ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ
Team Udayavani, Mar 7, 2021, 8:15 PM IST
ಮಧುಗಿರಿ: ಭ್ರಷ್ಟಾಚಾರದ ಹಣದಿಂದ ಶಾಸಕರನ್ನು ಖರೀದಿಸಿ, ಹಿಂಬಾಗಿಲ ಮೂಲಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ತಾಲೂಕು ಕಾಂಗ್ರೆಸ್‌ನಿಂದ ನಡೆದ ಜನಧ್ವನಿ, ನೂತನ ಗ್ರಾಪಂ ಸದಸ್ಯರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯದಂತೆ ಕಾಂಗ್ರೆಸ್ ಸಾಮಾಜಿಕ, ಆರ್ಥಿಕ ಸಮಾನತೆಗೆ ಒತ್ತು ನೀಡಿದ್ದು, ಬಿಜೆಪಿ ಅದನ್ನು ನಿರ್ಲಕ್ಷಿಸಿದೆ. ಇವರು ಅಹಿಂದ ವಿರೋಧಿಗಳಾಗಿದ್ದು ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಎಂದಿದ್ದ ಬಿಎಸ್‌ವೈ ಮಾತು ತಪ್ಪಿದ್ದಾರೆ. ಕೊರೊನಾ ನೆಪದಿಂದ ಅಭಿವೃದ್ಧಿ ಮರೆತಿದ್ದಾರೆ ಎಂದು ದೂರಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಉಳಿದ 6 ಸಚಿವರು ಯಾಕೆ ಕೋರ್ಟಿಗೆ ಹೋಗಿದ್ದು? ಇವರೆಲ್ಲ ಶಾಸಕರಾಗಲು ನಾಲಾಯಕ್. ಇಂಥ ಭ್ರಷ್ಟ ಸರ್ಕಾರವನ್ನು ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ :ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರದಿಂದ ಬಡವರು ಸಂಕಷ್ಟದಲ್ಲಿದ್ದಾರೆ. 100 ದಿನಗಳ ರೈತರ ಹೋರಾಟವನ್ನು ನಿರ್ಲಕ್ಷಿಸಲಾಗಿದೆ. ಯುಪಿಎ ನೀಡಿದ ನರೇಗಾದಿಂದ ಗ್ರಾಮೀಣರ ಬದುಕು ಕೊಂಚ ಉಸಿರಾಡುತ್ತಿದೆ.
ಮೋದಿಯಿಂದ ದೇಶದ ಆರ್ಥಿಕ ನೀತಿ ಹಳಿ ತಪ್ಪಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಬೇಕು ಎಂದರು. ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿ ಹಲವು ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.