ಸಂವಿಧಾನಿಕ ಮೌಲ್ಯಗಳ ಬಿತ್ತುವ ಕಾರ್ಯಕ್ಕೆ ಸಹಕಾರ ಇರಲಿ: ಬಸವರಾಜ ಹೊರಟ್ಟಿ
ಪಕ್ಷಾತೀತವಾಗಿ, ಜಾತ್ಯತೀತವಾಗಿ ಸಂವಿಧಾನದ ಆಶಯಕ್ಕೆ ಬದ್ಧನಾಗಿ ಶುದ್ಧ ಅಂತಃಕರಣದಿಂದ ಕೆಲಸ ಮಾಡುತ್ತೇನೆ
Team Udayavani, Dec 21, 2022, 4:38 PM IST
ಬೆಳಗಾವಿ ಸುವರ್ಣ ಸೌಧ:ವಿಧಾನ ಪರಿಷತ್ ಸಭಾಪತಿಯಾಗಿ ಸಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಕಾರ್ಯಕ್ಕೆ ಎಲ್ಲರ ಸಹಕಾರ ಇರಲಿ ಎಂದು ವಿಧಾನ ಪರಿಷತ್ ನ ನೂತನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹೇಳಿದರು.
ಬುಧವಾರ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆ ಆದ ನಂತರ ಅವರು ಮಾತನಾಡಿ, ಸಭಾಪತಿಯಾಗಿ ಪಕ್ಷಾತೀತವಾಗಿ, ಜಾತ್ಯತೀತವಾಗಿ ಸಂವಿಧಾನದ ಆಶಯಕ್ಕೆ ಬದ್ಧನಾಗಿ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸುವಲ್ಲಿ ಪಾರದರ್ಶಕ ಹಾಗೂ ಮುಕ್ತ ಮನಸ್ಸಿನಿಂದ, ಶುದ್ಧ ಅಂತಃಕರಣದಿಂದ ಕೆಲಸ ಮಾಡುತ್ತೇನೆ. ಕಳೆದ 4 ದಶಕಗಳಿಂದ ನಂಬಿಕೊಂಡು ಬಂದ ಶಿಕ್ಷಕರಿಗೆ ಅಭಿನಂದನೆಗಳು. ಶಿಕ್ಷಕರೊಬ್ಬರು 3ನೇ ಬಾರಿ ಸಭಾಪತಿಯಾಗಿದ್ದು ಇತಿಹಾಸ. ಇದಕ್ಕೆ ಕಾರಣೀಕರ್ತರು ಶಿಕ್ಷಕರು. ಅವರ ಪ್ರೀತಿಗೆ ನಾನು ಸದಾ ಚಿರಋಣಿ. ಈ ಎಲ್ಲ ಗೌರವ ಆದರಗಳು ಅವರಿಗೆ ಸಲ್ಲುತ್ತವೆ. ಶಿಕ್ಷಕರೊಬ್ಬರು ಮೂರು ಬಾರಿ ಸಭಾಪತಿಯಾಗಿ ಆಯ್ಕೆಯಾಗಿದ್ದು ದೇಶದಲ್ಲಿಯೇ ಮೊದಲು. ಎಂಟು ಬಾರಿ ಸತತ ವಿಧಾನ ಪರಿಷತ್ತಿಗೆ ಆಯ್ಕೆಯಾಗುವುದು ಸಹ ಇದು ಕೂಡಾ ಮೊದಲು. ಈ ಎಲ್ಲ ಗೌರವ ನನ್ನ ಬೆಂಬಲಿಸಿದ ಶಿಕ್ಷಕ ಸಮೂಹಕ್ಕೆ ಸಲ್ಲುತ್ತದೆ ಎಂದರು.
ಹಿಂದಿನ ಹಾಗೂ ಇಂದಿನ ರಾಜಕೀಯ ವ್ಯವಸ್ಥೆ ಅಜಗಜಾಂತರದಿಂದ ಕೂಡಿದೆ. ರಾಜಕೀಯ ಮೌಲ್ಯಗಳು ಕುಸಿಯುತ್ತಿವೆ. ರಾಜಕಾರಣಿಗಳನ್ನು ಜನರು ನಂಬದೇ ಇರುವಂತಹ ವಾತಾವರಣ ಸೃಷ್ಟಿಯಾಗಿದೆ. ಆ ಶುದ್ದೀಕರಣದತ್ತ ಎಲ್ಲರೂ ಕೈಜೋಡಿಸುವ ಅವಶ್ಯಕತೆ ಇದೆ.ರಾಜಕಾರಣ ಒಂದು ವೃತ್ತಿಯಾಗದ ಸೇವೆಯಾಗಬೇಕೆಂಬುದೇ ನನ್ನ ಬಯಕೆ. ಇಂದು ಮೌಲ್ಯಾಧಾರಿತ ರಾಜಕಾರಣ ಎಂದರೆ ಏನು ಎನ್ನುವ ಪ್ರಶ್ನೆ ಎದುರಾಗಿದೆ.ಎರಡು ಬಾರಿ ಸಭಾಪತಿಯಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ತಾವು ನೀಡಿದ ಸಹಕಾರವನ್ನು ನಾನು ಎಂದೂ ಮರೆಯಲಾರೆ.ಸದನದಲ್ಲಿ ತಮೆಲ್ಲರ ಸಹಕಾರದಿಂದ 3ನೇ ಬಾರಿ ಸಭಾಪತಿಯಾಗುವ ಅವಕಾಶ ನನಗೆ ನೀಡಿದ್ದೀರಿ. ಹಲವಾರು ಬದಲಾವಣೆಗಳನ್ನು ಚಿಂತನೆಗಳನ್ನು ಅಳವಡಿಸಿಕೊಂಡು ಹೊಸ ದಿಕ್ಕಿನತ್ತ ಒಯ್ಯುವ ಪ್ರಯತ್ನ ಮಾಡೋಣ ಎಂದರು.
