230 ದಿನಗಳಲ್ಲಿ ಭಾರೀ ಇಳಿಕೆ;ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 13,596 ಕೋವಿಡ್ ಪ್ರಕರಣ ಪತ್ತೆ
ಕೇರಳ ರಾಜ್ಯವೊಂದರಲ್ಲೇ ಶೇ.55.57ರಷ್ಟು ಪ್ರಕರಣ ಪತ್ತೆಯಾಗಿದೆ
Team Udayavani, Oct 18, 2021, 10:35 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 13,596 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು 230 ದಿನಗಳ ಬಳಿಕದ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಅಕ್ಟೋಬರ್ 18) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:5 ಅಂತಸ್ತಿನ ಕಟ್ಟದಲ್ಲಿ ಬೆಂಕಿ ಅವಘಡ : 2 ಬಲಿ,70 ಮಂದಿ ರಕ್ಷಣೆ
ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,40,81,315ಕ್ಕೆ ಏರಿಕೆಯಾಗಿದೆ. ಐದು ರಾಜ್ಯಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿದೆ. ಕೇರಳದಲ್ಲಿ 7,555, ಮಹಾರಾಷ್ಟ್ರ 1,715, ತಮಿಳುನಾಡು 1,218 ಪ್ರಕರಣ, ಪಶ್ಚಿಮಬಂಗಾಳದಲ್ಲಿ 624 ಹಾಗೂ ಒಡಿಶಾದಲ್ಲಿ 443 ಪ್ರಕರಣ ವರದಿಯಾಗಿದೆ.
ಐದು ರಾಜ್ಯಗಳಲ್ಲಿ ಶೇ.84.99ರಷ್ಟು ಪ್ರಕರಣಗಳು ವರದಿಯಾಗಿದ್ದು, ಕೇರಳ ರಾಜ್ಯವೊಂದರಲ್ಲೇ ಶೇ.55.57ರಷ್ಟು ಪ್ರಕರಣ ಪತ್ತೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ 166 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4.52.290ಕ್ಕೆ ತಲುಪಿದೆ. ಕೇರಳದಲ್ಲಿ 74 ಮಂದಿ ಸಾವನ್ನಪ್ಪಿದ್ದು, ಮಹಾರಾಷ್ಟ್ರದಲ್ಲಿ 29 ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 6,152ರಷ್ಟು ಇಳಿಕೆಯಾಗಿದ್ದು, ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 1,89,694ಕ್ಕೆ ತಲುಪಿದೆ. ದೇಶದಲ್ಲಿ ವಾರದ ಪಾಸಿಟಿವಿಟಿ ದರ ಶೇ.1.37ರಷ್ಟಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.