ಭಾರತ ಐಕ್ಯತಾ ಯಾತ್ರೆಗೆ ಕಾಂಗ್ರೆಸ್ ಆಭಾರಿ: ಸಿದ್ದರಾಮಯ್ಯ
Team Udayavani, Jan 3, 2023, 9:21 PM IST
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ 3 ಸಾವಿರ ಕಿ.ಮೀ. ದೂರ ಕ್ರಮಿಸಿ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಐತಿಹಾಸಿಕ ಪಯಣದಲ್ಲಿ ನಮ್ಮ ಜೊತೆಯಾದ ಸಮಸ್ತ ಭಾರತೀಯರಿಗೆ ಕಾಂಗ್ರೆಸ್ ಪಕ್ಷ ಆಭಾರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಭಾರತ ಐಕ್ಯತಾ ಯಾತ್ರೆಯ ಆರಂಭದ ದಿನಗಳಲ್ಲಿ ಬಿಜೆಪಿಯವರು ನಡೆಸಿದ ವ್ಯವಸ್ಥಿತ ಅಪಪ್ರಚಾರ, ತೇಜೋವಧೆ, ಅವಮಾನ ಇವುಗಳನ್ನೇ ಯಾತ್ರೆಯ ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಿಕೊಂಡ ರಾಹುಲ್ ಗಾಂಧಿ ಅವರ ಸಂಯಮ, ಬದ್ಧತೆ ಮತ್ತು ಇಚ್ಛಾಶಕ್ತಿಗೆ ನನ್ನದೊಂದು ಸಲಾಂ ಎಂದಿದ್ದಾರೆ.
ರಾಹುಲ್ ಗಾಂಧಿ ಅವರು ಈ ಯಾತ್ರೆಯಲ್ಲಿ ಸಾಮಾನ್ಯರಲ್ಲಿ ಸಾಮಾನ್ಯರಾಗಿ, ನೊಂದವರಿಗೆ ಭರವಸೆಯಾಗಿ, ಅನ್ನದಾತನಿಗೆ ಹೆಗಲಾಗಿ, ಯುವಕರಿಗೆ ಆಶಾಕಿರಣವಾಗಿ, ಎಲ್ಲರೊಳಗೊಬ್ಬರಾಗಿ ಹೆಜ್ಜೆಹಾಕಿದ್ದು ಅವರ ನೈಜ ವ್ಯಕ್ತಿತ್ವವನ್ನು ಜಗದೆದುರು ಅನಾವರಣಗೊಳಿಸಿದೆ.
ಒಡೆದಿರುವ ಮನೆ ಮನಗಳನ್ನು ಒಂದುಗೂಡಿಸುವ ಸದುದ್ದೇಶದ ಭಾರತ ಐಕ್ಯತಾ ಯಾತ್ರೆ ತನ್ನ ಗುರಿಯನ್ನು ತಲುಪುವುದರಲ್ಲಿ ಯಾವ ಸಂದೇಹವೂ ಇಲ್ಲ. ಇಂಥದ್ದೊಂದು ಲೋಕಕಲ್ಯಾಣದ ಕಾರ್ಯಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ರಾಹುಲ್ ಗಾಂಧಿ ಅವರಿಗೆ ಸಮಸ್ತ ಭಾರತೀಯರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.