ಡಿ.ಕೆ.ಶಿವಕುಮಾರ್ ಕೂಡ ಹೆಣಗಾಡುತ್ತಿದ್ದಾರೆ : ಡಾ.ಜಿ.ಪರಮೇಶ್ವರ್ ಹೇಳಿಕೆ
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತತ 8ವರ್ಷಗಳ ಕಾಲ ನಿಭಾಯಿಸಿದ್ದೆ
Team Udayavani, Dec 9, 2022, 10:11 PM IST
ಕೊರಟಗೆರೆ: ”ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸತತವಾಗಿ 8ವರ್ಷಗಳ ಕಾಲ ಕುಳಿತು ನಿಭಾಯಿಸಿದ್ದೇನೆ.ಅದು ಅಷ್ಟು ಸುಲಭವಾದ ಮಾತಲ್ಲ. ಕಾಂಗ್ರೆಸ್ ಪಕ್ಷ ಅಷ್ಟು ಜವಾಬ್ದಾರಿಯನ್ನು ನನ್ನ ಮೇಲೆ ನಂಬಿಕೆ ಇಟ್ಟು ನೀಡಿತ್ತು.ಇಡೀ ರಾಜ್ಯದಲ್ಲಿ ಪಕ್ಷದ ಆಗು ಹೋಗುಗಳನ್ನು ನಿಭಾಯಿಸಲು ಡಿ.ಕೆ.ಶಿವಕುಮಾರ್ ಕೂಡ ಹೆಣಗಾಡುತ್ತಿದ್ದಾರೆ” ಎಂದು ಮಾಜಿ ಡಿಸಿಎಂ, ಶಾಸಕ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ರಂಗನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಗಳ ಶಂಕುಸ್ಥಾಪನೆ ಮಾಡಿ ಮಾತನಾಡಿ,” 2018 ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನನ್ನು ಮತ್ತೆ ಆಯ್ಕೆ ಮಾಡಿದಾಗ ರಾಜ್ಯದ ಉಪಮುಖ್ಯಮಂತ್ರಿಯಾದೆ, ಕ್ಷೇತ್ರಕ್ಕೆ ಸಾಕಷ್ಟು ಅಭಿವೃದಿ ಕೆಲಸಗಳನ್ನು ಮಾಡಿದೆ, ನಮ್ಮ ಸಮ್ಮಿಶ್ರ ಸರ್ಕಾರ ಪತನವಾದರೂ ಸಹ ಕ್ಷೇತ್ರದ ಅಭಿವೃದಿಯನ್ನು ನಿಲ್ಲಿಸದೇ ಸಾಕಷ್ಟು ಶ್ರಮವಹಿಸಿದ್ದೇನೆ” ಎಂದರು.
”ಹಲವಾರು ಗ್ರಾಮಗಳಲ್ಲಿ ಅಭಿವೃದ್ದಿ ಕೆಲಸಗಳು ಆಗಬೇಕಿವೆ, ನನ್ನ ಅಭಿವೃದ್ದಿ ಕೆಲಸಗಳನ್ನು ಕ್ಷೇತ್ರದ ಜನರ ಮನೆ ಬಾಗಿಲಿಗೆ ತಲುಪಿಸುತ್ತೇನೆ. ನಾನು ಮಧುಗಿರಿಯಲ್ಲಿ 20 ವರ್ಷ, ಕೊರಟಗೆರೆ ಕ್ಷೇತ್ರದಲ್ಲಿ15 ವರ್ಷ ರಾಜಕೀಯ ಮಾಡಿ ಜನರ ಒಡನಾಟ ಹೊಂದಿದ್ದೇನೆ. ಆದರೆ ಇತ್ತೀಚೆಗೆ ರಾಜಕೀಯಕ್ಕೆ ಕೆಲವರು ಜನರ ಬಳಿ ನೃತ್ಯಗಳನ್ನು ಮಾಡಲು ಬರುತ್ತಿದ್ದಾರೆ. ಜನರು ಅದನ್ನು ತೀರ್ಮಾನಿಸುತ್ತಾರೆ. ಕ್ಷೇತ್ರದ ಜನರ ಋಣ ತೀರಿಸುವ ಕೆಲಸವನ್ನು ಮಾಡುತ್ತಿದ್ದೇನೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.