ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 43 ಮಂದಿ ಮಾತ್ರ!
Team Udayavani, Nov 8, 2020, 6:47 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಕಡಿಮೆಯಾಗುತ್ತಿದ್ದು, ಭಾನುವಾರ 10 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 19 ಮಂದಿ ಗುಣಮುಖರಾಗಿದ್ದಾರೆ.144 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 43 ಮಂದಿ ಮಾತ್ರ!
ಇದುವರೆಗೆ ಒಟ್ಟು 6109 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 5838 ಮಂದಿ ಗುಣಮುಖರಾಗಿದ್ದಾರೆ. 127 ಮಂದಿ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭಾನುವಾರ 924 ಮಾದರಿಗಳನ್ನು ಪರೀಕ್ಷಿಸಲಾಯಿತು.
ಚಿಕಿತ್ಸೆ ಪಡೆಯುತ್ತಿರುವವರ ವಿವರ: ಚಿಕಿತ್ಸೆ ಪಡೆಯುತ್ತಿರುವ ಸಕ್ರಿಯ 144 ಪ್ರಕರಣಗಳಲ್ಲಿ 17 ಮಂದಿ ಐಸಿಯುನಲ್ಲಿದ್ದಾರೆ. 10 ಮಂದಿ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತೆಮರಹಳ್ಳಿ ಕೋವಿಡ್ ಕೇರ್ ಸೆಂಟರ್‌ನಲ್ಲಿ 9 ಮಂದಿ, ಗುಂಡ್ಲುಪೇಟೆ ಸಿಸಿಸಿಯಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 101 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಚಾ.ನಗರ ತಾಲೂಕಿನಿಂದ ಯಾವುದೇ ಪ್ರಕರಣ ಇಲ್ಲ!: ಹಲವು ದಿನಗಳಿಂದ ಜಿಲ್ಲೆಗಳ ನಾಲ್ಕು ತಾಲೂಕುಗಳ ಪೈಕಿ ಹೆಚ್ಚಿನ ಪ್ರಕರಣಗಳು ಇರುತ್ತಿದ್ದ ಚಾ.ನಗರ ತಾಲೂಕಿನಿಂದ ಭಾನುವಾರ ಯಾವುದೇ ಪ್ರಕರಣ ವರದಿಯಾಗಿಲ್ಲ. ಗುಂಡ್ಲುಪೇಟೆ ತಾಲೂಕಿನಿಂದ 7, ಕೊಳ್ಳೇಗಾಲ ತಾಲೂಕಿನಿಂದ 2, ಹನೂರು ತಾಲೂಕಿನಿಂದ 1 ಪ್ರಕರಣ ವರದಿಯಾಗಿದೆ. ಯಳಂದೂರು ತಾಲೂಕಿನಿಂದಲೂ ಯಾವುದೇ ಪ್ರಕರಣ ಇಲ್ಲ.
ಇಂದಿನ ಪ್ರಕರಣಗಳು: 10
ಇಂದು ಗುಣಮುಖ: 19
ಒಟ್ಟು ಗುಣಮುಖ: 5838
ಇಂದಿನ ಸಾವು: 00
ಒಟ್ಟು ಸಾವು: 127
ಸಕ್ರಿಯ ಪ್ರಕರಣಗಳು: 144
ಒಟ್ಟು ಸೋಂಕಿತರು: 6109
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.