ಮಾರ್ಚ್ 9ರ 2 ಗಂಟೆ ಅವಧಿಯ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆದ ಕಾಂಗ್ರೆಸ್
Team Udayavani, Mar 8, 2023, 1:29 PM IST
ಬೆಂಗಳೂರು:ಬಿಜೆಪಿ ಸರಕಾರದ ಭ್ರಷ್ಟಾಚಾರ ವಿರುದ್ಧ ಗುರುವಾರ (ಮಾರ್ಚ್ 09) 2ಗಂಟೆಗಳ ಕಾಲದ ಕರ್ನಾಟಕ ಬಂದ್ ಕರೆಯನ್ನು ವಾಪಸ್ ಪಡೆದಿರುವುದಾಗಿ ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ತಿಳಿಸಿದೆ.
ಇದನ್ನೂ ಓದಿ:ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಮುಂಬೈ ಕರಾವಳಿ ಪ್ರದೇಶ ಸಮೀಪ ತುರ್ತು ಸ್ಪರ್ಶ
ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದೆ.
ಕೆಪಿಸಿಸಿಯಿಂದ ನಾಳೆಗೆ ಕರೆ ನೀಡಿದ್ದ ಕರ್ನಾಟಕ ಬಂದ್ನ್ನು ಹಿಂಪಡೆಯಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ – ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ.
ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು.
– @RLR_BTM pic.twitter.com/x3wmep7Ds6— Karnataka Congress (@INCKarnataka) March 8, 2023
ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ ಶೇ.40 ಕಮಿಷನ್ ವಿರುದ್ಧ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11ಗಂಟೆವರೆಗೆ ಬಂದ್ ನಡೆಸುವಂತೆ ಕಾಂಗ್ರೆಸ್ ಕರೆ ಕೊಟ್ಟಿತ್ತು. ಅಲ್ಲದೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಬಲವಂತದ ಬಂದ್ ಮಾಡುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿತ್ತು.
ಏತನ್ಮಧ್ಯೆ ಕಾಂಗ್ರೆಸ್ ಪಕ್ಷದ 2ಗಂಟೆಗಳ ಕಾಲದ ಬಂದ್ ಕರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ಎಲ್ಲಿಯಾದರೂ ಈ ರೀತಿಯ ಬಂದ್ ಆಚರಣೆ ಕೇಳಿದ್ದೀರಾ? ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜನಸಾಮಾನ್ಯರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.