ಅನಂತನಾಗ್ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿ : ಹೆಡ್ ಕಾನ್ಸ್ಟೆಬಲ್ ಹತ್ಯೆ
ಉಗ್ರರ ನಂಟು ಹೊಂದಿದ್ದ ಮೂವರನ್ನು ಬಂಧಿಸಿದ ಬೆನ್ನಲ್ಲೇ ಈ ಘಟನೆ
Team Udayavani, Jan 29, 2022, 7:06 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಶನಿವಾರ ಸಂಜೆ 5.35 ರ ಗುಂಡಿನ ದಾಳಿ ನಡೆಸಿ ಹೆಡ್ ಕಾನ್ಸ್ಟೆಬಲ್ ಒಬ್ಬರನ್ನು ಹತ್ಯೆಗೈದಿದ್ದಾರೆ.
ಅನಂತ್ನಾಗ್ನ ಬಿಜ್ಬೆಹರಾ ಪ್ರದೇಶದ ಹಸನ್ಪೋರಾದಲ್ಲಿರುವ ನಿವಾಸದ ಬಳಿ ಹೆಡ್ ಕಾನ್ಸ್ಟೆಬಲ್ ಅಲಿ ಮೊಹಮ್ಮದ್ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಲಿ ಮೊಹಮ್ಮದ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಆರಂಭಕ್ಕೂ ಮುನ್ನ ಅವರು ಕೊನೆಯುಸಿರೆಳೆದಿದ್ದರು.
ಜಮ್ಮು-ಕಾಶ್ಮೀರದ ಪೊಲೀಸರು ಭಯೋತ್ಪಾದಕ ದಾಳಿ ಸಂಚನ್ನು ವಿಫಲಗೊಳಿಸಿ, ದ ರೆಸಿಸ್ಟೆನ್ಸ್ ಫ್ರಂಟ್ ಹಾಗೂ ಲಷ್ಕರ್ ಎ ತೊಯ್ಬಾ ಸಂಘಟನೆ ಜತೆ ಸಂಪರ್ಕ ಹೊಂದಿರುವ ಮೂವರನ್ನು ಬಂಧಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಸ್ಥಳದಲ್ಲಿ ಭದ್ರತಾ ಪಡೆಗಳು ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.