ದೇಶದ 146 ಜಿಲ್ಲೆಗಳು ಈಗ ಕೋವಿಡ್ ಮುಕ್ತ : ಆರೋಗ್ಯ ಸಚಿವ ಡಾ| ಹರ್ಷವರ್ಧನ್
Team Udayavani, Jan 29, 2021, 7:10 AM IST
ಹೊಸದಿಲ್ಲಿ: “ದೇಶದ 146 ಜಿಲ್ಲೆಗಳಲ್ಲಿ ಏಳು ದಿನಗಳಿಂದ ಒಂದೇ ಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಸೋಂಕಿನ ಪ್ರಭಾವ ತಗ್ಗಿಸುವಲ್ಲಿ ಯಶಸ್ವಿಯಾಗಿದ್ದೇವೆ’ – ಹೀಗೆಂದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಗುರುವಾರ ತಿಳಿಸಿದ್ದಾರೆ.
ಸತತ ಪರೀಕ್ಷೆ, ಮುನ್ನೆಚ್ಚರಿಕ ಕ್ರಮಗಳಿಂದ ಈ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದುವರೆಗೆ 19.5 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. 14 ದಿನಗಳ ಅವಧಿಯಲ್ಲಿ 18 ಜಿಲ್ಲೆ, 21 ದಿನಗಳ ಅವಧಿಯಲ್ಲಿ 6, 28 ದಿನಗಳ ಅವಧಿಯಲ್ಲಿ 21 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ದೃಢಪಟ್ಟಿಲ್ಲ. ಪ್ರತೀ ದಿನ 12 ಲಕ್ಷ ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ದೇಶದಲ್ಲಿ ಇದೆ. ಬುಧವಾರದಿಂದ ಗುರುವಾರದ ಅವಧಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ 12 ಸಾವಿರಕ್ಕಿಂತ ಕಡಿಮೆಯೇ ಇದೆ ಎಂದಿದ್ದಾರೆ.
“ಸಂಪೂರ್ಣ ಸರಕಾರ ಮತ್ತು ಸಮಾಜ ಎಂಬ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶ ಸೋಂಕು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದೂ ಹೇಳಿದ್ದಾರೆ.
165 ಯು.ಕೆ. ಮಾದರಿ ರೂಪಾಂತರ ಪ್ರಕರಣಗಳ ಸಂಖ್ಯೆ ದೃಢಪಟ್ಟಿದೆ. ಒಟ್ಟಾರೆಯಾಗಿ ಹೇಳುವುದಿದ್ದರೆ ದೇಶದಲ್ಲಿ ಕೊರೊನಾ ಸೋಂಕಿನ ಸರಣಿ ಛೇದಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಜಗತ್ತಿನ ಮಿತ್ರ: ದೇಶದಲ್ಲಿ ಉತ್ಪಾದಿಸಲಾಗಿರುವ ಎರಡು ಲಸಿಕೆಗಳನ್ನು ಇತರ ದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ ಸಚಿವ ಹರ್ಷವರ್ಧನ್. “ಇತರ ರಾಷ್ಟ್ರಗಳಿಗೆ ಲಸಿಕೆ ಪೂರೈಸುವುದರ ಮೂಲಕ ಭಾರತವು ಜಗತ್ತಿನ ಮಿತ್ರನಾಗಿದೆ. 1 ವಿಶ್ವದ ನಂಬಿಕೆ ಗಳಿಸಿಕೊಂಡಿದೆ. ದೇಶೀಯವಾಗಿಯೇ 2 ಲಸಿಕೆಗಳನ್ನು ಕ್ಷಿಪ್ರವಾಗಿ ಸಿದ್ಧಪಡಿಸಿದ್ದು ಸಾಧನೆಯೇ ಸರಿ’ ಎಂದು ಹೇಳಿದ್ದಾರೆ.
ದೇಶದಲ್ಲಿ ಇದು ವರೆಗೆ 24 ಲಕ್ಷ ಮಂದಿ ಕೊರೊನಾ ವಾರಿಯರ್ಸ್‌ಗೆ ಲಸಿಕೆ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.
ನಿಯಮ ರವಾನೆ
ಲಸಿಕೆಗಳನ್ನು ಹಾಳು ಮಾಡದಂತೆ ರಾಜ್ಯ, ಕೇಂದ್ರಾಡಳಿತ ಪ್ರದೇಶಳಿಗೆ ಕೇಂದ್ರ ಸರಕಾರ ಸುತ್ತೋಲೆ ಹೊರಡಿಸಿದೆ. ಲಸಿಕೆ ವೇಸ್ಟ್ ಆಗದಂತೆ ತಡೆ ಯಲು ಸೂಕ್ತ ಮಾರ್ಗದರ್ಶಿಗಳನ್ನು ನೀಡಲಾಗಿದೆ. ಲಸಿಕೆ ವಿತರಣೆಯ ಹೊಣೆ ಹೊತ್ತವರು ನಿಗದಿತ 100 ಫಲಾನುಭವಿಗಳ ಜತೆಗೆ, ಹೆಚ್ಚುವರಿ ಜನರಿಗೂ ಲಸಿಕೆ ನೀಡಬಹುದು ಎಂದು ಸೂಚಿಸಲಾಗಿದೆ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.