ಕೋವಿಡ್ ಸೋಂಕಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ 10ನೇ ಬಲಿ: ಉಳ್ಳಾಲ ಅಝಾದ್‍ನಗರದ ಮಹಿಳೆ ಬಲಿ
Team Udayavani, Jun 24, 2020, 2:06 PM IST
ಉಳ್ಳಾಲ: ನಿನ್ನೆಯಷ್ಟೇ ಕೋವಿಡ್ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಉಳ್ಳಾಲ ಅಝಾದ್‍ನಗರದ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ ಇದರೊಂದಿಗೆ ಜೆಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಉಳ್ಳಾಲ ಅಝಾದ್‍ನಗರದ 66ರ ಹರೆಯದ ಮಹಿಳೆಗೆ ಬೇದಿ (ಲೂಸ್‍ಮೋಷನ್) ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಜೂನ್ 19 ರಂದು ಆಸ್ಪತ್ರೆಗೆ ದಾಖಲಾಗಿದ್ದು ಜೂನ್ 21 ರಂದು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ದಾಖಲಾದ ಸಂದರ್ಭದಲ್ಲಿ ಮಹಿಳೆಯ ಗಂಟಲುದ್ರವ ಪರೀಕ್ಷೆ ತೆಗೆದುಕೊಂಡಿದ್ದು ಮಂಗಳವಾರ ದ್ರವ ಪರೀಕ್ಷೆಯಲ್ಲಿ ಪಾಸೆಟಿವ್ ಬಂದ ಹಿನ್ನಲೆಯಲ್ಲಿ ಮಹಿಳೆಯನ್ನು ನಗರದ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ ಇಂದು ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ, ಈ ಕುರಿತು ಅರೋಗ್ಯ ಇಲಾಖೆಯು ಸ್ಪಷ್ಟ ಪಡಿಸಿದೆ.
ಶಾಸಕ ಯು. ಟಿ. ಖಾದರ್ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಜರಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.
ಟ್ರಾವೆಲ್ ಹಿಸ್ಟರಿ ನಿಗೂಢ : ಮಹಿಳೆ ಮನೆ ಬಿಟ್ಟು ಎಲ್ಲೂ ಹೊರಗೆ ಹೋಗಿಲ್ಲ, ಮನೆಯಲ್ಲಿರುವವರು ಯಾರೂ ಹೊರಗಿನಿಂದ ಬಂದಿಲ್ಲ ಆದರೆ ಮಹಿಳೆಗೆ ಸೋಂಕು ಹೇಗೆ ತಗುಲಿದೆ ಎನ್ನುವುದೇ ನಿಗೂಢವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಎಂಟು ದಿನಗಳ ಕಾಲ ಚಿಕಿತ್ಸೆಯಲ್ಲಿರುವಾಗ ಸೋಂಕು ತಗುಲಿರುವ ಸಾಧ್ಯತೆಯ ಬಗ್ಗೆಯೂ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.