ಪರಿಷತ್ ಚುನಾವಣೆ: ಜೆಡಿಎಸ್ ಬೆಂಬಲ ನೀಡುವ ನಿರೀಕ್ಷೆ- ಯಡಿಯೂರಪ್ಪ
Team Udayavani, Nov 21, 2021, 11:18 AM IST
ಚಿಕ್ಕೋಡಿ: ವಿಧಾನ ಪರಿಷತ್ ಚುನಾವಣೆ ಹಿನ್ನಲ್ಲೆಯಲ್ಲಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಿಲ್ಲ. ಅಂತಹ ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲ ನೀಡಬೇಕೆಂದು ಎಚ್.ಡಿ.ದೇವೆಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಚಿಕ್ಕೋಡಿ ನಗರದ ವಿಧಾನ ಪರಿಷತ್ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಫಾರ್ಮ್ ಹೌಸ್ ನಲ್ಲಿ ಸುದ್ದಿಗೋಷ್ಢಿ ನಡೆಸಿ ಅವರು ಮಾತನಾಡಿದರು.
ರಾಜ್ಯದ 25 ಸ್ಥಾನಗಳ ಪೈಕಿ, ಬಿಜೆಪಿ 20 ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದೆ. 20 ರಲ್ಲಿ 15 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಜೆಡಿಎಸ್ ಬೆಂಬಲ ನೀಡುವ ಭರವಸೆ ಇದೆ ಎಂದರು.
ವಿರೋಧ ಪಕ್ಷ ಕಾಂಗ್ರೆಸ್ ಇನ್ನು ಅಭ್ಯರ್ಥಿ ಘೋಷಣೆ ಮಾಡಿಲ್ಲ. ಅವರೊಳಗೆ ಗೊಂದಲ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ಟೀಕೆ ಟಿಪ್ಪಣಿ ಮಾಡದೆ ರಚನತ್ಮಾಕ ಸಲಹೆ ಸೂಚನೆ ನೀಡಿದರೆ ಕಾರ್ಯರೂಪಕ್ಕೆ ತರಲು ಸರಕಾರ ಬದ್ಧವಿದೆ ಎಂದರು.
ಇದನ್ನೂ ಓದಿ:ವಿಟ್ಲ: ಬೈಕ್‍ಗೆ ಕಾರು ಡಿಕ್ಕಿ: ಬೈಕ್ ಸವಾರ ಸಾವು
ರಾಜ್ಯದಲ್ಲಿ ನಾಲ್ಕು ತಂಡಗಳಿಂದ ಜನಸ್ವರಾಜ್ಯ ಸಮಾವೇಶ ಅದ್ದೂರಿಯಾಗಿ ನಡೆದಿದ್ದು. ಇಂದು ಕೊನೆ ದಿನವಾಗಿದ್ದು. ಎಲ್ಲ ಕಡೆ ಹೋದಾಗ ಜನ ಭಾರಿ ಉತ್ಸಾಹ ಅಭಿಮಾನ ತೋರಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ. ಪರಿಷತ್ ಅಭ್ಯರ್ಥಿ ಮಹಾಂತೇಶ ಕವಟಗಿಮಠ. ಶಾಸಕ ಪಿ.ರಾಜೀವ. ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ. ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ. ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದೀಪಕ ಪಾಟೀಲ, ರಮೇಶ ಕಾಳನ್ನವರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.