Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ವಿಜಯೇಂದ್ರ ನೇತೃತ್ವದ ನಿಯೋಗ ಸಚಿನ್ ಪಂಚಾಳ್ ನಿವಾಸಕ್ಕೆ ಭೇಟಿ...ಸಿಬಿಐ ತನಿಖೆಯಾಗಲೇ ಬೇಕು
Team Udayavani, Dec 29, 2024, 7:15 PM IST
ಬೆಂಗಳೂರು: ಬೀದರ್ ಮೂಲದ ಸಿವಿಲ್ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿ ರಾಜ್ಯ ಬಿಜೆಪಿಯು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಮರ ಸಾರಿದೆ. ರವಿವಾರ(29) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಭಾಲ್ಕಿ ತಾಲೂಕಿನ ಕಟ್ಟಿ ತುಗಾಂವ ಗ್ರಾಮದ ಸಚಿನ್ ನಿವಾಸಕ್ಕೆ ಭೇಟಿ ನೀಡಿ ಸಂಕಷ್ಟ ಆಲಿಸಿ ಕುಟುಂಬಕ್ಕೆ ಸಾಂತ್ವನ ಹೇಳಿ ಮಾಹಿತಿ ಪಡೆದುಕೊಂಡಿದ್ದಾರೆ.
ಹೈದ್ರಾಬಾದ್ ನಿಂದ ನೇರವಾಗಿ ಕಟ್ಟಿತುಗಾಂವ್ ಗ್ರಾಮಕ್ಕೆ ಆಗಮಿಸಿದ ತಂಡ, ಸಚಿನ್ ಕುಟುಂಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಸಚಿನ್ ಆತ್ಮಹತ್ಯೆ ಮತ್ತು ಅದಕ್ಕೆ ಕಾರಣದ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದರು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಅವರ ಜತೆಗಿದ್ದರು.
ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ವಿಜಯೇಂದ್ರ, ನಾವು ಸಚಿನ್ ಆತ್ಮಹತ್ಯೆ ಪ್ರಕರಣವನ್ನ ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದೆ. ನಮ್ಮ ಮುಂದಿನ ಹೋರಾಟದ ಬಗ್ಗೆ ಒಂದೆರಡು ದಿನದಲ್ಲಿ ತೀರ್ಮಾನ ಹೇಳುತ್ತೇವೆ. ಸಚಿನ್ ಆತ್ಮಹತ್ಯೆ ಕೇಸ್ ಸಿಬಿಐ ತನಿಖೆಯಾಗಲೇ ಬೇಕು. ಅಲ್ಲಿಯವರೆಗೆ ಸುಮ್ಮನಿರುವುದಿಲ್ಲ ಎಂದು ಹೇಳಿದರು.
ಪ್ರಿಯಾಂಕಾ ಖರ್ಗೆ ಯಾರ ಮಗ ಅಂತಾ ನಿಮಗೆ ಗೊತ್ತಿದೆ. ಸಿಎಂ ಪ್ರಿಯಾಂಕಾ ಖರ್ಗೆಯನ್ನ ರಾಜೀನಾಮೆ ಪಡೆದರೆ ಸಿಎಂ ಸ್ಥಾನಕ್ಕೆ ಕುತ್ತು ಬರಬಹುದು ಎಂದ ವಿಜಯೇಂದ್ರ, ಪ್ರಿಯಾಂಕಾ ಖರ್ಗೆಯವರಿಗೆ ಕಲ್ಬುರ್ಗಿಯಲ್ಲಿ ಯಾರು ಬೆಳೆಯಬಾರದು. ಅವರು ಬೆಳೆದರೆ ಅವರನ್ನ ಕೊಲೆ ಮಾಡಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಕಿಡಿಕಾರಿದರು.
ಸಚಿನ್ ಕುಟುಂಬಸ್ಥರು ನಮಗೆ ರಕ್ಷಣೆ ಬೇಕು ಅಂತಾ ಕೇಳುತ್ತಿದ್ದಾರೆ. ಸರಕಾರ ಕುಟುಂಬಸ್ಥರಿಗೆ ಒಂದು ಕೋಟಿ ರೂಪಾಯಿ ಪರಿಹಾರ ಕೊಡಬೇಕು. ಸಚಿನಗೆ ಐದು ಜನ ಸಹೋದರಿಯರಿದ್ದು, ಅದರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಚಿನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ. ಆ ಬಳಿಕ ನಮ್ಮ ತಮ್ಮನ್ನ ಕಾಪಾಡಿ ಎಂದು ಸಹೋದರಿಯರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿದರು.
