ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಗೆ ಡಿಕೆಶಿ ಆಗ್ರಹ
Team Udayavani, Mar 7, 2022, 3:07 PM IST
ಚಿಕ್ಕಬಳ್ಳಾಪುರ : ಗೃಹ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡಲೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.
ಹೋಟಲ್ ಗಳಲ್ಲಿ ಹೇಗೆ ದರ ನಿಗಧಿಯಾಗಿರುತ್ತದೆ ಅದೇ ರೀತಿಯಲ್ಲಿ ಗೃಹ ಇಲಾಖೆಯ ಹುದ್ದೆಗಳಿಗೆ ಇಂತಿಷ್ಟು ಹಣ ನೀಡಬೇಕೆಂದು ವರದಿಗಳು ಬಹಿರಂಗವಾಗಿದೆ ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಷಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮೊದಲಿಂದಲೂ ಹೇಳಿಕೊಂಡು ಬರುತ್ತಿದ್ದೇವೆ ಇದೀಗ ಮಾಧ್ಯಮದ ಮೂಲಕ ಬಹಿರಂಗವಾಗಿದೆ ಸರ್ಕಾರದ ನೀತಿ ಪಾರದರ್ಶಕವಾಗಿದ್ದರೆ ವರದಿ ಪ್ರಕರಟಸಿರುವ ಮಾಧ್ಯಮಗಳ ಮೇಲೆ ಮಾನಹಾನಿ ಮೊಕದ್ದಮೆಯನ್ನು ದಾಖಲು ಮಾಡಲಿ ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿ ಅಧಿಕಾರದಿಂದ ತೊಲಗಲಿ ಎಂದರು.
ಬೆಂಗಳೂರು ನಗರ ಸಹಿತ ಅನೇಕ ಜಿಲ್ಲೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಮೇಕೆದಾಟು ಹೋರಾಟವನ್ನು ಆರಂಭಿಸಿದ್ದೇವೆ ಯೋಜನೆಯ ಅನುಷ್ಠಾನಕ್ಕೆ ಪಕ್ಷಾತೀತ ಬೆಂಬಲವನ್ನು ನೀಡುತ್ತೇವೆ ಪ್ರಧಾನಮಂತ್ರಿಗಳ ಬಳಿ ನಿಯೋಗ ತೆರಳಿದರೆ ನಾವು ಸಾಥ್ ನೀಡಲು ಸಿದ್ದರಿದ್ದೇವೆ ಎಂದರು.
ಇದನ್ನೂ ಓದಿ : ಮಾರ್ಚ್ 13 ಕ್ಕೆ ಮಂಜುಗುಣಿಯಲ್ಲಿ ನೌಕಾ ವಿಹಾರೋತ್ಸವ,ಅಶ್ವ ರಥೋತ್ಸವ
ಕರ್ನಾಟಕ ಮತ್ತು ತಮಿಳುನಾಡಿನ ಸರ್ಕಾರ ಕುಳಿತುಕೊಂಡು ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ ಎಂದ ಶೀಖಾವತ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಮ್ಮ ನೀರು ನಮ್ಮಹಕ್ಕು ಎಂದು ಹೇಳಬೇಕಿತ್ತು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ನಮ್ಮ ನಾಯಕರು ಅವರ ನಾಯಕತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಬೇರೆಯವರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಮುಂದಿನ 20 ದಿನದೊಳಗೆ ಕ್ಷೇತ್ರದಲ್ಲಿ 50 ಸಾವಿರ ಸದಸ್ಯತ್ವ ಅಭಿಯಾನವನ್ನು ಪೂರ್ಣಗೊಳಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.