ಕೋವಿಡ್ ರೂಪಾಂತರಿ ವೈರಸ್; ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ :ಸಚಿವ ಡಾ.ಕೆ.ಸುಧಾಕರ್
ಎಲ್ಲಾ ರೋಗಿಗಳ ಮಾದರಿಗಳು ಜಿನೋಮ್ ಸೀಕ್ವೆನ್ಸಿಂಗ್‌ಗೆ
Team Udayavani, Dec 21, 2022, 3:31 PM IST
ಬೆಳಗಾವಿ : ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ. ಇದಕ್ಕೆ ಈಗಾಗಲೇ ಕ್ರಮ ವಹಿಸಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತಿ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಇಲ್ಲಿಯೂ ನಿಗಾ ಇರಿಸಲು ಆರಂಭಿಸಲಾಗುವುದು. ಎರಡು ಡೋಸ್‌ಗಳಲ್ಲಿ ಶೇ.100 ರಷ್ಟು ಸಾಧನೆಯಾಗಿದೆ. ಆದರೆ ಅನೇಕರು ಮೂರನೇ ಡೋಸ್ ಪಡೆದಿಲ್ಲ. ಅಂತಹವರು ಮುಂದೆ ಬಂದು ಮೂರನೇ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.
ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನ ಕೂಡ ಪಡೆದುಕೊಂಡು ಕ್ರಮ ವಹಿಸಲಾಗುವುದು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು. ಹಾಗೆಯೇ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.