ಕಾಂಗ್ರೆಸ್ ನಾಯಕರು ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ : ಸಿ.ಟಿ.ರವಿ ಕಿಡಿ
ಅಂಬೇಡ್ಕರ್ ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಯ ಪರವಿದ್ದರು....
Team Udayavani, Jan 7, 2023, 4:43 PM IST
ಮೈಸೂರು : ಬಿಜೆಪಿ ಎಂದೂ ಕೂಡ ದಲಿತರ ವಿರೋಧಿಯಾಗಿಲ್ಲ ಆದರೂ ಕಾಂಗ್ರೆಸ್ ನಾಯಕರು ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಲಲಿತಮಹಲ್ ಪ್ಯಾಲೇಸ್ ನಲ್ಲಿ ನಡೆದ ಬಿಜೆಪಿ ಎಸ್ ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡು ಬಂದಿತ್ತು. ದಲಿತರ ಉದ್ಧಾರ ಮಾಡಲು ಕಾಂಗ್ರೆಸ್ ಮುಂದಾಗಲಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ಸಿಗರು. ಅಂಬೇಡ್ಕರ್ ಬದುಕಿದ್ದಷ್ಟು ದಿನ ಅವರನ್ನು ಕಾಂಗ್ರೆಸ್ ನಿರಂತರವಾಗಿ ತುಳಿಯುವ ಕೆಲಸ ಮಾಡಿತು.ಅವರ ನಿಧನಾನಂತರ ದಲಿತರ ಓಟ್ ಗಾಗಿ ಅಂಬೇಡ್ಕರ್ ಗುಣಗಾನ ಮಾಡಲಾರಂಭಿಸಿತು ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಎಂದೂ ಕೂಡ ದಲಿತರ ವಿರೋಧಿಯಾಗಿಲ್ಲ.ಅಂಬೇಡ್ಕರ್ ಗೆ ಅಪಮಾನ ಆಗುವ ರೀತಿ ಬಿಜೆಪಿ ನಡೆದುಕೊಂಡಿಲ್ಲ. ದಲಿತರ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದಲಿತರ ಉದ್ಧಾರಕ್ಕಾಗಿ ಬಿಜೆಪಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ತುಷ್ಟೀಕರಣ ರಾಜಕೀಯ ಮಾಡುತ್ತಿರುವವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಯ ಪರವಿದ್ಧರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಹ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಯತ್ನಿಸಿದ್ಧರು ಎಂದು ಹೇಳಿದರು.
ನಾನು ಸಿ.ಟಿ. ರವಿ, ಸ್ಯಾಂಟ್ರೋ ರವಿ ಯಾರೋ ಗೊತ್ತಿಲ್ಲ
ಸ್ಯಾಂಟ್ರೋ ರವಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಗ ಯಾರು ಎಲ್ಲಿ ಬೇಕಾದರೂ ಯಾರ ಜೊತೆಗೆ ಬೇಕಾದರೂ ಪೋಟೊ ತೆಗೆಸಿಕೊಳ್ತಾರೆ. ಸಾರ್ವಜನಿಕ ಜೀವನದಲ್ಲಿ ಇರುವವರು ಹೋದ ಕಡೆಯೆಲ್ಲ ಸೆಲ್ಪಿಗೆ ಫೋಸ್ ಕೊಟ್ಟಿರ್ತಾರೆ.ಪೋಟೊ ತೆಗೆಸಿಕೊಂಡವರ ಜೊತೆಗೆಲ್ಲ ಸಂಬಂಧ ಕಲ್ಪಿಸುವುದು ಸರಿಯಲ್ಲ.ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಐಎಂಎ ಹಗರಣದ ಎ ಒನ್ ಆರೋಪಿ ಜೊತೆ ಕುಮಾರಸ್ವಾಮಿ ಪೋಟೊ ತೆಗೆಸಿಕೊಂಡಿದ್ದಾರೆ.ಹಾಗಂತ ಕುಮಾರಸ್ವಾಮಿ ಅವರನ್ನು ಐಎಂಎ ಹಗರಣದ ಎ ಟು ಆರೋಪಿ ಎನ್ನಲಾಗುತ್ತಾ ಎಂದು ಪ್ರಶ್ನಿಸಿದರು.
ಹಲವು ಸಚಿವರು ಶಾಸಕರು ತಮಗೆ ಸಂಬಂಧಿಸಿದ ಆಕ್ಷೇಪಾರ್ಹ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಪಕ್ಷ ನಾಯಕರುಗಳು ಕೂಡ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಯಾವ್ಯಾವ ವಿಚಾರಕ್ಕೆ ತಡೆಯಾಜ್ಞೆ ತಂದಿದ್ದಾರೋ ಗೊತ್ತಿಲ್ಲ ಎಂದರು.
ಬಿಜೆಪಿ ಹಳೇ ಮೈಸೂರು ಭಾಗ ಹೊರತು ಪಡಿಸಿ ರಾಜ್ಯದ ಉಳಿದೆಡೆ ಪ್ರಬಲವಾಗಿದೆ. ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ 59 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 15-20 ಸ್ಥಾನಗಳಿಗೆ ಸೀಮಿತವಾಗುತ್ತಿದೆ. ಹಾಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ 59 ಕ್ಷೇತ್ರಗಳನ್ನೂ ಗೆಲ್ಲಲು ಪ್ರಯತ್ನಿಸುತ್ತೇವೆ. ಅಂತಿಮವಾಗಿ ಮತದಾರರೇ ಮಾಲಕರು, ಅವರು ನಿರ್ಣಯಿಸಿ ತೀರ್ಪು ನೀಡಬೇಕಿದೆ. ನಾವು ಯಾವುದೇ ಪಕ್ಷದ ಪ್ರಾಬಲ್ಯವನ್ನು ಮುರಿಯಲು ಬಂದಿಲ್ಲ, ನಾವು ಬೆಳೆಯಲು ಬಂದಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.