ಕೋವಿಡ್ ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್ ಕೇಸ್ : ಸಚಿವ ಸುಧಾಕರ್
ಖಾಸಗಿ ಆಸ್ಪತ್ರೆಗಳು ಸಕಾ೯ರದ ಜತೆ ಸಹಕರಿಸುವಂತೆ ವಿನಂತಿ
Team Udayavani, Jul 5, 2020, 7:54 PM IST
ಬೆಂಗಳೂರು : ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಜಯನಗರ ಸಾವ೯ಜನಿಕ ಆಸ್ಪತ್ರೆ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ವಿಧಾನಸೌಧಕ್ಕೆ ಮರಳಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಭಾನುವಾರ ಈ ವಿವರ ನೀಡಿದರು.
ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳ ಜತೆ ಸಕಾ೯ರ ಮಾತುಕತೆ ನಡೆಸಿದೆ. ಸಭೆಯಲ್ಲಿ ತಮ್ಮಲ್ಲಿರುವ ಅಧ೯ದಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಬಿಟ್ಟುಕೊಡುವುದಾಗಿ ಭರವಸೆ ನೀಡಿದ್ದರು. ತಕ್ಷಣದಿಂದಲೇ 2,734 ಹಾಸಿಗೆ ನೀಡುವುದಾಗಿ ಅವರು ಮಾತುಕೊಟ್ಟಿದ್ದರು. ಇದುವರೆಗೆ ನೀಡಿರುವುದು ಕೇವಲ 116 ಮಾತ್ರ. ನಮಗೆ ಕೊಟ್ಟಿರುವ ಮಾಹಿತಿ ಪ್ರಕಾರ ಖಾಸಗಿ ಆಸ್ಪತ್ರೆಗಳಲ್ಲಿ ನೇರವಾಗಿ ಬಂದು ದಾಖಲಾಗಿರುವ ಕೋವಿಡ್ ರೋಗಿಗಳ ಸಂಖ್ಯೆ 898 ಎಂದು ಗೊತ್ತಾಗಿದೆ. ಮಾತು ಕೊಟ್ಟಂತೆ ಸಕಾ೯ರಕ್ಕೆ ನೀಡಬೇಕಿರುವ ಹಾಸಿಗೆಗಳನ್ನು ಅವರು ಆದಷ್ಟು ಬೇಗ ಹಸ್ತಾಂತರಿಸಬೇಕು. ಇದರ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿಯೇ ಮುಖ್ಯಮಂತ್ರಿಯವರು ಕಂದಾಯ ಸಚಿವ ಆರ್. ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್ ಅವರನ್ನು ನೇಮಕ ಮಾಡಿದ್ದಾರೆ. ಸೋಮವಾರದಿಂದಲೇ ಅವರು ಕಾಯೋ೯ನ್ಮುಖರಾಗಲಿದ್ದಾರೆ ಎಂದು ತಿಳಿಸಿದರು.
ಇದಲ್ಲದೆ, ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳನ್ನು ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ. ಇದು ಆರೋಗ್ಯ ತುತು೯ ಪರಿಸ್ಥಿತಿ ಸಂದಭ೯ ಆಗಿರುವುದರಿಂದ ಈ ವಿಷಯದಲ್ಲಿ ರಾಜಿ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ದೂರು ಇದ್ದರೆ ಕರೆ ಮಾಡಿ : ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿ ಗೊಂದಲ ಆಗಿರುವುದು ನಿಜ. ಅದನ್ನು ಸರಿಪಡಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಅದಕ್ಕಾಗಿ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಸೋಮವಾರದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ. ಒಂದು ವೇಳೆ ಎಲ್ಲಿಯಾದರೂ ಚಿಕಿತ್ಸೆಯಲ್ಲಿ, ದಾಖಲು ಮಾಡಿಕೊಳ್ಳುವಲ್ಲಿ, ಟೆಸ್ಟ್ ವರದಿಗಳಿಗೆ ಸಂಬಂಧಿಸಿದ ದೂರು ಇದ್ದಲ್ಲಿ, ಚಿಕಿತ್ಸೆ ನಿರಾಕರಿಸಿದರೆ 1912 ನಂಬರಿಗೆ ಕರೆ ಮಾಡಿದರೆ ತಕ್ಷಣ ಸ್ಪಂದಿಸಲಾಗುತ್ತದೆ. ಇದಕ್ಕಾಗಿಯೇ ದಿನದ 24 ತಾಸು ಕಾಯ೯ ನಿವ೯ಹಿಸುವ ಕಾಲ್ ಸೆಂಟರ್ ಆರಂಭಿಸಲಾಗಿದೆ. ಆರಂಭದಲ್ಲಿ ಒಂದೆರಡು ದಿನ ಸಣ್ಣಪುಟ್ಟ ಸಮಸ್ಯೆ ಬರಬಹುದು, ಕ್ರಮೇಣ ಎಲ್ಲವೂ ಸರಿಯಾಗಲಿದೆ ಎಂದರು.
