ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು
Team Udayavani, Jan 27, 2022, 8:20 PM IST
ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಸೂಚನೆ ಎಂಬಂತೆ ಇಂದು ಗುರುವಾರ 38,083 ಹೊಸ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 17,717 ಹೊಸ ಪ್ರಕರಣಗಳು ದೃಢಪಟ್ಟಿವೆ. 49 ಮಂದಿ ಸೋಂಕಿತರ ಮರಣಗಳು ವರದಿಯಾಗಿದ್ದು, ಆ ಪೈಕಿ 12 ಮಂದಿ ಬೆಂಗಳೂರಿನವರಾಗಿದ್ದಾರೆ.
ರಾಜ್ಯದಲ್ಲಿ 20.44% ಪಾಸಿಟಿವಿಟಿ ದರ ಇದೆ. ಇಂದು 67,236 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
3,28,711 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, ಬೆಂಗಳೂರಿನಲ್ಲಿ 1 ಲಕ್ಷದ 89 ಸಾವಿರ ಪ್ರಕರಣಗಳಿವೆ. ಇಂದು 1,86,313 ಮಂದಿಗೆ ಪರೀಕ್ಷೆಗಳನ್ನು ಮಾಡಲಾಗಿದೆ.
ಬಳ್ಳಾರಿ, ಮೈಸೂರಿನಲ್ಲಿ ತಲಾ 5 ಮಂದಿ , ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ ನಾಲ್ವರು,ಮಂಡ್ಯ, ರಾಯಚೂರು, ಉಡುಪಿ, ತುಮಕೂರು ಮತ್ತು ಉತ್ತರಕನ್ನಡದ ತಲಾ ಇಬ್ಬರು, ಬಾಗಲಕೋಟೆ, ಬೆಳಗಾವಿ,ಚಿತ್ರದುರ್ಗ, ಧಾರವಾಡ, ಕೆಲಬುರಗಿ, ಕೊಡಗು, ರಾಮನಗರ ಮತ್ತು ಶಿವಮೊಗ್ಗದಲ್ಲಿ ದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳಿರುವ ರಾಜಧಾನಿಯಲ್ಲಿ ಇಂದು ರೂಪಾಂತರಿಯ 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,115 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.
ಬುಧವಾರ ರಾಜ್ಯದಲ್ಲಿ 48,905 ಪ್ರಕರಣಗಳು ಪತ್ತೆಯಾಗಿದ್ದವು ಮತ್ತು 39 ಮಂದಿ ಸೋಂಕಿತರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.