ಮುಂದುವರಿದ ಭಾರೀ ಮಳೆ- ಹಿಮಾಚಲ, ಉತ್ತರಾಖಂಡದಲ್ಲಿ ದಿಢೀರ್ ಪ್ರವಾಹ
-ಯಮುನೆಗೆ ಮತ್ತೆ ಪ್ರವಾಹ ಭೀತಿ
Team Udayavani, Jul 23, 2023, 7:19 AM IST
ನವದೆಹಲಿ: ಮಹಾರಾಷ್ಟ್ರ, ಗುಜರಾತ್, ಉತ್ತರಾಖಂಡ, ಹಿಮಾಚಲ ಪ್ರದೇಶ, ತೆಲಂಗಾಣ, ಒಡಿಶಾ ಸೇರಿದಂತೆ 9ಕ್ಕೂ ಹೆಚ್ಚು ರಾಜ್ಯಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ. ಉತ್ತರಾಖಂಡ ಹಾಗೂ ಹಿಮಾಚಲದಲ್ಲಿ ಭೂಕುಸಿತ ಹಾಗೂ ದಿಢೀರ್ ಪ್ರವಾಹ ಉಂಟಾಗಿದೆ. ಹರ್ಯಾಣದ ಹತ್ನಿಕುಂಡ ಬ್ಯಾರೇಜ್‌ನಿಂದ ಭಾರೀ ನೀರನ್ನು ಬಿಡುಗಡೆ ಮಾಡಲಾಗಿದ್ದು, ಪರಿಣಾಮವಾಗಿ ಯಮುನಾ ನದಿ ಮತ್ತೆ ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದೆ. ಹೀಗಾಗಿ, ದೆಹಲಿಗೆ ಮತ್ತೂಮ್ಮೆ ಪ್ರವಾಹ ಭೀತಿ ಆರಂಭವಾಗಿದೆ.
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪುರೋಲಾ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಉಂಟಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲವಾದರೂ ಅಪಾರ ಪ್ರಮಾಣದ ಹಾನಿ ವರದಿಯಾಗಿದೆ. ಹಲವಾರು ಮನೆಗಳು ಮತ್ತು ರಸ್ತೆಗಳು ಹಾನಿಗೀಡಾಗಿವೆ. ಉತ್ತರಕಾಶಿಯ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಹಲವಾರು ವಾಹನಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಲಕಾನಂದ ನದಿ ಅಪಾಯದ ಮಟ್ಟ ತಲುಪಿದೆ.
ಈ ನಡುವೆ, ಜಮ್ಮುವಿನ ಬನಿಹಾಲ್‌ನಿಂದ ಕಾಶ್ಮೀರಕ್ಕೆ ಹೊರಟಿದ್ದ ಸುಮಾರು 3 ಸಾವಿರ ಅಮರನಾಥ ಯಾತ್ರಿಕರ ತಂಡವನ್ನು ರಾಮ್‌ಬನ್‌ನಲ್ಲೇ ನಿಲ್ಲಿಸಲಾಗಿದೆ. ಮಳೆಯಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಕಾರಣ, ಯಾತ್ರೆಗೆ ತಾತ್ಕಾಲಿಕ ತಡೆ ನೀಡಲಾಗಿದೆ.
ಹಿಮಾಚಲಕ್ಕೆ ಕೇಂದ್ರ ತಂಡ
ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಪ್ರವಾಹ ಪರಿಸ್ಥಿತಿ ಪರಿಶೀಲನೆ ಹಾಗೂ ನಷ್ಟ ಅಂದಾಜಿಗಾಗಿ ಕೇಂದ್ರ ಸರ್ಕಾರವು ಅಧಿಕಾರಿಗಳ ಮೂರು ತಂಡವನ್ನು ರಾಜ್ಯಕ್ಕೆ ಕಳುಹಿಸಿಕೊಡಲಿದೆ. ಹವಾಮಾನ ಇಲಾಖೆಯು ರಾಜ್ಯಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಜು.25ರವರೆಗೂ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಲಡಾಖ್‌ನ ಲೇಹ್ ನಗರದಲ್ಲಿ ದಿಢೀರ್ ಪ್ರವಾಹ ಉಂಟಾಗಿ, ಅನೇಕ ಪ್ರದೇಶಗಳು ಮುಳುಗಡೆಯಾಗಿವೆ. ಶಿಮ್ಲಾದಲ್ಲಿ ವೃದ್ಧ ದಂಪತಿ ಮತ್ತು ಅವರ ಮೊಮ್ಮಗ ಪ್ರವಾಹದಲ್ಲಿ ಕೊಚ್ಚಿಹೋಗಿದ್ದು, ಮೂವರೂ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
