![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 13, 2021, 8:42 PM IST
ಮಂಡ್ಯ: ಕೆಆರ್‌ಎಸ್ ಜಲಾಶಯದ ಬೃಂದಾವನದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಜಾರಿ ಸಂಬಂಧ ವಿವಾದ ಉಂಟಾಗಿತ್ತು. ಅದಕ್ಕೆ ಮರು ಜೀವ ನೀಡಲು ಬಿಜೆಪಿ ಸರ್ಕಾರ ಮುಂದಾಗಿದೆ.
ಹಿಂದಿನ ಮೈತ್ರಿ ಸರ್ಕಾರದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಜಾರಿಗೊಳಿಸಲು ಮುಂದಾಗಿತ್ತು. ಇದಕ್ಕೆ ಜಿಲ್ಲೆಯ ರೈತರು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ಈಗ ಮತ್ತೆ ಅದನ್ನು ಜಾರಿಗೆ ತರಲು ಮುಂದಾಗಿದೆ. ಆ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದಿಢೀರ್ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
ಸಿಎಂ ನಿರ್ಧಾರ ಬಳಿಕ ಟೆಂಡರ್:
ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿರುವ ಅವರು, ಡಿಸ್ನಿಲ್ಯಾಂಡ್ ಮಾದರಿ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದರು. ನಂತರ ಮಾತನಾಡಿದ ಅವರು, ಡಿಸ್ನಿಲ್ಯಾಂಡ್ ಮಾದರಿ ಮೂಲಕ ಕೆಆರ್‌ಎಸ್ ಅಭಿವೃದ್ಧಿಪಡಿಸುವ ಮೂಲಕ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಮುಂದಾಗಿದ್ದೇವೆ. ಮುಖ್ಯಮಂತ್ರಿಗಳಿಗೂ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ಶೀಘ್ರವೇ ಅವರ ನಿರ್ಧಾರ ಪ್ರಕಟಿಸಲಿದ್ದಾರೆ. ಸಿಎಂ ನಿರ್ಧಾರದ ಬಳಿಕ ಗ್ಲೋಬಲ್ ಟೆಂಡರ್ ಕರೆದು ಅಭಿವೃದ್ಧಿ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪಾ ಸೇರಿದಂತೆ ಕಂದಾಯ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ :ಮುಂದಿನ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಏಳಕ್ಕೆ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ
ಯೋಜನೆಗೆ ಅಪಸ್ವರ:
ಸಚಿವ ಯೋಗೇಶ್ವರ್ ನಿರ್ಧಾರಕ್ಕೆ ಆರಂಭದಲ್ಲೇ ಅಪಸ್ವರ ಕೇಳಿ ಬಂದಿದ್ದು, ಒಂದೆಡೆ, ಪರಿಸರವಾದಿಗಳು ಮತ್ತು ರೈತರು ಕಳೆದ ಬಾರಿಯಂತೆ ಈ ಬಾರಿಯೂ ತೀವ್ರ ವಿರೋಧ ವ್ಯಕ್ತಪಡಿಸಲು ಮುಂದಾಗಿದ್ದಾರೆ. ಇದರ ಜತೆಗೆ ಸ್ಥಳೀಯ ಶಾಸಕ ಈ ಬಗ್ಗೆ ಪ್ರತಿಕ್ರಿಯಿಸಿ, ನನ್ನ ಕ್ಷೇತ್ರದ ಜನರಿಗೆ ಅನ್ಯಾಯ ಆಗಲು ನಾನು ಬಿಡಲ್ಲ. ಅನ್ಯಾಯ ಆಗುವಂಥ ಕಾಮಗಾರಿ ನಡೆಯಲ್ಲ ಎಂದಿದ್ದಾರೆ.
ವಿವಾದ ಹುಟ್ಟು ಹಾಕಿದ್ದ ಯೋಜನೆ:
ಹಿಂದಿನ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ, ಡಿಸ್ನಿಲ್ಯಾಂಡ್ ಮಾದರಿ ಮೂಲಕ ಕೆಆರ್‌ಎಸ್ ಬೃಂದಾವನ ಅಭಿವೃದ್ಧಿ ಯೋಜನೆಗೆ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು. ಈ ಯೋಜನೆಯಿಂದ ಕಾವೇರಿ ಕೊಳ್ಳದಲ್ಲಿ ಭಾರಿ ವಿವಾದ ಸೃಷ್ಟಿಸಿತ್ತು. ವಿವಾದ ಹೆಚ್ಚಾಗುತ್ತಿದ್ದಂತೆ ಸರ್ಕಾರ ಯೋಜನೆಯನ್ನು ಕೈಬಿಟ್ಟಿತ್ತು. ಇದೀಗ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲೂ ಕೂಡ ಡಿಸ್ನಿಲ್ಯಾಂಡ್ ಮಾದರಿ ಯೋಜನೆಗೆ ಜಾರಿಗೆ ಮುಂದಾಗಿದೆ.
You seem to have an Ad Blocker on.
To continue reading, please turn it off or whitelist Udayavani.