115 ವರ್ಷಗಳ ಸುದೀರ್ಘ ಇತಿಹಾಸ ಇರುವ ಕರ್ನಾಟಕ ರಾಜ್ಯದ ವಿಧಾನಪರಿಷತ್ತಿನ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸುವ ಅವಕಾಶ ಹಿತೈಷಿಗಳ ಸಹಕಾರ ಮತ್ತು ವಿಶೇಷವಾಗಿ ಶಿಕ್ಷಕ ಬಂಧುಗಳ ಆಶೀರ್ವಾದದಿಂದಾಗಿ ಒದಗಿ ಬಂದಿರುವದು ನನ್ನ ಪುಣ್ಯ ಎಂದರು.
ಹಿರಿಯರ ಮನೆಯ ಗಾಂಭಿರ್ಯತೆ, ಘನತೆ ಹಾಗೂ ಗೌರವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ವಿನೂತನ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಸದನದಲ್ಲಿನ ಚರ್ಚೆಗಳು ಅರ್ಥಪೂರ್ಣವಾಗಿರಬೇಕು ಹಾಗೂ ಸಮಾಜಮುಖಿಯಾಗಿರಬೇಕು ಎಂಬ ಧೈಯೋದ್ದೇಶದೊಂದಿಗೆ ಅತ್ಯಂತ ಉತ್ಸಾಹದಿಂದ ದೇಶದ ಸಂಸತ್ತಿನ ಮೇಲ್ಮನೆಯಾಗಿರುವ ರಾಜ್ಯಸಭೆಯ ಮಾದರಿಯಲ್ಲಿ ಸದನವನ್ನು ಕಿಯಾಶೀಲವಾಗಿ ಮತ್ತು ಸಂಸದೀಯ ಮೌಲ್ಯಗಳ ಆಧಾರದ ಮೇಲೆ ಶಾಸನಸಭೆಯ ನಿಯಮಾವಳಿ ಅಡಿಯಲ್ಲಿ ಮುನ್ನಡೆಸುವ ಆಶಯಕ್ಕೆ ಬದ್ದನಾಗಿದ್ದೇನೆ ಎಂದರು.
ಚಿಂತಕರ ಚಾವಡಿ, ಪ್ರಾಜ್ಞರ ಮನೆ ಎಂಬ ಹೆಗ್ಗಳಿಕೆಯನ್ನು ಕರ್ನಾಟಕ ವಿಧಾನಪರಿಷತ್ತು ಹೊಂದಿದೆ.ರಾಜ್ಯವನ್ನು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಕಟ್ಟುವ ನಿಟ್ಟಿನಲ್ಲಿ ಕಾಲ-ಕಾಲಕ್ಕೆ ಸರಕಾರಕ್ಕೆ ಬೇಕಾದಂತಹ ಅಗತ್ಯವಾದ ಸಲಹೆಗಳನ್ನು ಹಾಗೂ ಮಾರ್ಗದರ್ಶನವನ್ನು ನೀಡುತ್ತಾ ಬಂದಿದೆ. ಸದನದ ಅನೇಕ ಹಿರಿಯ ಹಾಗೂ ಪ್ರಬುದ್ಧ ಸದಸ್ಯರುಗಳ ಅನುಭವ ಹಾಗೂ ವಿದ್ವತ್ ಪೂರ್ಣ ಚಿಂತನೆಗಳು ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿವೆ. ಸಭಾಪತಿಯಾಗಿ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ನಾಡಿನ ಏಳಿಗೆಗೆ ಶ್ರಮಿಸುತ್ತೇನೆ ಎಂದರು.
ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗಲು ಕಾರಣಿಕರ್ತರಾದ ವಿಧಾನ ಪರಿಷತ್ ಸದಸ್ಯರು, ಮುಖ್ಯಮಂತ್ರಿಗಳು, ಸಚಿವರು, ಸಭಾನಾಯಕರು, ವಿರೋಧ ಪಕ್ಷದ ನಾಯಕರು, ಆಡಳಿತ ಮತ್ತು ವಿರೋಧ ಪಕ್ಷದ ಮಾನ್ಯ ಸಚೇತಕರಿಗೆ ಅಧಿಕಾರಿಗಳಿಗೆ ವಂದನೆಗಳು ಎಂದರು.
ಇದೇ ಸಂದರ್ಭದಲ್ಲಿ ರಾಜಕೀಯ ಜೀವನದಲ್ಲಿ ಮಾರ್ಗದರ್ಶನ ಮಾಡುತ್ತ ಬಂದ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ದಿ.ಜೆ.ಹೆಚ್.ಪಟೇಲ್, ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ದಿ.ನಜೀರಸಾಬ್,ಡಿ.ಬಿ.ಚಂದ್ರೇಗೌಡರವರು, ದಿ.ಬಸವರಾಜೇಶ್ವರಿ, ಎಂ.ಸಿ.ನಾಣಯ್ಯ, ದಿ.ಆರ್. ಗುಂಡೂರಾವ್, ದಿ.ಬಿ.ರಾಚಯ್ಯರವರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪರಿಷತ್ ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡರ ಸಹಕಾರವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.