45 ಪ್ರಯಾಣಿಕರ ರಕ್ಷಣೆ
ಉತ್ತರಪ್ರದೇಶ-ಉತ್ತರಾಖಂಡ ಗಡಿಯಲ್ಲಿ ಬರುವ ಮಂಡವಾಲಿಯಲ್ಲಿ ಕೊಟವಾಲಿ ನದಿ ನೀರಿನ ಪ್ರವಾಹದಲ್ಲಿ ಸರ್ಕಾರಿ ಬಸ್‌ವೊಂದು ಕೊಚ್ಚಿಹೋಗಿದ್ದು, ಅದರಲ್ಲಿದ್ದ ಎಲ್ಲ 45 ಪ್ರಯಾಣಿಕರನ್ನೂ ರಕ್ಷಿಸಲಾಗಿದೆ. ನಂತರ ಭಾರೀ ಯಂತ್ರಗಳ ನೆರವಿನಿಂದ ಬಸ್ಸನ್ನೂ ಮೇಲಕ್ಕೆತ್ತಲಾಗಿದೆ. ಇನ್ನು, ಗುಜರಾತ್‌ನ ಜುನಾಗಢದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ರಾಜಸ್ಥಾನದ 114 ಡ್ಯಾಂಗಳು ಭರ್ತಿಯಾಗಿವೆ. ಒಡಿಶಾದಲ್ಲಿ ಮುಂದಿನ 2 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾವತ್ಮಲ್‌ನಲ್ಲಿ 2 ಸಾವು; 45 ಮಂದಿಯ ರಕ್ಷಣೆ
ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಪಾಲರ್, ಥಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಯಾವತ್ಮಾಲ್ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಮನೆಯೊಂದರ ಗೋಡೆ ಕುಸಿದು ಇಬ್ಬರು ಸಾವಿಗೀಡಾಗಿದ್ದಾರೆ.
ಮಹಾಗಾಂವ್‌ನಲ್ಲಿ 45ಕ್ಕೂ ಅಧಿಕ ಮಂದಿ ಪ್ರವಾಹದಲ್ಲಿ ಸಿಲುಕಿದ್ದಾರೆ. ಇವರನ್ನು ವಾಯುಪಡೆ ಕಾಪ್ಟರ್‌ಗಳ ಮೂಲಕ ರಕ್ಷಿಸಲಾಗಿದೆ. ಶನಿವಾರ ಬೆಳಗ್ಗೆಯೇ ಸುರಿದ ಧಾರಾಕಾರ ಮಳೆಯಿಂದ ಮುಂಬೈನ ಕುರ್ಲಾ, ಚೆಂಬೂರು ಮತ್ತು ಅಂಧೇರಿಯಲ್ಲಿ ರಸ್ತೆಗಳು, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಇದೇ ವೇಳೆ, ಬುಧವಾರ ರಾತ್ರಿ ಭೂಕುಸಿತಕ್ಕೆ ಸಾಕ್ಷಿಯಾದ ಇರ್ಶಲ್‌ವಾಡಿ ಗ್ರಾಮದಲ್ಲಿ ಶೋಧ ಕಾರ್ಯ ಶನಿವಾರವೂ ಮುಂದುವರಿದಿದೆ. ಈವರೆಗೆ ಒಟ್ಟು 26 ಮಂದಿಯ ಮೃತದೇಹ ಪತ್ತೆಯಾಗಿದೆ. ಇನ್ನೂ 86 ಮಂದಿ ನಾಪತ್ತೆಯಾಗಿದ್ದಾರೆ.
ಮಹಾಕಾಲ ಜಲಾವೃತಗೊಂಡಿಲ್ಲ: ಜಿಲ್ಲಾಧಿಕಾರಿ
ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಲೇಶ್ವರ ದೇಗುಲ ಜಲಾವೃತಗೊಂಡಿದೆ ಎಂಬಂತಹ ವಿಡಿಯೊಗಳು ಸಾಮಾಜಿಕ ತಾಣಗಳಲ್ಲಿ ಓಡಾಡುತ್ತಿವೆ. ಆದರೆ ಹಾಗೆ ಆಗಿಲ್ಲ, ಇಂತಹ ಸುಳ್ಳು ಹಬ್ಬಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರತೀ ವರ್ಷದಂತೆ ಮಳೆಬಂದಿದೆ, ಹಾಗಾಗಿ ನಂದಿಮಂಟಪದಲ್ಲಿ ಸ್ವಲ್ಪ ನೀರು ಸೇರಿತ್ತು. ಅದನ್ನು ಹೊರಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.