂಕಟಗಿರಿ ಹೋಬಳಿ ಭಾಗದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದ ಭ್ರಷ್ಟತೆ ಮತ್ತು ಸ್ವಜನ ಪಕ್ಷಪಾತಕ್ಕೆ ರಾಜ್ಯದ ಮತದಾರರು ಬೇಸತ್ತು ಹೋಗಿದ್ದಾರೆ. ಗಂಗಾವತಿಯಲ್ಲಿ ಸಹ ವ್ಯಾಪಕ ಭ್ರಷ್ಟಾಚಾರವಾಗಿದ್ದು ಇದನ್ನು ತಪ್ಪಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಬೇಕು. ಜಾತಿ ಕೋಮುವಾದವನ್ನು ನಿಲ್ಲಿಸಬೇಕು. ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವುದು ಸೂರ್ಯ ಚಂದ್ರರು ಇರುವಷ್ಟೇ ಸತ್ಯವಾಗಿದೆ ಎಂದರು.
ಗಂಗಾವತಿಗೆ ಚುನಾವಣೆ ಸ್ಪರ್ಧೆಗಾಗಿ ಆಗಮಿಸಿರುವ ಜನಾರ್ದನ ರೆಡ್ಡಿ ಹಾಗೂ ಟೀಂನವರು ಬಳ್ಳಾರಿ ಜಿಲ್ಲೆಯಲ್ಲಿ ಗಡಿಗಳನ್ನು ಬದಲು ಮಾಡಿ ಸರ್ಕಾರದ ಜಾಗದಲ್ಲಿ ಗಣಿಗಾರಿಕೆ ನಡೆಸಿ ಅಕ್ರಮವಾಗಿ ಮೈನ್ಸ್ ಅನ್ನು ಬೇರೆ ದೇಶಗಳಿಗೆ ಸಾಗಿಸಿ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆದ ಹಣದಲ್ಲಿ ಚುನಾವಣೆಯನ್ನು ಮಾಡಲು ಆಗಮಿಸಿದ್ದಾರೆ. ಗಂಗಾವತಿ ಕ್ಷೇತ್ರದ ಜನರು ಲೂಟಿಕೋರರನ್ನು ತಿರಸ್ಕಾರ ಮಾಡುವ ಮೂಲಕ ಬಹುಸಂಖ್ಯಾತರು ಮತ್ತು ಬಡವರ ಪರವಾದ ಕಾಂಗ್ರೆಸ್ ಸರ್ಕಾರಕ್ಕೆ ಆಶೀರ್ವಾದ ಮಾಡಬೇಕು ಎಂದರು.
ಕಾಂಗ್ರೆಸ್ ಹೈಕಮಾಂಡ್ ಇನ್ನೂ ಸಹ ಮುಖ್ಯಮಂತ್ರಿಯ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ.ಆದರೂ ಇಕ್ಬಾಲ್ ಅನ್ಸಾರಿ ಸಿದ್ದರಾಮಯ್ಯನವರ ಹೆಸರು ಹೇಳುವ ಮೂಲಕ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದ್ದು ಅನೇಕರು ಪರ ಮತ್ತು ವಿರೋಧ ವ್ಯಕ್ತಪಡಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.