ಸೈಕ್ಲೋನ್: ನ 26ರಿಂದ ಮತ್ತೆ ಮಳೆ ; ಸಚಿವ ಆರ್.ಅಶೋಕ್ ಎಚ್ಚರಿಕೆ
Team Udayavani, Nov 25, 2021, 3:18 PM IST
ಬೆಂಗಳೂರು : ಎರಡನೇ ಸೈಕ್ಲೋನ್ ಪ್ರಭಾವ ಹಳೇ ಮೈಸೂರು ಹಾಗೂ ಉಡುಪಿ ಭಾಗದವರೆಗೂ ಆಗಲಿದೆ, ಈ ನಿಟ್ಟಿನಲ್ಲಿ ನವೆಂಬರ್ 26,27 ಮತ್ತು 28 ರಂದು ಜಿಲ್ಲಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆರ್. ಅಶೋಕ್ ಗುರುವಾರ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿಸಚಿವ ಆರ್.ಅಶೋಕ್ ಹೇಳಿಕೆ ನೀಡಿ, ‘ಮೂರು ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕು, ಬೆಂಗಳೂರಿನಲ್ಲೂ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಮಳೆ ಹಾನಿ ನಿಭಾಯಿಸಲು ಅಧಿಕಾರಿಗಳ ತಂಡವನ್ನು ಸಿಎಂ ರಚನೆ ಮಾಡಿದ್ದಾರೆ. ನಾನೂ ನಿಗಾ ಇಟ್ಟಿದ್ದೇನೆ’ ಎಂದು ಸರ್ಕಾರದ ಕ್ರಮ ಸಮರ್ಥಿಸಿಕೊಂಡರು.
‘ಚುನಾವಣೆಗಿಂತ ಮಳೆ ಹಾನಿ ಸಮಸ್ಯೆ ಮುಖ್ಯವಾಗಿದೆ. ಇದಕ್ಕೆ ಆದ್ಯತೆ ನೀಡಬೇಕು. ಚುನಾವಣೆ ಕೆಲಸ ಬಹುತೇಕ ಮುಗಿದಿದೆ. ಈ ನಿಟ್ಟಿನಲ್ಲಿ ಮಳೆ ಹಾನಿ ಸಮಸ್ಯೆ ಬಗೆಹರಿಸಲು ಆದ್ಯತೆ ಕೊಡಬೇಕಾಗಿದೆ. ನವೆಂಬರ್ 30 ರೊಳಗೆ ಬೆಳೆ ಹಾನಿ ವರದಿ ನೀಡಬೇಕು. ಪರಿಹಾರ ನೀಡುವ ಸಂದರ್ಭದಲ್ಲಿ ಕಟಾವು ಮಾಡಿದ ಬೆಳೆಯನ್ನೂ ಪರಿಗಣಿಸುತ್ತೇವೆ ಕೇವಲ ರಾಗಿ ಮಾತ್ರವಲ್ಲ, ಎಲ್ಲಾ ಬೆಳೆಗಳಿಗೆ ಪರಿಹಾರ ಕೊಡುತ್ತೇವೆ. ಬೆಳೆ ಪರಿಹಾರ ಕುರಿತು ಕಾಂಗ್ರೆಸ್ ಅಪಾದನೆ ಸುಳ್ಳು. ಡಾ. ಮನಮೋಹನ್ ಸಿಂಗ್ ಸರ್ಕಾರ ಬಿಡುಗಡೆ ಮಾಡಿದ್ದ ಪರಿಹಾರ ಹಣಕ್ಕಿಂದ ಮೂರು ಪಟ್ಟು ಹೆಚ್ಚು ಹಣವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನೀಡಿದೆ. ಅಂಕಿ ಅಂಶಗಳನ್ನು ನೋಡಿ, ಕಾಮಾಲೆ ಕಣ್ಣು ಬಿಟ್ಟು ನೋಡಿ’ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.