ಜಿಎಸ್‌ಟಿ ವಿನಾಯಿತಿ ವಿಸ್ತರಿಸಲು ಚಿಂತನೆ: ಸಿಎಂ ಬೊಮ್ಮಾಯಿ
Team Udayavani, Dec 18, 2022, 6:30 AM IST
ಬೆಂಗಳೂರು: ಸರಕಾರಿ ಇಲಾಖೆಗಳಿಗೆ ನೀಡುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿನಾಯಿತಿಯನ್ನು ಅಂಗಸಂಸ್ಥೆಗಳಿಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ವಾಣಿಜ್ಯ ತೆರಿಗೆ ಆಯುಕ್ತರ ಕಚೇರಿಯಲ್ಲಿ ಶನಿವಾರ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ವಿವಿಧ ಇಲಾಖೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಸೌಲಭ್ಯವನ್ನು ಬಿಬಿಎಂಪಿ, ಜಲಮಂಡಳಿ, ವಿದ್ಯುತ್ ಸರಬರಾಜು ಕಂಪೆನಿಗಳಂತಹ ಸರಕಾರದ ಅಂಗಸಂಸ್ಥೆಗಳಿಗೂ ವಿಸ್ತರಿಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.
ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ಈಗಾಗಲೇ ಕಲಂ 243 ಜಿ ಮತ್ತು ಡಬ್ಲ್ಯೂ ನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ತೆರಿಗೆ ವಿನಾಯಿತಿ ಅವಕಾಶ ಇದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮತ್ತು ಯಾವ ಸೇವೆಗಳಿಗೆ ವಿಸ್ತರಿಸಬೇಕು ಎಂಬ ಬಗ್ಗೆ ಚಿಂತಿಸಲಾಗುವುದು. ಈ ಸಂಬಂಧ ತಿದ್ದುಪಡಿ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಅದೇ ರೀತಿ ಜಿಎಸ್‌ಟಿ ರಚನೆಯಾಗಿ ನಾಲ್ಕು ವರ್ಷಗಳು ಕಳೆದಿದ್ದು, ಇನ್ನೂ ಮೇಲ್ಮನವಿ ನ್ಯಾಯಮಂಡಳಿ ರಚನೆ ಆಗಿಲ್ಲ. ಇದರಿಂದ ಜಿಎಸ್‌ಟಿಗೆ ಸಂಬಂಧಿಸಿದ ಪ್ರಕರಣಗಳು ಹೈಕೋರ್ಟ್‌ಗೆ ಹೋಗುತ್ತಿವೆ.
ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಮೇಲ್ಮನವಿ ನ್ಯಾಯಮಂಡಳಿ ರಚಿಸುವ ವಿಚಾರ ಸಬೆಯಲ್ಲಿ ಪ್ರಸ್ತಾವವಾಯಿತು. ಇದರ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಇದರಿಂದ ಪ್ರಕರಣಗಳ ಇತ್ಯರ್ಥ ತ್ವರಿತವಾಗುತ್ತವೆ. ಜತೆಗೆ ನಮಗೆ (ಸರಕಾರಕ್ಕೆ) ಆದಾಯವೂ ಬರುತ್ತದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
MUST WATCH
ಹೊಸ ಸೇರ್ಪಡೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.