ಮಲಪ್ರಭಾ ನದಿ ದಂಡೆಯಲ್ಲಿ ಮೊಸಳೆ ಪ್ರತ್ಯಕ್ಷ
Team Udayavani, Jan 8, 2021, 3:40 PM IST
ಹೊಳೆಆಲೂರ: ಸಮೀಪದ ಮೆಣಸಗಿ ಗ್ರಾಮದ ಮಲಪ್ರಭಾ ನದಿ ದಂಡೆಯಲ್ಲಿ ಗುರುವಾರ ಸಾಯಂಕಾಲ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಮೊಸಳೆ ಕಾಣಿಸಿಕೊಂಡಿರುವ ಮೆಣಸಗಿ ಗ್ರಾಮದ ಮಲಪ್ರಭಾ ನದಿಯ ಎರಡೂ ದಂಡೆಯಲ್ಲಿ ನೂರಾರು ರೈತರ ಪಂಪ್‌ಸೆಟ್‌ಗಳಿದ್ದು, ನಿತ್ಯ ಕೃಷಿ ಕಾರ್ಯಗಳಿಗಾಗಿ ಹಾಗೂ ಹೂಲಗಳಿಗೆ ನೀರು ಹಾಯಿಸಲು ನದಿ ದಡಕ್ಕೆ ತೆರಳುವುದು ಸಹಜ. ಆಕಸ್ಮಿಕವಾಗಿ ಕಾಣಿಸಿಕೊಂಡಿರುವ ಮೊಸಳೆಯಿಂದ ರೈತರು ಆತಂಕಗೊಂಡಿದ್ದಾರೆ. ಮೊಸಳೆ ಕಾಣಿಸಿಕೊಂಡ ತಕ್ಷಣ ಎಲ್ಲ ರೈತರು ಭಯಗೊಂಡು ತಮ್ಮ ಪಂಪ್‌ಸೆಟ್ ಬಂದ ಮಾಡಿಕೊಂಡು ಮನೆಯತ್ತ ತೆರಳಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ
ಹೊಳೆಆಲೂರಿನ ಮಲಪ್ರಭಾ ನದಿಯಲ್ಲಿ ಅಂದಾಜು 45 ವರ್ಷದ 7 ಅಡಿ ಉದ್ದದ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಯವರು ಹಾಗೂ ಸ್ಥಳೀಯ ಪೊಲೀಸರು ಸತತ ಮೂರು ದಿನಗಳ ಶೋಧ ಕಾರ್ಯ ನಡೆಸಿದರೂ ಅದು ಪತ್ತೆಯಾಗಿರಲಿಲ್ಲ. ಆದರೆ, ನಾಲ್ಕನೇ ದಿನ ಶವವಾಗಿ ಪತ್ತೆಯಾಗಿತ್ತು.
ಇದನ್ನೂ ಓದಿ:“ಸ್ವಾಭಿಮಾನಿ ರೈತ”: ರೈತರಿಗೆ ಗುರುತಿನ ಚೀಟಿ ನೀಡಲು ಮುಂದಾದ ಸರ್ಕಾರ
ಮಲಪ್ರಭಾ ನದಿಯಲ್ಲಿ ನೀರು ಸಹ ಅಷ್ಟೊಂದು ಆಳವಾಗಿಲ್ಲ. ಬಹುಶಃ ನೆರೆ ಹಾವಳಿ ಸಂದರ್ಭದಲ್ಲಿ ನವಿಲು ತೀರ್ಥ ಆಣೆಕಟ್ಟೆಯಿಂದ ಇವು ಬಂದಿರಬಹುದು ಎಂಬ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಕೇವಲ ಎರಡು ತಿಂಗಳಲ್ಲಿ ಮತ್ತೆ ಮೊಸಳೆ ಕಾಣಿಸಿಕೊಂಡಿರುವುದು ಮೆಣಸಗಿ ಗ್ರಾಮ ಸೇರಿದಂತೆ ಶಿರೋಳ, ಹೊಳೆಮಣ್ಣೂರ, ಕಿತ್ತಲಿ ಸುತ್ತಲಿನ ಗ್ರಾಮಗಳ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ಮೊಸಳೆ ಕಾಣಿಸಿಕೊಂಡ ವಿಷಯವನ್ನು ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿದ್ದು, ಗದಗದಿಂದ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ನಡೆಸಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.