ಸೋಂಕಿತರ ಸಂಖ್ಯೆ ಹೆಚ್ಚಿದೆ ಆದ್ರೂ ಆತಂಕ ಬೇಡ: ಕೆ.ಸುಧಾಕರ್
36 ಗಂಟೆಯೊಳಗೆ ಕೋವಿಡ್-19 ವರದಿಗೆ ಸಚಿವರ ಸೂಚನೆ
Team Udayavani, Jun 13, 2020, 7:26 PM IST
ಯಾದಗಿರಿ: ಯಾದಗಿರಿ ಮತ್ತು ಉಡುಪಿಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ. ಮಹಾರಾಷ್ಟ್ರದಿಂದ ಮರಳಿದವರಲ್ಲಿಯೇ ಹೆಚ್ಚಿನ ಸೋಂಕಿತರು ಕಂಡು ಬರುತ್ತಿದ್ದು ಶೇ.95% ಸೋಂಕಿತರಲ್ಲಿ ರೋಗ ಲಕ್ಷಣಗಳು ಇಲ್ಲ. ರಾಜ್ಯದಲ್ಲಿ 164 (ಶೇ.5)ಸೋಂಕಿತರಿಗೆ ಮಾತ್ರ ರೋಗದ ಲಕ್ಷಣಗಳಿವೆ. ಹಾಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಯಾದಗಿರಿ ಜಿ.ಪಂ. ಸಭಾಂಗಣದಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಯಾದಗಿರಿಯಲ್ಲಿ 735 ಸೋಂಕಿತರು ಪತ್ತೆಯಾಗಿದ್ದು, ಸಂಖ್ಯೆ ಹೆಚ್ಚಿಗೆ ಕಂಡರೂ ಒಬ್ಬರಲ್ಲಿಯೂ ರೋಗ ಲಕ್ಷಣವಿಲ್ಲ. ಜಿಲ್ಲಾಡಳಿತ ಅಗತ್ಯ ಜಾಗೃತಿ ಮೂಡಿಸಿದೆ. ಜನರ ಸಹಕಾರವೂ ಸಿಕ್ಕಿರುವುದು ಇಲ್ಲಿ ಸಮುದಾಯಕ್ಕೆ ಸೋಂಕು ಹರಡಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 6516 ಸೋಂಕಿತರಿದ್ದು, 3440(ಶೇ.58%) ಸೋಂಕಿತರು ಗುಣಮುಖವಾಗಿದ್ದು, 2995 ಸಕ್ರೀಯ ಪ್ರಕರಣಗಳಿವೆ. ಕೋವಿಡ್-19 ತೀವ್ರತೆ ಎಷ್ಟಿದೆ ಎಂದರೇ ಇಡೀ ರಾಜ್ಯದಲ್ಲಿ 19 ಸೋಂಕಿತರು ಐಸಿಯುನಲ್ಲಿದ್ದಾರೆ ಎಂದರು.
ಯಾದಗಿರಿಯ ಕೋವಿಡ್-19 ವರದಿಗಳು ವಿಳಂಭವಾಗಿ ಬರುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಈಗಾಗಲೇ ಜಿಲ್ಲಾಧಿಕಾರಿಗಳು ವಿಷಯ ಗಮನಕ್ಕೆ ತಂದಿದ್ದು, ಅಧಿಕಾರಿಗಳೊಂದಿಗೆ ಮಾತನಾಡಿದ್ದು, 24 ಇಲ್ಲವೇ 36 ಗಂಟೆಯೊಳಗೆ ವರದಿ ನೀಡಲು ಆದೇಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಇಲ್ಲದಿರುವುದರಿಂದ ಬೇರೆ ಕಡೆ ಅವಲಂಭಿಸಬೇಕಿದೆ. ಇನ್ನು ಒಂದು ವಾರದಲ್ಲಿ ಲ್ಯಾಬ್ ಆರಂಭಿಸಲಾಗುವುದು ಎಂದು ಹೇಳಿದರು.
ಚಿಕ್ಕಬಳ್ಳಾಪುರ ಮತ್ತು ಯಾದಗಿರಿಗೆ ಮೆಡಿಕಲ್ ಕಾಲೇಜು ಆರಂಭಕ್ಕೆ ಶೀಘ್ರವೇ ಕ್ರಮವಹಿಸುವುದಾಗಿ ಹೇಳಿದರು. ಯಾದಗಿರಿಯಲ್ಲಿ 300 ಹಾಸಿಗೆಯ ಕಟ್ಟಡವಿದ್ದು ಅದನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿಕೊಅಡು ತಿಂಗಳೊಳಗೆ ಮುಖ್ಯಮಂತ್ರಿಗಳಿಅದ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದರು.
ಕೇಂದ್ರದ ತಂಡ ಪರಿಶೀಲನೆಗೆ ಬರುವುದಕ್ಕೆ ಮೊದಲು ಎಲ್ಲಾ ಸಿಬ್ಬಂದಿ ನೇಮಕ ಮತ್ತು ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಲಾಕ್‌ಡೌನ್ ಮುಂದುವರೆಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ತರಲು ಸರ್ಕಾರ ಲಾಕ್ ಡೌನ್ ಘೋಷಿಸಿತ್ತು. ಜೀವ ಉಳಿಸಿಯಾಗಿದೆ. ಈಗ ಜೀವದ ಜತೆಗೆ ಜೀವನವೂ ಸಹಜ ಸ್ಥಿತಿಗೆ ಬರಬೇಕಿದೆ. ಸಾಮಾಜಿಕ ಅಂತರ ಕಾಪಾಡಿ ಪ್ರತಿತಯೊಬ್ಬರು ಮಾಸ್ಕ್ ಧರಿಸಿ ಎಂದರು.ಸಂಸದ ಡಾ.ಉಮೇಶ ಜಾಧವ್, ಶಾಸಕ ವೆಂಕಟರೆಡ್ಡಿ ಮುದ್ನಾಳ, ಶರಣಬಸ್ಸಪ್ಪ ದರ್ಶನಾಪೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.