ಕೊವಿಶೀಲ್ಡ್ ಸುರಕ್ಷಿತ; ಹಿಂಜರಿಕೆ ಬೇಡ : ಕೇಂದ್ರ ಸರಕಾರ ಸ್ಪಷ್ಟನೆ
Team Udayavani, Mar 24, 2021, 11:40 PM IST
ಹೊಸದಿಲ್ಲಿ: ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್‌ಫರ್ಡ್-ಆಸ್ಟ್ರಜೆನೆಕಾದ ಕೊವಿಶೀಲ್ಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಹೀಗಾಗಿ ಹಿಂಜರಿಕೆಯಿಲ್ಲದೇ ಎಲ್ಲರೂ ಲಸಿಕೆಯನ್ನು ಸ್ವೀಕರಿಸಬಹುದು.
ಹೀಗೆಂದು ಕೇಂದ್ರ ಸರಕಾರ ಬುಧವಾರ ಸ್ಪಷ್ಟಪಡಿಸಿದ್ದು, ದೇಶದಲ್ಲಿ ಲಸಿಕೆ ವಿತರಣೆ ಸರಾಗವಾಗಿ ಮುಂದುವರಿಯಲಿದೆ ಎಂದು ಹೇಳಿದೆ.
ಕೊವಿಶೀಲ್ಡ್ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂಥ ಅಡ್ಡ ಪರಿಣಾಮಗಳು ತಲೆದೋರಿವೆ ಎಂದು ಆರೋಪಿಸಿದ್ದ ಸುಮಾರು 10 ಐರೋಪ್ಯ ದೇಶಗಳು, ಲಸಿಕೆಯ ಬಳಕೆಗೆ ನಿಷೇಧ ಹೇರಿವೆ. ಈ ಹಿನ್ನೆಲೆಯಲ್ಲಿ ಬುಧವಾರ ಸ್ಪಷ್ಟನೆ ನೀಡಿದ ನೀತಿ ಆಯೋಗದ ಸದಸ್ಯ ಡಾ| ವಿ.ಕೆ. ಪೌಲ್, ಇತರ ದೇಶಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಂಥ ಸಮಸ್ಯೆ ತಲೆದೋರಿರುವ ಮಾಹಿತಿಯಿದೆ. ಆದರೆ ನಾವು ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿದ್ದೇವೆ. ಅಂತಹ ಯಾವುದೇ ಸಮಸ್ಯೆಯು ನಮ್ಮ ತಜ್ಞರ ಗಮನಕ್ಕೆ ಬಂದಿಲ್ಲ. ಹೀಗಾಗಿ ಹಿಂಜರಿಕೆಯಿಲ್ಲದೇ ಕೊವಿಶೀಲ್ಡ್ ಪಡೆಯಬಹುದು’ ಎಂದಿದ್ದಾರೆ.
ಹಬ್ಬಗಳ ವೇಳೆ ನಿರ್ಬಂಧ ಹೇರಿ: ರಾಜ್ಯಗಳಿಗೆ ಕೇಂದ್ರ
ದೇಶಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ದಿನೇದಿನೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ಹೆಜ್ಜೆಯಿಟ್ಟಿರುವ ಕೇಂದ್ರ ಸರಕಾರ, ಮುಂಬರುವ ಹಬ್ಬಗಳ ದಿನಗಳಲ್ಲಿ ಸೋಂಕು ವ್ಯಾಪಿಸುವಿಕೆ ತಡೆಗಾಗಿ ಸ್ಥಳೀಯ ಮಟ್ಟದಲ್ಲಿ ನಿರ್ಬಂಧಗಳನ್ನು ಹೇರುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಿದೆ.
ಸದ್ಯದಲ್ಲೇ ಹೋಳಿ, ಶಬೇ ಬರಾತ್, ಯುಗಾದಿ, ಬಿಹು, ಈಸ್ಟರ್, ಈದುಲ್ ಫಿತರ್ ಸೇರಿದಂತೆ ಹಲವು ಹಬ್ಬಗಳು ಬರಲಿದ್ದು, ಜನರು ಕೊರೊನಾ ಮಾರ್ಗಸೂಚಿಗಳನ್ನು ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡತೊಡಗಿದರೆ ಸೋಂಕಿನ ವ್ಯಾಪಿಸುವಿಕೆ ತಡೆಯಲು ಸಾಧ್ಯವೇ ಇಲ್ಲ. ಆದ್ದರಿಂದ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಮಟ್ಟದಲ್ಲಿ ನಿರ್ಬಂಧ ಹೇರಿಯಾದರೂ ಸೋಂಕಿನ ಪ್ರಸರಣ ತಡೆಯಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಆಡಳಿತಾಧಿಕಾರಿಗಳಿಗೆ ಕೇಂದ್ರ ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳು ಪತ್ರ ಬರೆದಿದ್ದಾರೆ.
ಇದನ್ನೂ ಓದಿ :ಓರ್ಲಿನ್ಸ್ ಮಾಸ್ಟರ್’ ಬ್ಯಾಡ್ಮಿಂಟನ್ : ದ್ವಿತೀಯ ಸುತ್ತಿಗೆ ಸೈನಾ ನೆಹ್ವಾಲ್
ಟಾಪ್ 10 ಜಿಲ್ಲೆಗಳಲ್ಲಿ ಬೆಂಗಳೂರು
ಅತೀ ಹೆಚ್ಚು ಸಕ್ರಿಯ ಸೋಂಕು ಪ್ರಕರಣಗಳಿರುವ ಟಾಪ್ 10 ಜಿಲ್ಲೆಗಳಲ್ಲಿ ಬೆಂಗಳೂರು ನಗರವೂ ಸ್ಥಾನ ಪಡೆದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರದ ಪುಣೆ, ನಾಗ್ಪುರ, ಮುಂಬಯಿ, ಥಾಣೆ, ನಾಸಿಕ್, ಔರಂಗಾಬಾದ್, ನಾಂದೇಡ್, ಜಲಗಾಂವ್ ಮತ್ತು ಅಕೋಲಾದಲ್ಲಿ ಹಾಗೂ ಕರ್ನಾಟಕದ ಬೆಂಗಳೂರು ನಗರದಲ್ಲಿ ಗರಿಷ್ಠ ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಹೇಳಿದೆ. ಮಹಾರಾಷ್ಟ್ರ ಮತ್ತು ಪಂಜಾಬ್‌ನಲ್ಲಿ ಸ್ಥಿತಿ ಗಂಭೀರವಾಗಿದ್ದು, ಭಾರೀ ಸಂಖ್ಯೆಯಲ್ಲಿ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ ಎಂದೂ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.