ಮೇಕೆದಾಟು ಪಾದಯಾತ್ರೆಗೆ ತಯಾರಿ, ನಿತ್ಯ 1 ಗಂಟೆ ನಡಿಗೆ : ಡಿಕೆಶಿ
Team Udayavani, Dec 30, 2021, 2:40 PM IST
ಬೆಂಗಳೂರು : ಮೇಕೆದಾಟು ಪಾದಯಾತ್ರೆಗೆ ತಯಾರಿ ಮಾಡುತ್ತಿದ್ದು, ನಿತ್ಯ 1 ಗಂಟೆ ನಡೆಯುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮೇಕೆ ದಾಟು ಪಾದಯಾತ್ರೆ ವೇಳೆ ಕೆಲವರು ಟೋಪಿ ಹಾಕಿದರೆ ಹಾಕಿಸಿಕೊಳ್ಳೋಣ. ಈಗ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡುತ್ತಿದ್ದು, ಅಲ್ಲಿನವರನ್ನು ಆಹ್ವಾನಿಸುತ್ತಿದ್ದೇನೆ. ಎಲ್ಲ ಸಂಘಟನೆಗಳು, ಕಲಾವಿದರು, ಧಾರ್ಮಿಕ ಮುಖಂಡರು ವಿದ್ಯಾರ್ಥಿಗಳು, ಅಪಾರ್ಟ್ ಮೆಂಟ್ ನಿವಾಸಿಗಳು, ಎಲ್ಲ ವರ್ಗದವರನ್ನೂ ಆಹ್ವಾನಿಸುತ್ತಿದ್ದೇನೆ ಎಂದರು.
ಯಾರು ಯಾವ ತಂತ್ರಗಾರಿಕೆ ಮಾಡುತ್ತಿದ್ದಾರೆ, ಯಾರು ದೆಹಲಿಗೆ ಹೋಗಿ ಏನೆಲ್ಲಾ ಮಾಡುತ್ತಿದ್ದಾರೆ, ಏನೆಲ್ಲಾ ಒತ್ತಡ ಹಾಕುತ್ತಿದ್ದಾರೆ, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದಲ್ಲಿ ಏನೇನಾಗುತ್ತಿದೆ ಎಂದೆಲ್ಲಾ ನನಗೆ ಗೊತ್ತಿದೆ. ನಾನು ಮುಂಚೆ ಒಬ್ಬರ ವಿರುದ್ಧ ಹೋರಾಡಬೇಕಿತ್ತು, ಈಗ ಇಬ್ಬರ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಇರಲಿ ಮಾಡೋಣ ಎಂದರು.
ಡಿ.ಕೆ. ಶಿವಕುಮಾರ್ ರಾಜಕೀಯ ಜೀವನದಲ್ಲಿ ದಳಪತಿಗಳ ವಿಚಾರವಾಗಿ 90 ರ ದಶಕ ಮತ್ತೆ ಮರುಕಳಿಸುತ್ತಿದೆಯೇ ಎಂಬ ಪ್ರಶ್ನೆಗೆ, ‘ನನಗೂ ದಳಪತಿಗಳಿಗೂ ಯಾವುದೇ ರೀತಿಯ ರಾಜಕಾರಣ ಇಲ್ಲ. ಕಾಂಗ್ರೆಸಿಗನಾಗಿ ಕಾಂಗ್ರೆಸ್ ವಿರುದ್ಧ ಇರುವ ಎಲ್ಲ ಪಕ್ಷಗಳ ವಿರುದ್ಧ ನಾನು ಹೋರಾಡುತ್ತೇನೆ. ಕೇವಲ ಒಂದು ವರ್ಗ, ಜಾತಿ ವಿರುದ್ಧದ ಮೇಲೆ ನನ್ನ ಹೋರಾಟವಿಲ್ಲ ಎಂದರು.
ಬಿಜೆಪಿ, ದಳದವರು ತಮ್ಮ ಅನುಕೂಲಕ್ಕಾಗಿ ಟ್ವೀಟ್ ಮಾಡುತ್ತಿದ್ದಾರೆ. ಯೋಜನೆಯ ಡಿಪಿಆರ್ ನ ದಿನಾಂಕ ಸಮೇತ ದಾಖಲೆಗಳನ್ನು ನೀಡುತ್ತೇನೆ. ನಾನು ಅವರ ರೀತಿ ಮಾತನಾಡುವುದಿಲ್ಲ. ನಾನು ಮಾತನಾಡಿದರೆ ದಾಖಲೆ ಸಮೇತ ಮಾತನಾಡುತ್ತೇನೆ. ಈ ಹೋರಾಟಕ್ಕೆ ಎಲ್ಲರಿಗೂ ಆಹ್ವಾನ ನೀಡುತ್ತೇನೆ. ಪಾದಯಾತ್ರೆ ವಿಚಾರವಾಗಿ ಇಂದು ಹೆಚ್ಚಾಗಿ ಚರ್ಚೆ ಬೇಡ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ’ ಎಂದರು.