ನಗರದಲ್ಲಿ ಅಗತ್ಯ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾಗಿ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಹಾಲಿ ೧೦೮ ಸೇವೆಯಡಿ ಕಾಯ೯ ನಿವ೯ಹಿಸುತ್ತಿರುವ ಆಂಬ್ಯುಲೆನ್ಸ್‌ಗಳ ಹೊರತಾಗಿ ನಗರದ ಪ್ರತಿ ವಾಡಿ೯ಗೆ ಎರಡುರಂತೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತದೆ. ಯಾರಿಗೆ ಆಗಲಿ ಅಗತ್ಯವಿದ್ದಲ್ಲಿ 108 ಸಂಖ್ಯೆಗೆ ಕರೆ ಮಾಡಿ ಸೌಲಭ್ಯ ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಹೆಚ್ಚು ವಸೂಲಿ ಮಾಡುವಂತಿಲ್ಲ : ಕೆಲ ಮಾಧ್ಯಮಗಳಲ್ಲಿ ಕೋವಿಡ್ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸಕಾ೯ರ ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಟೆಸ್ಟ್ ಮಾಡಲಾಗಿದೆ. ನಯಾ ಪೈಸೆ ತೆಗೆದುಕೊಂಡಿಲ್ಲ. ಸಕಾ೯ರದ ವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ, ನಮ್ಮಿಂದ ಕಳುಹಿಸದ ರೋಗಿಗಳಿಗೆ 2,200ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನಮ್ಮಲ್ಲಿ ಒಟ್ಟು 80 ಪ್ರಯೋಗಾಲಯಗಳಿವೆ. ಅವುಗಳ ಪೈಕಿ ಕೆಲ ಲ್ಯಾಬ್‌ಗಳ ಮೇಲೆ ಒತ್ತಡವಿದೆ. ಇದನ್ನು ನಿವಾರಿಸಿ ದಿನದ 24ತಾಸಿನಲ್ಲಿ ವರದಿ ನೀಡುವ ವ್ಯವಸ್ಥೆ ಜಾರಿಗೊಳಿಸುವ ಸಲುವಾಗಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟೆಸ್ಟ್‌ಗಳ ಸಂಖ್ಯೆಯನ್ನು ದಿನವೊಂದಕ್ಕೆ 30 ಸಾವಿರಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಖಾಸಗಿ ಲ್ಯಾಬ್‌ಗಳೂ ಕೂಡ ಪೂಣ೯ ಪ್ರಮಾಣದಲ್ಲಿ ಟೆಸ್ಟ್‌ಗಳನ್ನು ಮಾಡಲೇ ಬೇಕು. ಒಂದು ವೇಳೆ ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು. ಅಂತಹ ಖಾಸಗಿ ಮೆಡಿಕಲ್ ಕಾಲೇಜುಗಳ ಮಾನ್ಯತೆ ನವೀಕರಣ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಆತಂಕ ಬೇಡ : ನಮ್ಮಲ್ಲಿ ಕೋವಿಡ್ ಕೇರ್ , ಸಕಾ೯ರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ೮೧೯ ಹಾಸಿಗೆಗಳ ಪೈಕಿ 152 ಖಾಲಿಯಿವೆ, ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 1899 ಹಾಸಿಗೆ ಪೈಕಿ 779 ಲಭ್ಯವಿವೆ, ಸಕಾ೯ರಿ ಆಸ್ಪತ್ರೆಗಳಲ್ಲಿ 611 ರಲ್ಲಿ ಇನ್ನೂ 105 ಖಾಲಿಯಿವೆ ಮತ್ತು ಖಾಸಗಿ ಆಸ್ಪತ್ರೆಗಳ ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ನಮಗೆ 2734 ಹಾಸಿಗೆ ನೀಡಬೇಕಿದ್ದು ಇದುವರೆಗೆ 116 ಮಾತ್ರ ನೀಡಿದ್ದಾರೆ.
