ಭಾರತದಲ್ಲಿ Covid ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ; 24ಗಂಟೆಗಳಲ್ಲಿ 1.27 ಲಕ್ಷ ಪ್ರಕರಣ ಪತ್ತೆ
ಕಳೆದ 24ಗಂಟೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಇಳಿಕೆಯಾಗಿದೆ.
Team Udayavani, Jun 1, 2021, 11:00 AM IST
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖ ಮುಂದುವರಿದಿದ್ದು, ಕಳೆದ 24ಗಂಟೆಗಳಲ್ಲಿ 1.27 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಜೂನ್ 01) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಶಿರ್ವ ಪೇಟೆಯಲ್ಲಿ ಭಾರೀ ಜನಜಂಗುಳಿ: ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ
ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ, ದೇಶದಲ್ಲಿ 1,27,510 ಕೋವಿಡ್ 19 ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣ ಇಳಿಮುಖವಾಗತೊಡಗಿದ್ದು, ಇದು ಕಳೆದ 50 ದಿನಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ವರದಿಯಾದ ಒಟ್ಟು ಪ್ರಕರಣವಾಗಿದೆ ಎಂದು ವಿವರಿಸಿದೆ.
ದೇಶದಲ್ಲಿ ಒಟ್ಟು ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 2,795 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 3,31, 895ಕ್ಕೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ಸತತ 19 ದಿನಗಳಿಂದ ಚೇತರಿಕೆಯ ಪ್ರಮಾಣ ಹೆಚ್ಚಳವಾಗಿದ್ದು, ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 2,55,287 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 24ಗಂಟೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.