ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನ: ಸಿಎಂ, ಸಚಿವ ನಾರಾಯಣಗೌಡರಿಂದ ಚಾಲನೆ
Team Udayavani, Dec 11, 2021, 5:27 PM IST
ಬೆಂಗಳೂರು: ‘ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.
ಸೈಬರ್ ಕ್ರೈಂ ತಡೆಗಟ್ಟುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವ ಪೀಳಿಗೆಗೆ ತರಬೇತಿ ನೀಡಲು ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನ ಕೈಗೊಳ್ಳಲಾಗಿದೆ.
ಸೈಬರ್ ಕ್ರೈಂಗೂ ಫಿಸಿಕಲ್ ಕ್ರೈಂಗೂ ವ್ಯತ್ಯಾಸ ಇದೆ. ಸರ್ಕಾರದ ಇಲಾಖೆಗಳಲ್ಲೂ ಸೈಬರ್ ಕ್ರೈಮ್ ಗಳಾಗಿರೋ ಉದಾಹರಣೆ ಇದ್ದಾವೆ. ನನ್ನ ಸುರಕ್ಷತೆಯನ್ನು ಹೇಗೆ ಮಾಡಿಕೊಳ್ಳುತ್ತೇನೋ, ಅದೇ ರೀತಿ ನನ್ನ ಡಿಜಿಟಲ್ ಸುರಕ್ಷತೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಬಹಳಷ್ಟು ಜನರು ಮೊಬೈಲ್ ಸೇರಿದಂತೆ ಡಿಜಿಟಲ್ ವಸ್ತುಗಳನ್ನು ಬಳಸುತ್ತಾರೆ. ಆದರೆ ಬಹಳಷ್ಟು ಜನ ವಿದ್ಯಾವಂತರಿಗೂ ಸೈಬರ್ ಸುರಕ್ಷತೆ ಬಗ್ಗೆ ಗೊತ್ತಾಗಲ್ಲ. ಬೆಂಗಳೂರಿನ ಎಫ್ ಎಸ್ ಎಲ್ ಕೇಂದ್ರ ಹೊಸ ಟೆಕ್ನಾಲಜಿಯನ್ನ ಹೊಂದಿದ್ದು, ಸೈಬರ್ ಪ್ರಕರಣಗಳನ್ನು ಪತ್ತೆ ಹಚ್ಚಲು ನಮ್ಮ ಕರ್ನಾಟಕ ಪೊಲೀಸರು ಸಮರ್ಥರಿದ್ದಾರೆ. ಯುವಕರ ಸುರಕ್ಷತೆಗೆ ಸರ್ಕಾರ ಸಾಕಷ್ಟು ಕ್ರಮ ತೆಗೆದುಕೊಂಡಿದೆ. ಡ್ರಗ್ಸ್‌ಗೆ ಕಡಿವಾಣ ಹಾಕುತ್ತಿದೆ. ಸೈಬರ್ ಮೂಲಕವೇ ನಡೆಯವ ಡಾರ್ಕ್ ವೆಬ್ ಗೂ ಕಡಿವಾಣ ಹಾಕುತ್ತಿರುವ ಮೊದಲ ರಾಜ್ಯ ನಮ್ಮ ಕರ್ನಾಟಕ. ಸೈಬರ್ ಪೊಲೀಸ್ ಠಾಣೆಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುತ್ತದೆ.ಸೈಬರ್ ಕ್ರೈಂ ತಡೆಗಟ್ಟುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದರು. ಸೈಬರ್ ಕ್ರೈಂಗೆ ಸಾಕಷ್ಟು ಬಡ ಕುಟುಂಬಗಳು ನಾಶವಾಗುತ್ತಿವೆ. ಸೈಬರ್ ಕ್ರೈಮ್ ಅನ್ನೋದು ವೈರಸ್ ಇದ್ದಂತೆ, ಅದನ್ನು ಸದೆ ಬಡೆಯಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಮತ್ತು ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ದೇಶದಲ್ಲೇ ಪ್ರಥಮವಾಗಿ ಅಭಿಯಾನ ನಡೆಸುತ್ತಿರುವುದಕ್ಕೆ ಸಂತಸವಾಗಿದೆ. ಎನ್‌ಎನ್ಎಸ್ ಸ್ವಯಂ ಸೇವಕರಿಗೆ ತರಬೇತಿ ನೀಡಿ ಅವರ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಕರ್ನಾಟಕದ ಎಲ್ಲಾ ಜಿಲ್ಲೆಯಲ್ಲೂ ತರಬೇತಿಯನ್ನು ನೀಡಿ, ಸರ್ಟಿಫಿಕೇಟ್ ಕೂಡ ನೀಡಲಾಗುತ್ತದೆ. ಮುಂದಿನ ಹಂತದಲ್ಲಿ ಪೊಲೀಸ್ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲೂ ಸೈಬರ್ ಸೇಫ್ ಸಂಬಂಧ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ. ಮಹಿಳೆಯರು, ಯುವ ಜನತೆ ಸೇರಿದಂತೆ ಎಲ್ಲರೂ ಸೈಬರ್ ವಂಚನೆಗಳಿಂದ ಸುರಕ್ಷಿತವಾಗಿರಬೇಕು. ಈ ನಿಟ್ಟಿನಲ್ಲಿ ಕೈಗೊಂಡಿರುವ ಈ ಅಭಿಯಾನ ಯಶಸ್ವಿಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಹುತೇಕರು ಮೊಬೈಲ್ ಬಳಸುತ್ತಿದ್ದಾರೆ. ಮೊಬೈಲ್ ಬಳಸುವುದರಿಂದ ಅನುಕೂಲವಾಗುವುದರ ಜೊತೆಗೆ ಅನಾನುಕೂಲವೂ ಹೆಚ್ಚಾಗುತ್ತಿದೆ. ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಜಾಗೃತಿ ಮುಖ್ಯವಾಗಿದೆ. ಕೊರೋನಾ ವಿರುದ್ಧ ಹೋರಾಡಿದ ರೀತಿಯಲ್ಲಿ ಸೈಬರ್ ಕ್ರೈಂ ವಿರುದ್ದವೂ ಒಗ್ಗಟ್ಟಿನ ಹೋರಾಟ ಇರಬೇಕಾಗುತ್ತದೆ. ಸ್ಯಾನಿಟೈಸರ್, ಮಾಸ್ಕ್ ಬಳಸಿ ಕೊರೋನಾ ಬಗ್ಗೆ ಎಚ್ಚರಿಕೆ ವಹಿಸಿದಂತೆಯೇ ಇಂಟರ್ನೆಟ್ ಬಳಸುವ ಸಂದರ್ಭದಲ್ಲಿ ಸೈಬರ್ ಕ್ರೈಂಗೆ ಅವಕಾಶ ಸಿಗದಂತೆ ಜಾಗರೂಕರಾಗಿರಬೇಕು ಎಂದು ರಮೇಶ್ ಅರವಿಂದ್ ಅವರು ಕರೆ ನೀಡಿದರು.
ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ,ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.