ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್‌ನ ಅವಿಭಾಜ್ಯ ಅಂಗ: CM ಬೊಮ್ಮಾಯಿ
Team Udayavani, Apr 26, 2023, 7:45 AM IST
ಹುಬ್ಬಳ್ಳಿ: ಭ್ರಷ್ಟಾಚಾರ ಕಾಂಗ್ರೆಸ್‌ನ ಅವಿಭಾಜ್ಯ ಅಂಗ. ಅವರು ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟ ಎಂದು ಹೇಳಿ ಸಿದ್ದರಾಮಯ್ಯ ಪೇಚಿಗೆ ಸಿಲುಕಿದರು. ಅದನ್ನು ಸರಿದೂಗಿಸುವ ಯತ್ನ ಸಹ ಮಾಡಿದರು. ನನ್ನ ಮೇಲೆ ಹೊರಿಸಿದ ಭ್ರಷ್ಟಾಚಾರದ ಆರೋಪ ಸಾಬೀತುಪಡಿಸಲಿ. ಸುಮ್ಮನೆ ಆರೋಪ ಮಾಡುವುದಲ್ಲ. ಭ್ರಷ್ಟಾಚಾರ ಎಂದರೆ ಕಾಂಗ್ರೆಸ್. ಆ ಪಕ್ಷದ ನಾಯಕರ ವಿರುದ್ಧ ಹಲವಾರು ಭ್ರಷ್ಟಾಚಾರ ಪ್ರಕರಣಗಳಿವೆ. ಈಗಾಗಲೇ ಇಂತಹ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡಲಾಗಿದ್ದು, ಮೊದಲು ಅದಕ್ಕೆ ಉತ್ತರಿಸಲಿ. ಕಾಂಗ್ರೆಸ್‌ನ ಹಲವು ನಾಯಕರು ಜೈಲಿಗೆ ಹೋಗಿದ್ದಾರೆ. ಹೀಗಿರುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದರು.
ಪಕ್ಷದ ಜಯವಾಹಿನಿ ರೋಡ್ ಶೋ ಹಾಗೂ ಪ್ರಚಾರ ಸಭೆಗಳಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ ಎಂಬುದಕ್ಕೆ ಇದೇ ಸಾಕ್ಷಿ. ಪ್ರಧಾನಿ ಮೋದಿ, ಅಮಿತ್ ಶಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಅನುಮಾನವಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಲು ಸೂಕ್ತ ಸಲಹೆ, ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕಾರ್ಯಕ್ರಮಗಳ ಪ್ರಚಾರ ಮಾಡಿ ಜನರ ಮನವೊಲಿಸಲು ತಿಳಿಸಿದ್ದಾರೆ. ಪ್ರಧಾನಿಯಿಂದ ಹಿಡಿದು ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ. ಕೆಲವು ಕಾರ್ಯಕ್ರಮ ಓವರ್‌ಲ್ಯಾಪ್ ಆಗುತ್ತಿದ್ದು, ಪರಿಶೀಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.