ಕೊರೊನಾ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ


Team Udayavani, Apr 12, 2021, 2:30 AM IST

ಕೊರೊನಾ ನಿಯಮ ಉಲ್ಲಂಘಿಸುವವರ ಮೇಲೆ ನಿಗಾ

ಮಹಾನಗರ: ಕೊರೊನಾ ನಿಯ ಮಗಳ ಪಾಲನೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಮಾರ್ಷಲ್‌ಗ‌ಳು ಫೀಲ್ಡಿಗಿಳಿದಿದ್ದಾರೆ.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹ ರಕ್ಷಕ ದಳದ 125 ಸಿಬಂದಿಯನ್ನು ಕೋವಿಡ್‌ ಮಾರ್ಷಲ್‌ಗ‌ಳ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದ್ದು, ಎ. 10ರಿಂದ ಅವರು ಕಾರ್ಯ ನಿರ್ವಹಣೆ ಮಾಡು ತ್ತಿದ್ದಾರೆ. ಮಂಗಳೂರು ನಗರದಲ್ಲಿ 60 ಮಂದಿ ಮಾರ್ಷಲ್‌ಗ‌ಳು ಬಸ್‌, ಬಸ್‌ ನಿಲ್ದಾಣ, ಮಾಲ್‌, ಮಾರ್ಕೆಟ್‌ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 60, ಉಳ್ಳಾಲ ಮತ್ತು ಪುತ್ತೂರು ಪುರಸಭೆ ವ್ಯಾಪ್ತಿಗಳಲ್ಲಿ ತಲಾ 10 ಮಂದಿ, ಬಂಟ್ವಾಳ, ಮೂಡುಬಿದಿರೆ, ಸೋಮೇಶ್ವರ ಪುರಸಭೆ ಮತ್ತು ಕೋಟೆಕಾರು, ಮೂಲ್ಕಿ, ವಿಟ್ಲ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಪಟ್ಟಣ ಪಂಚಾಯತ್‌ ವ್ಯಾಪ್ತಿಗಳಲ್ಲಿ ತಲಾ 5ರಂತೆ ಒಟ್ಟು 45 ಮಂದಿ ಗೃಹ ರಕ್ಷಕರನ್ನು ಕೋವಿಡ್‌ ಮಾರ್ಷಲ್‌ಗ‌ಳನ್ನಾಗಿ ನಿಯೋಜನೆ ಮಾಡಲಾಗಿದೆ.

ಈ ಮಾರ್ಷಲ್‌ಗ‌ಳು ಕೊರೊನಾ ಮಾರ್ಗ ಸೂಚಿಗಳ ಕಟ್ಟುನಿಟ್ಟಿನ ಪಾಲನೆಯಲ್ಲಿ ಪೊಲೀಸರು ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡುತ್ತಿದ್ದಾರೆ.

ಕೊರೊನಾ ವೈರಸ್‌ ಸೋಂಕು ಪ್ರಸರಣ ತಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ವತ್ಛತೆಯ ಪಾಲನೆ ಯನ್ನು ಸಾರ್ವಜನಿಕರು ಅನುಸರಿಸುವಂತೆ ನೋಡಿಕೊಳ್ಳುವುದು, ಅನಾವಶ್ಯಕ ಸಂಚಾರವನ್ನು ನಿಯಂತ್ರಿಸುವುದು- ಇದು ಈ ಮಾರ್ಷಲ್‌ಗ‌ಳ ಕರ್ತವ್ಯ.

ದಂಡ ವಿಧಿಸುವ ಅಧಿಕಾರವಿಲ್ಲ
ಕೋವಿಡ್‌ ಮಾರ್ಷಲ್‌ಗ‌ಳಿಗೆ ದಂಡ ವಿಧಿಸುವ ಅಧಿಕಾರವಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ನಿಯಮ ಪಾಲನೆಯನ್ನು ಖಾತರಿ ಪಡಿಸಲು ತೆರಳುವ ಆರೋಗ್ಯ ಕಾರ್ಯಕರ್ತರು ಅಥವಾ ಬಿಲ್‌ ಕಲೆಕ್ಟರ್‌ಗಳ ಜತೆ ತೆರಳಿ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ನಿಯಮ ಉಲ್ಲಂಘನೆಗೆ ಸಂಬಂಧಿಸಿ ಫೋಟೋ, ವೀಡಿಯೋ ಮಾಡುವುದು, ಅಗತ್ಯ ಬಿದ್ದರೆ ರಕ್ಷಣೆ ಒದಗಿಸುವುದು ಇತ್ಯಾದಿ ಕರ್ತವ್ಯಗಳನ್ನು ಅವರು ನಿರ್ವಹಿಸುತ್ತಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್‌ ಶ್ರೀಧರ್‌ ಉದಯವಾಣಿಗೆ ತಿಳಿಸಿದ್ದಾರೆ.

ಜಾಗೃತಿ ಕಾರ್ಯ
ಕೊರೊನಾ ಸಾಂಕ್ರಾಮಿಕ ರೋಗದ 2ನೇ ಅಲೆ ಪ್ರಸರಣ ಆಗುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿನ ಕ್ರಮಗಳನ್ನು ಅನುಸರಿಸುತ್ತಿದ್ದು, ಜನರು ನಿಯಮಗಳ ಪಾಲನೆ ಮಾಡುವುದನ್ನು ಖಾತರಿ ಪಡಿಸಲು ಜಿಲ್ಲಾಡಳಿತವು ಗೃಹ ರಕ್ಷಕರನ್ನು ಕೋವಿಡ್‌ ಮಾರ್ಷಲ್‌ಗ‌ಳನ್ನು ನಿಯೋಜಿಸಿದೆ. ಜನ ಸಂದಣಿ ಇರುವ ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ಬಸ್‌ಗಳು, ರೈಲು ನಿಲ್ದಾಣ, ಮಾಲ್‌ಗ‌ಳು, ಕಲ್ಯಾಣ ಮಂಟಪ ಮತ್ತಿತರ ಸಭಾಂಗಣಗಳಿಗೆ ಆರೋಗ್ಯ ಕಾರ್ಯಕರ್ತರ ಜತೆ ಈ ಮಾರ್ಷಲ್‌ಗ‌ಳು ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ನಿಯಮ ಪಾಲಿಸುವಂತೆ ಮನ ಒಲಿಸುವ ಕೆಲಸ ಮಾಡುತ್ತಿದ್ದಾರೆ. -ಡಾ| ಮುರಲಿ ಮೋಹನ್‌ ಚೂಂತಾರು, ಗೃಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.