ಪ್ರಿಯಾಂಕಾ ಖರ್ಗೆ ಈ ಕೇಸ್ ನಲ್ಲಿ ಇದ್ದಾರೆಂದು ಪೊಲೀಸರು ದೂರು ತೆಗೆದುಕೊಳ್ಳಲಿಲ್ಲ. ಸಚಿನ್ ಆತ್ಮಹತ್ಯೆ ಕೇಸ್ ನಲ್ಲಿ ಬೆನ್ನಲುಬಾಗಿ ಪ್ರಿಯಾಂಕಾ ಇದ್ದಾರೆ. ಇನ್ನೂ ಮುಂದೆ ಅವರ ಹೆಸರು ಪ್ರಿಯಾಂಕಾ ಖರ್ಗೆಯಲ್ಲ ಅವರು ಸುಪಾರಿ ಖರ್ಗೆ ಎನ್ನಬೇಕು ಎಂದು ಜರಿದರು.
ಪರಿಹಾರ ಬೇಡ, ಸಾವಿಗೆ ನ್ಯಾಯ ಬೇಕು
ನಮಗೆ ಪರಿಹಾರದ ಹಣ ಬೇಡ, ನಮ್ಮ ಸಹೋದರನ ಸಾವಿಗೆ ನ್ಯಾಯಬೇಕು. ಅದಕ್ಕಾಗಿ ಸಿಬಿಐ ತನಿಖೆ ನಡೆಯಬೇಕು ಎಂದು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ಸಹೋದರಿಯರು ಆಗ್ರಹಿಸಿ ಸಚಿನ್ ಕುಟುಂಬಸ್ಥರು ಕಣ್ಣೀರಿಟ್ಟರು. ಬಿಜೆಪಿ ನಾಯಕರು ಪರಿಹಾರವನ್ನು ನೀಡಲು ಮುಂದಾದಾಗ ತಿರಸ್ಕರಿಸಿ, 4-5 ಬಾರಿ ಹಣ ನೀಡಲು ಮುಂದಾದರೂ ತಿರಸ್ಕರಿಸಿ ನಮ್ಮ ಮಗನಿಗೆ ನ್ಯಾಯ ಕೊಡಿಸಿ ಸಾಕು ಎಂದು ಆಗ್ರಹಿಸಿದರು.
ಖರ್ಗೆ ವಿರುದ್ಧ ವಾಗ್ದಾಳಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಅಧ್ಯಕ್ಷರ ಕುಟುಂಬಕ್ಕೆ ಸಂವಿಧಾನ ಅನ್ವಯಿಸುವುದಿಲ್ಲವೇ ಎಂದು ಪ್ರಶ್ನಿಸಿದೆ.
ತಿಪಕ್ಷದ ನಾಯಕ ಆರ್. ಅಶೋಕ್ ಅವರು ಕಿಡಿ ಕಾರಿ, ”ಆತ್ಮಹತ್ಯೆಗೆ ಖರ್ಗೆ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಕಾರಣ ಎಂದು ಆರೋಪಿಸಿದ್ದಾರೆ. ಅಂಬೇಡ್ಕರ್ ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ? ಎಲ್ಲರಿಗೂ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿ ನೈತಿಕತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.
ಸಚಿನ್ ಪಂಚಾಳ್ ಸಾವಿನಲ್ಲಿ ಖರ್ಗೆಯವರ ನಿಕಟವರ್ತಿಗಳ ಕೈವಾಡವಿದೆ ಎಂದು ಆರೋಪಿಸಿದರು.
ಖರ್ಗೆಯವರ ಆಪ್ತ ಸಹಾಯಕ ರಾಜು ಕಾಪನೂರ್ ಅವರ ಸಾವಿಗೆ ಕಾರಣ ಎಂದು ಸಚಿನ್ ಪಂಚಾಳ್ ಡೆತ್ ನೋಟ್ ನಲ್ಲಿ ಬರೆದಿದ್ದು ಹಣದ ವಿಚಾರವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಆರೋಪವನ್ನು ತಳ್ಳಿಹಾಕಿದ ಖರ್ಗೆ, ಡೆತ್ ನೋಟ್ ನಲ್ಲಿ ನನ್ನ ಹೆಸರನ್ನು ಉಲ್ಲೇಖಿಸಿಲ್ಲ ಮತ್ತು ಈ ಬಗ್ಗೆ ಪೊಲೀಸ್ ತನಿಖೆಗೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್ ನಗು
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.