ಸಿದ್ದಲಿಂಗಯ್ಯ ಸ್ಮಾರಕ ನಿರ್ಮಾಣ ಕುರಿತು ಶೀಘ್ರದಲ್ಲೇ ನಿರ್ಧಾರ : ಸಚಿವ ಅರವಿಂದ ಲಿಂಬಾವಳಿ
Team Udayavani, Jun 30, 2021, 8:38 PM IST
ಬೆಂಗಳೂರು : ಇತ್ತೀಚೆಗೆ ನಿಧನರಾದ ಕವಿ, ನಾಡೋಜ ಡಾ. ಸಿದ್ದಲಿಂಗಯ್ಯ ಅವರ ಸ್ಮಾರಕ ನಿರ್ಮಾಣ ದ ಬಗ್ಗೆ ಶೀಘ್ರದಲ್ಲೇ ಸನ್ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಬುಧವಾರ ದಿ. ಡಾ. ಸಿದ್ದಲಿಂಗಯ್ಯ ಅವರ ಮನೆಗೆ ಸಚಿವರು ಭೇಟಿ ಕೊಟ್ಟು ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕುಟುಂಬ ಸದಸ್ಯರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು ಈ ಭರವಸೆ ನೀಡಿದರು.
ನಂತರ ಮಾತನಾಡಿದ ಅವರು ಸಿದ್ದಲಿಂಗಯ್ಯ ಅವರು ಇಡೀ ಕರ್ನಾಟಕದ ಆಸ್ತಿ ಅವರು ನೀಡಿದ ಕೊಡುಗೆ ಈನಾಡು ಮರೆಯುವಂತಿಲ್ಲ ಅವರು ನನ್ನೊಂದಿಗೆ ಅತ್ಯಂತ ಆತ್ಮೀಯ ಸಂಬಂಧ ಹೊಂದಿದ್ದರು, ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಪರಿಶಿಷ್ಟ ಜಾತಿ ವರ್ಗದವರ ಹೊಸ ಲೇಖಕರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರೊಂದಿಗೆ ಭಾಗವಹಿಸಿದ್ದೆ, ಅದೇ ಅವರ ಕಡೆಯ ಕಾರ್ಯಕ್ರಮ ಎಂದು ಅವರು ತಿಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸಿದ್ದಲಿಂಗಯ್ಯ ಅವರ ಸ್ಮಾರಕ ನಿರ್ಮಿಸುವುದು, ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿದ್ದಲಿಂಗಯ್ಯ ನವರ ಕುಟುಂಬ ನಮಗೆ ಸಲ್ಲಿಸಿದೆ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ :ಮಂಡ್ಯ : ಕಟುಕರ ಕೈಯಿಂದ ರಕ್ಷಿಸಲ್ಪಟ್ಟ 11 ಒಂಟೆಗಳು ಮರಳಿ ರಾಜಸ್ಥಾನಕ್ಕೆ ವಾಪಾಸ್
ಸಿದ್ದಲಿಂಗಯ್ಯನವರ ಪತ್ನಿ ರಮಾಕುಮಾರಿ, ಪುತ್ರಿ ಡಾ. ಮಾನಸ, ಅಳಿಯ ಡಾ. ಗಿರೀಶ್ ಮತ್ತು ಅವರ ಸಹೋದರ ಶಿವಶಂಕರ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು .
ಸಿದ್ದಲಿಂಗಯ್ಯ ಅವರ ಪುಸ್ತಕಗಳ ಸಂಗ್ರಹವನ್ನು ವೀಕ್ಷಿಸಿದ ಸಚಿವರಿಗೆ ಅವರ ಕುಟುಂಬದವರು ಇತ್ತೀಚಿನ ಅವರ ಪ್ರಕಟಿತ ಪುಸ್ತಕಗಳನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.