ಹೀಗಾಗಿ ನಮ್ಮಲ್ಲಿ ಹಾಸಿಗೆ ಕೊರತೆ ಇಲ್ಲ. ಹಂಚಿಕೆಯಲ್ಲಿನ ಗೊಂದಲ ನಿವಾರಣೆ ಆಗಿ ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗಲಿದೆ. ಜನರು ಗೊಂದಲಕ್ಕೆ ಒಳಗಾಗುವ, ಆತಂಕಪಡುವ ಅಗತ್ಯವಿಲ್ಲ ಎಂದರು.
ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ ನಿಜ. ಅದನ್ನು ನಿರೀಕ್ಷಿಸಲಾಗಿತ್ತು, ಇನ್ನೂ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯವರು ಇದಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ನಮ್ಮವೈದ್ಯರು ಮತ್ತು ಸಿಬ್ಬಂದಿ ಕೂಡ ಹೈರಾಣಾಗಿದ್ದಾರೆ. ಅವರು ನಾಲ್ಕು ತಿಂಗಳುಗಳಿಂದ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ವಾಸ್ತವ ಸಂಗತಿ ಅಥ೯ ಮಾಡಿಕೊಂಡು ಸಾವ೯ಜನಿಕರು, ಪ್ರತಿ ಪಕ್ಷನಾಯಕರು ಸಕಾ೯ರದ ಜತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾನೂನು ಜಾರಿಗೆ ಚಿಂತನೆ
ಹಿರಿಯ ನಾಗರೀಕರಿಗೆ ಸೋಂಕು ತಗುಲದಂತೆ ನೋಡಿಕೊಳ್ಳುವ ಸವಾಲು ಎಲ್ಲರ ಮೇಲಿದೆ. ಅದಕ್ಕಾಗಿಯೇ ಅವರನ್ ಹೊರ ಕಳುಹಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಯುವಜನತೆ ಮೇಲಿದೆ. ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 60 ವಯಸ್ಸಿಗಿಂತ ಮೇಲ್ಪಟ್ಟವರು, ಜ್ವರ ಲಕ್ಷಣಗಳಿರುವ ಹಿರಿಯ ನಾಗರೀಕರನ್ನು ಟೆಸ್ಟ್‌ಗೆ ಒಳಪಡಿಸುವಂತೆ ಕಾಯ೯ಪಡೆಗಳಿಗೆ ಸೂಚನೆ ನೀಡಲಾಗಿದೆ. ಹಿರಿಯ ನಾಗರೀಕರನ್ನು ಮನೆಗಳಿಂದ ಹೊರ ಬಿಡಬಾರದು ಎಂಬ ಕಾನೂನು ಜಾರಿಗೂ ಚಿಂತನೆ ನಡೆಸಲಾಗುತ್ತಿದೆ. ತಜ್ಞರು ಮತ್ತು ಪ್ರಮುಖರ ಜತೆ ಈ ಕುರಿತು ಚಚಿ೯ಸಲಾಗುತ್ತಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.