ಕೋವಿಡ್-19 ಆತಂಕದ ನಡುವೆಯೇ ದ.ಕ. ಡಿಸಿ ವರ್ಗಾವಣೆ ಪ್ರಯತ್ನ !
Team Udayavani, May 19, 2020, 7:00 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೋವಿಡ್-19 ಮಹಾಮಾರಿ ವ್ಯಾಪಕ ವಾಗಿ ಹರಡುತ್ತಿರುವ ನಡುವೆಯೇ ದಿಢೀರಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ತೆರೆಮರೆಯಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯು ತ್ತಿರುವುದು ಗೊತ್ತಾಗಿದೆ.
ಮೂಲಗಳ ಪ್ರಕಾರ, ಜಿಲ್ಲಾಡಳಿತದಲ್ಲಿ ಆಡಳಿತಾತ್ಮಕ ಬದಲಾವಣೆ ತರುವುದಕ್ಕೆ ಕೆಲವು ಪ್ರಭಾವಿ ರಾಜಕೀಯ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ವರ್ಗಾವಣೆ ಯತ್ನ ನಡೆಯುತ್ತಿರು ವುದು ನಿಜ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ನಡುವೆ ಸಾಮಾಜಿಕ ಜಾಲ ತಾಣದಲ್ಲಿ ಜಿಲ್ಲಾಧಿಕಾರಿ ಹಾಗೂಅಪರ ಜಿಲ್ಲಾಧಿಕಾರಿಗಳ ವರ್ಗಾ ವಣೆ ಬಹುತೇಕ ಖಚಿತ ಎಂಬ ವಿಚಾರವು ಸೋಮವಾರ ಬೆಳಗ್ಗಿನಿಂದ ಹರಿದಾಡುತ್ತಿತ್ತು. ಜಿಲ್ಲೆಯಲ್ಲಿ ಸೋಂಕು ಮೂಲ ಪತ್ತೆ ವಿಳಂಬಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಈಗಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಎಲ್ಲ ಬೆಳವಣಿಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಕಟ್ಟು-ನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ. ಈ ಹಂತದಲ್ಲಿ ಜಿಲ್ಲಾಧಿ ಕಾರಿಯನ್ನು ವರ್ಗಾವಣೆ ಮಾಡಿದರೆ ಅದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆ ಹಾಗೂ ಅನುಮಾನಕ್ಕೆ ಎಡೆ ಮಾಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.