Crypto currency ವರ್ಗಾವಣೆಗೆ ಆ್ಯಪ್ ಅಪರಿಚಿತನ ಮಾತು ನಂಬಿ 1 ಕೋ.ರೂ.ಕಳೆದುಕೊಂಡ ವ್ಯಕ್ತಿ
Team Udayavani, May 28, 2024, 11:13 PM IST
ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿಯ ಮಾತು ನಂಬಿ ಕ್ರಿಪ್ಟೋ ಕರೆನ್ಸಿ ವರ್ಗಾವಣೆ ಮಾಡಲು ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಹಣ ಹಾಕಿ 1 ಕೋಟಿ ರೂಪಾಯಿಗೂ ಅಧಿಕ ಕಳೆದುಕೊಂಡಿರುವುದಾಗಿ ಕಡಬ ತಾಲೂಕಿನ ಇಚ್ಲಂಪಾಡಿ ಕೆಡಂಬೈಲಿನ 43 ವರ್ಷದ ವ್ಯಕ್ತಿಯೋರ್ವರು ಮಂಗಳೂರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ ವ್ಯವಹಾರ ಉದ್ಯಮ ನಡೆಸುತ್ತಿದ್ದು, 2023ರ ಜೂನ್ 25ರಂದು ಟೆಲಿಗ್ರಾಂನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಯುಎಸ್‌ಡಿಟಿ ಕ್ರಿಪ್ಟೋ ಕರೆನ್ಸಿಗೆ ಹಣ ವರ್ಗಾಯಿಸಲು ಬಿನೇನ್ಸ್ ಆ್ಯಪ್ ಮತ್ತು ಡೆಫಿ ಆ್ಯಪ್ ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದ. ಅದರಂತೆ ಆ ಎರಡು ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡಿದ್ದು, ಬಳಿಕ ಅಪರಿಚಿತ ನೀಡಿದ ಸೂಚನೆಗಳನ್ನು ಪಾಲಿಸಿ ತಮ್ಮ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 1,05,79,711 ರೂಪಾಯಿ ಹಣ ಹಾಕಿದ್ದರು. ತಾನು ಮೋಸ ಹೋಗಿರುವ ವಿಚಾರ ಸ್ವಲ್ಪ ತಡವಾಗಿ ಅರಿವಿಗೆ ಬಂದಿದ್ದು, ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್ಟಿ ಕಾಲನಿ ರಸ್ತೆ ಜಲ್ಲಿಕಲ್ಲು!
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Kinnigoli: ದಾಮಸ್ಕಟ್ಟೆ – ಏಳಿಂಜೆ ರಸ್ತೆ ಹೊಂಡಮಯ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.