ಕಾಂಗ್ರೆಸ್ ಮುಳುಗುವ ಹಡಗು; ಪರಮೇಶ್ವರ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಸಿಎಂ ಬೊಮ್ಮಾಯಿ
ಕೊರಟಗೆರೆಯಲ್ಲಿ ವಿಜಯಸಂಕಲ್ಪ ರಥಯಾತ್ರೆ
Team Udayavani, Mar 16, 2023, 7:49 PM IST
ಕೊರಟಗೆರೆ: ಕಾಂಗ್ರೆಸ್ ಪಕ್ಷವು ಮುಳುಗುವ ಹಡಗಿನ ಪಕ್ಷವಾಗಿದ್ದು ಕರ್ನಾಟಕ ರಾಜ್ಯದಲ್ಲೂ ಅದನ್ನು ಮುಳುಗಿಸಿ ಬಿಜೆಪಿ ಪಕ್ಷದ ಕೈ ಬಲಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯಲ್ಲಿ ಪಾಲ್ಗೊಂಡು ಎಸ್.ಎಸ್.ಆರ್.ವೃತ್ತದಲ್ಲಿ ಮಾತನಾಡಿ, ದೇಶದಲ್ಲಿ ಬಿಜೆಪಿ ಪಕ್ಷದ ಕೇಂದ್ರದ ಆಡಳಿತ ಸುಭದ್ರವಾಗಿದೆ, ರಾಜ್ಯದಲ್ಲಿ ಬಿಜೆಪಿ ಪಕ್ಷ ಅಭಿವೃದ್ದಿಗಳ ಸಾಧನೆ ಮಾಡಿದೆ, ನೀವೆಲ್ಲರೂ ಬಿಜೆಪಿಯನ್ನು ಬೆಂಬಲಿಸಿ ಕಾಂಗ್ರೆಸ್ ನ್ನು ಸೊಲಿಸಿ, ಕಾಂಗ್ರೆಸ್ ಪಕ್ಷದವರು ಡಿ,ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯರವರ ಸಹಿಯ ಭರವಸೆಗಳನ್ನು ಗ್ಯಾರೆಂಟಿ ಕಾರ್ಡ್ ಗಳನ್ನು ಜನರಿಗೆ ನೀಡುತ್ತಿದ್ದು ಅದು ಕೇವಲ ವಿಸಿಟಿಂಗ್ ಕಾರ್ಡ್ ಆಗಿದೆ, ಕಾಂಗ್ರೆಸ್ ಪಕ್ಷವು ಜಾತಿ ಜಾತಿಗಳ ನಡುವೆ ಧರ್ಮಗಳ ನಡುವೆ ಒಡಕು ಉಂಟುಮಾಡುತ್ತಿದೆ, ಆದ್ದರಿಂದ ತಾವೆಲ್ಲರೂ ಬಿಜೆಪಿ ಪಕ್ಷಕ್ಕೆ ಮತ ನೀಡಿ ಮತ್ತೆ ಅಭಿವೃದ್ದಿ ಸರ್ಕಾರ ತನ್ನಿ ಎಂದರು.
ಡಾ.ಜಿ.ಪರಮೇಶ್ವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ
ಕೊರಟಗೆರೆ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಇಲ್ಲಿ ಅಭ್ಯರ್ಥಿಯಾಗಿದ್ದಾರೆ, ಅವರು ವಿರೋಧ ಪಕ್ಷದವರಿಗಿಂತ ಅವರ ಪಕ್ಷದವರ ಜೊತೆಯೇ ಹೋರಾಡುತ್ತಿದ್ದಾರೆ, 2013 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಿಸಿದ ಹಾಗೆ ಎಲ್ಲಿ ಮತ್ತೆ ಬಂದು ಸೋಲಿಸುತ್ತಾರೋ ಎಂದು ಕಾದುಕುಳಿತ್ತಿದ್ದಾರೆ, ಬಿಜೆಪಿ ಪಕ್ಷದ ಕಾರ್ಯಕರ್ತರೆ ನೀವುಗಳು ಡಾ.ಜಿ.ಪರಮೇಶ್ವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಅವರನ್ನು ಕಾಂಗ್ರೆಸ್ ನವರೇ ಸೋಲಿಸುತ್ತಾರೆ, ನೀವು ಜನರ ಬಳಿ ಹೋಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಮತ ಕೇಳಿ ಗೆಲ್ಲಿಸಿಕೊಳ್ಳಿ, ಕೊರಟಗೆರೆ ಕ್ಷೇತ್ರಕ್ಕೂ ಸಹ ಬಿಜೆಪಿ ಸರ್ಕಾರ ಅಭಿವೃದ್ದಿಗೆ ಹಣ ನೀಡಿದೆ ಎಂದರು.
ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಬಿಜೆಪಿಗೆ ನೀವು ಮತ್ತೆ ಅಧಿಕಾರ ನೀಡಿದರೆ ಅದು ಪವರ್‌ಪುಲ್ ಡಬಲ್ ಇಂಜಿನ್ ಸರ್ಕಾರವಾಗುತ್ತದೆ, ಕಾಂಗ್ರೆಸ್ ಪಕ್ಷವು ಸುಳ್ಳಿನ ಕಂತೆಯ ಪಕ್ಷವಾಗಿದೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಿಂದ ಪ್ರಧಾನಿ ನರೇಂದ್ರಮೋದಿ ಕಳುಹಿಸುತ್ತಿದ್ದ ಅಕ್ಕಿಗೆ ಅವರ ಸೀಲ್ ಹಾಕಿ 7 ಕೆ.ಜಿ.ನೀಡುತ್ತಿದ್ದರು, ಆಗ 10 ಕೆ.ಜಿ.ಅಕ್ಕಿ ಕೊಡಲು ಕೈಲಾಗದವರು ಈಗ ಕೊಡುತ್ತೀನಿ ಅಂತ ಸುಳ್ಳು ಹೇಳುತ್ತಿದ್ದಾರೆ, ಡಿ,ಕೆ.ಶಿವಕುಮಾರ್ ಇಂಧನ ಸಚಿರಾಗಿದ್ದಾಗ ಎಕೆ ಉಚಿತ ವಿದ್ಯುತ್ ಜನರಿಗೆ ನೀಡಲಿಲ್ಲ, ಈಗ ಕುಟುಂಬಕ್ಕೆ200 ಯೂನಿಟ್ ಎಂದು ಸುಳ್ಳು ಹೇಳುತ್ತಿದ್ದಾರೆ, ಇಂತಹ ಸುಳ್ಳುಗಾರರ ಪಕ್ಷ ಅಧಿಕಾರಕ್ಕೆ ಬರಬೇಕಾ ಹೇಳಿ ಎಂದರು.
ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಸಚಿವ ಬಿ.ಸಿ.ನಾಗೇಶ್, ಸಂಸದ ಜಿ.ಎಸ್.ಬಸವರಾಜು, ಮಾಜಿ ಶಾಸಕ ಗಂಗಹನುಮಯ್ಯ, ಬಿಜೆಪಿ ಮಧುಗಿರಿ ಜಿಲ್ಲಾ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮಂಡಲ ಅಧ್ಯಕ್ಷ ಪವನ್‌ಕುಮಾರ್, ಸಂಚಾಲಕ ಪಾವಗಡ ರವಿಕುಮಾರ್, ಮುಖಂಡರುಗಳಾದ ಡಾ.ಲಕ್ಷ್ಮ್ಮೀಕಾಂತ್, ಅನಿಲ್‌ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.