ಬಂಟ್ವಾಳ: ಕೋವಿಡ್ ಸೋಂಕಿಗೆ 70 ವರ್ಷದ ವೃದ ಸಾವು!
Team Udayavani, Jul 13, 2020, 4:54 PM IST
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೋವಿಡ್ ಸೋಂಕು ದೃಢಪಟ್ಟು ಮತ್ತೊಂದು ಸಾವು ಸಂಭವಿಸಿದ್ದು, ಬಿ.ಸಿ.ರೋಡು ಕೈಕಂಬ ನಿವಾಸಿ 70 ವರ್ಷದ ವೃದ್ಧ ಮೃತಪಟ್ಟಿದ್ದಾರೆ.
ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಈ ವೇಳೆ ಅವರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು ಆ ವರದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಸೋಮವಾರ ಕೈಕಂಬದ ಧಪನ ಭೂಮಿಯಲ್ಲಿ ನಡೆಸಲಾಯಿತು. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.