ರಾಷ್ಟ್ರ ಧ್ವಜ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ : ವಿವಾದಕ್ಕೆ ಕಾರಣ
ಅಹೋರಾತ್ರಿ ಧರಣಿಗೆ ಮುಂದಾದ ಕಾಂಗ್ರೆಸ್
Team Udayavani, Feb 16, 2022, 5:15 PM IST
ಬೆಂಗಳೂರು :ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ರಾಷ್ಟ್ರ ಧ್ವಜ ಪ್ರದರ್ಶಿಸಿ ಪ್ರತಿಭಟನೆ ನಡೆಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಸದನದ ನಿಯಮಾವಳಿಗಳನ್ನು ಉಲ್ಲಂಘಿಸಿ ಕಾಂಗ್ತೆಸ್ ಶಾಸಕರು ರಾಷ್ಟ್ರ ಧ್ವಜವನ್ನು ಭಿತ್ತಿಪತ್ರದ ರೂಪದಲ್ಲಿ ಬಳಕೆ ಮಾಡಿರುವುದು ಈಗ ತೀವ್ರ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಸ್ಪೀಕರ್ ಕಾಗೇರಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಕಲಾಪವನ್ನು ಗುರುವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಕಾಂಗ್ರೆಸಿಗರು ಧ್ವಜವನ್ನು ಹೋರಾಟಕ್ಜೆ ಬಳಸಿಕೊಂಡ ಬಗ್ಗೆ ಸಚಿವ ಸುನೀಲ್ ಕುಮಾರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲೂ ಈ ಬಗ್ಗೆ ಕಿಡಿಕಾರಿದೆ.
ಏನಿದು ಗಲಾಟೆ ?
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ನಡೆಸಿದ ಕಾಂಗ್ರೆಸ್ ಪ್ರತಿಭಟನೆ ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ಇದರ ಮುಂದುವರಿದ ಭಾಗವಾಗಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಈ ಅಚಾತುರ್ಯ ಎಸಗಿದೆ.
ಸಿಎಲ್ ಪಿಯಲ್ಲೇ ವಿರೋಧ
ರಾಷ್ಟ್ರ ಧ್ವಜವನ್ನು ಸದನಕ್ಕೆ ಕೊಂಡೊಯ್ಯುವುದು ಬೇಡ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೇ ಅಭಿಪ್ರಾಯ ವ್ಯಕ್ತವಾಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಹಿರಿಯ ನಾಯಕರ ಅಭಿಪ್ರಾಯವನ್ನು ಲೆಕ್ಕಿಸದೇ ಕಾಂಗ್ರೆಸ್ ಶಾಸಕರು ನಡೆಸಿದ ಪ್ರತಿಭಟನೆ ಈಗ ತಿರುಗು ಬಾಣವಾಗಿದೆ.
ಅಹೋರಾತ್ರಿ ಧರಣಿಗೆ ಮುಂದಾದ ಕಾಂಗ್ರೆಸ್
ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.