ವಾಣಿಜ್ಯ ಮಂಡಳಿಗೆ ಭೇಟಿ
ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕರ್ನಾಟಕ ಚಲನ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ, ಅಲ್ಲಿನ ಪದಾಧಿಕಾರಿಗಳು, ಕನ್ನಡ ಚಲನಚಿತ್ರರಂಗದ ಸಮಸ್ತರೂ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಉಪಾಧ್ಯಕ್ಷರಾದ ಗಣೇಶ್, ಬಣಕಾರ್, ನಾಗಣ್ಣ, ಬಾಬ್ಜಿ, ಕಾರ್ಯದರ್ಶಿ ಎಂ.ಎನ್. ಸುರೇಶ್, ಖಜಾಂಚಿ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ, ಸಾ.ರಾ. ಗೋವಿಂದ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಂದರರಾಜ್ ಉಪಸ್ಥಿತರಿದ್ದರು.
ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ
ನಾನು ಅಧ್ಯಕ್ಷನಾದ ಮೇಲೆ ಮಾತ್ರ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ. ಅದರಲ್ಲೂ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದು ಸ್ಪಷ್ಟವಾಗಿದೆ. ಮತದಾರರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಸಾಮಾನ್ಯವಾಗಿ ಶಾಸಕರಿರುವ ಕಡೆ ಆಡಳಿತ ಪಕ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಇರುತ್ತದೆ. ಬಿಜೆಪಿ ಆಡಳಿತ ಪಕ್ಷವಾಗಿದ್ದರೂ, ಬಿಜೆಪಿ ಶಾಸಕರಿದ್ದರೂ ಜನರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಇದು ರಾಜ್ಯದ ಜನರ ಭಾವನೆ ಯಾವ ರೀತಿ ಇದೆ ಎಂಬುದಕ್ಕೆ ಸಾಕ್ಷಿ. ಇನ್ನೂ ಫಲಿತಾಂಶ ಬರುವುದು ಬಾಕಿ ಇದೆ. ಪೂರ್ಣ ಫಲಿತಾಂಶ ಬಂದ ನಂತರ ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ ಎಂದರು.
ಇದು ಮುಂಬರುವ ವಿಧಾನಸಭೆ ಚುನಾವಣೆ ದಿಕ್ಸೂಚಿಯೇ ಎಂಬ ಪ್ರಶ್ನೆಗೆ, ‘ಮಾಧ್ಯಮಗಳೇ ಇದನ್ನು ವಿಮರ್ಶೆ ಮಾಡಲಿ. ಆಡಳಿತ ಪಕ್ಷವಿದ್ದರೂ, ಶಾಸಕರು, ಮಂತ್ರಿಗಳ ಕ್ಷೇತ್ರದಲ್ಲಿ ಏನೇನಾಗಿದೆ, ಜನ ಯಾವ ರೀತಿ ತೀರ್ಪು ನೀಡುತ್ತಿದ್ದಾರೆ ಎಂಬುದನ್ನು ನೋಡಿ. ಜನರ ತೀರ್ಪನ್ನು ನಿರ್ಲಕ್ಷಿಸಿ ಸಬೂಬು ಹೇಳಲು ಬಿಜೆಪಿಗೆ ಸಾಧ್ಯವಿಲ್ಲ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದು, ಅವರ ನಿರೀಕ್ಷೆಯಂತೆ ನಡೆಯಬೇಕಾಗುತ್ತದೆ.
ಅತಿದೊಡ್ಡ ತಪ್ಪು
ಹಿಂದೂ ದೇವಾಲಯಗಳನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಯಿಂದ ಹೊರಗಿಟ್ಟು, ಸ್ಥಳೀಯರ ನಿಯಂತ್ರಣಕ್ಕೆ ನೀಡುತ್ತಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ರಾಜ್ಯ ಸರ್ಕಾರ ಅತಿದೊಡ್ಡ ತಪ್ಪು ಮಾಡುತ್ತಿದೆ. ದೇವಾಲಯಗಳು ರಾಜ್ಯದ ಸಂಪತ್ತು. ಈ ದೇವಾಲಯಗಳಿಂದ ಸರಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ಸಂಗ್ರಹವಾಗುತ್ತದೆ. ಸರಕಾರದ ನಿಲುವು ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಹಿರಿಯ ನಾಯಕರ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರಕ್ಕೆ ಬರುತ್ತೇವೆ’ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.