PM ಮೋದಿ ನೇತೃತ್ವದಲ್ಲೇ ರಾಮಮಂದಿರ ಪ್ರಾಣಪ್ರತಿಷ್ಠಾಪನೆ: ಜ.22ಕ್ಕೆ ರಾಮಮಂದಿರ ಉದ್ಘಾಟನೆ?
ಮಂದಿರ ನಿರ್ಮಾಣ ಟ್ರಸ್ಟ್ ಆಹ್ವಾನದ ನಡುವೆಯೇ ಉ.ಪ್ರ. ಮುಖ್ಯಮಂತ್ರಿ ಯೋಗಿ ಘೋಷಣೆ
Team Udayavani, Jun 16, 2023, 7:38 AM IST
ಅಯೋಧ್ಯೆ: ಮುಂದಿನ ವರ್ಷ ಜನವರಿಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ನಡೆಯಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್, ಜ.22ರಂದು ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳುವಂತೆ ಮೋದಿಗೆ ಆಹ್ವಾನ ನೀಡಿದೆ ಎಂಬ ವರದಿಗಳ ನಡುವೆಯೇ ಯೋಗಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಹಾಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅವರು ಈ ಮಾಹಿತಿ ನೀಡಿದ್ದಾರೆ. ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದ ಮೋದಿ, ಈಗ ಉದ್ಘಾಟನೆಯಲ್ಲೂ ಮುಖ್ಯ ಪಾತ್ರವಹಿಸಲಿದ್ದಾರೆ ಎನ್ನುವುದು ಖಚಿತವಾಗಿದೆ. ಆದರೆ ಪ್ರಧಾನಿ ಕಾರ್ಯಾಲಯ ಇನ್ನೂ ಅಧಿಕೃತವಾಗಿ ಆಹ್ವಾನಕ್ಕೆ ಪ್ರತಿಕ್ರಿಯೆ ನೀಡಿಲ್ಲ.
ಯೋಗಿ ಹೇಳಿದ್ದೇನು?: 500 ವರ್ಷಗಳ ನಂತರ ರಾಮಲಲ್ಲಾ ತನ್ನ ಮಂದಿರಕ್ಕೆ ವಾಪಸ್ ಮರಳುತ್ತಿದ್ದಾನೆ. ಇದು ಇಡೀ ಜಗತ್ತನ್ನೇ ಆಕರ್ಷಿಸುತ್ತಿದೆ. ಮಂದಿರ ಉದ್ಘಾಟನೆಗೂ ಮುನ್ನ ಅಯೋಧ್ಯೆಯಲ್ಲಿ 21 ಲಕ್ಷ ದೀಪಗಳನ್ನು ಬೆಳಗಲಾಗುತ್ತದೆ. ಅಯೋಧ್ಯೆ ಈಗ ಕೇವಲ ರಾಮರಾಜ್ಯವಾಗುತ್ತಿಲ್ಲ. ಬದಲಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಡೀ ದೇಶವನ್ನೇ ಪ್ರಭಾವಿಸುತ್ತಿದೆ. ಮತ್ತೂಮ್ಮೆ ಅಯೋಧ್ಯೆ ಮರಳಿ ತ್ರೇತಾಯುಗವನ್ನು ನೆನಪಿಸುತ್ತಿದೆ. ಅಯೋಧ್ಯೆ ಶಾಸಕ ಮತ್ತು ಪ್ರಜೆಗಳ ನಡುವಿನ ಸಂಬಂಧ ಹೇಗಿರಬೇಕೆಂದು ನಮಗೆ ತಿಳಿಸುತ್ತದೆ ಎಂದು ಯೋಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.