Court Order: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪುತ್ತೂರಿನ ಆರೋಪಿಗೆ 10 ವರ್ಷ ಶಿಕ್ಷೆ

ಆರೋಪ ಸಾಬೀತು ಎಂದ ಮಂಗಳೂರಿನ ನ್ಯಾಯಾಲಯ, 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದ ಯುವತಿ

Team Udayavani, Aug 30, 2024, 8:52 PM IST

Court1

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ ಆರೋಪಿಗೆ ಮಂಗಳೂರಿನ (Mangaluru) 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court)ವು 10 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಪುತ್ತೂರು ಕಬಕದ ನಿವಾಸಿ ನಿತೇಶ್(30) ಶಿಕ್ಷೆಗೊಳಗಾದವನು. ಈತನ ಜತೆಗೆ ಈತನ ತಂದೆ ರಾಮಣ್ಣ ಪೂಜಾರಿ(63) ಮತ್ತು ಬಾವ ನಿಖಿತಾಶ್ ಸುವರ್ಣ(40)ನಿಗೆ 5 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿದೆ.

ಪ್ರಕರಣದ ವಿವರ
ನಿತೇಶ್ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಸುತ್ತಾಡಿಸಿದ್ದ. ಬಳಿಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಅಲ್ಲದೆ ಆಕೆಯ ಮನೆಗೂ ಹೋಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದ. ಯುವತಿ ಮದುವೆಯಾಗಲು ಕೇಳಿಕೊಂಡಾಗ ನಿರಾಕರಿಸಿದ್ದ. ಪರಸ್ಪರ ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಬಾವ ಮದುವೆಗೆ ಒಪ್ಪುತ್ತಿಲ್ಲ ಎಂದು ಹೇಳಿದ್ದ.

ನಿತೇಶ್‌ನ ತಂದೆ ಮತ್ತು ಬಾವನ ಬಳಿ ಯುವತಿ ಕೇಳಿಕೊಂಡಾಗ ಅವರು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು. ಈ ಬಗ್ಗೆ ಯುವತಿ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯಕ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ ಅವರು ಆರೋಪಿಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಆ.30ರಂದು ಆರೋಪಿ ನಿತೇಶ್‌ಗೆ ಭಾರತೀಯ ದಂಡಸಂಹಿತೆಯ ಕಲಂ 376 (2) (ಎನ್) ಅಡಿಯಲ್ಲಿ 10 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ, ಕಲಂ 417ರ ಅಡಿಯಲ್ಲಿ 1 ವರ್ಷ ಕಠಿನ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ರಾಮಣ್ಣ ಪೂಜಾರಿ ಮತ್ತು ನಿಖಿತಾಶ್‌ಗೆ ಭಾರತೀಯ ದಂಡ ಸಂಹಿತೆಯ ಕಲಂ 504 ರಡಿ 1ವರ್ಷ ಕಠಿನ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ಹಾಗೂ  ಕಲಂ 506ರಡಿ 5 ವರ್ಷ ಕಠಿನ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಅಲ್ಲದೆ ನೊಂದ ಯುವತಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಕೆಲವು ಸಾಕ್ಷಿಗಳ ವಿಚಾರಣೆಯನ್ನು ಸರಕಾರಿ ಅಭಿಯೋಜಕ ಬಿ.ಶೇಖರ ಶೆಟ್ಟಿ ಅವರು ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಅವರು ಉಳಿದ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಒಟ್ಟು 16 ಮಂದಿ ಸಾಕ್ಷಿದಾರರನ್ನು ವಿಚಾರಣೆ ಮಾಡಲಾಗಿತ್ತು. 88 ದಾಖಲೆಗಳನ್ನು ಗುರುತಿಸಲಾಗಿತ್ತು.

ಟಾಪ್ ನ್ಯೂಸ್

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-aie

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.