ಸಮಗ್ರ ಅಭಿವೃದ್ಧಿ ಪರಿಗಣಿಸಿ ರಾಷ್ಟ್ರ ಮಾನ್ಯತೆ :ದೇಶದ 75 ಜಿ.ಪಂ. ಪೈಕಿ ದ.ಕನ್ನಡಕ್ಕೂ ಸ್ಥಾನ
Team Udayavani, Mar 14, 2021, 5:10 AM IST
ಮಹಾನಗರ: ಬಯಲು ಶೌಚ ಮುಕ್ತ ಜಿಲ್ಲೆಯಾಗಿ ಘೋಷಿಸಲ್ಪಟ್ಟಿರುವ, ಕೇಂದ್ರ ಸರಕಾರದ ವಿವಿಧ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡಿರುವ ಮತ್ತು ನರೇಗಾ ಯೋಜನೆಯಡಿ ಹಲವು ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈಗ ಮತ್ತೂಮ್ಮೆ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಉತ್ತಮ ಸಾಧನೆಗೈದ ದೇಶದ ಒಟ್ಟು 75 ಜಿಲ್ಲಾ ಪಂಚಾಯತ್‌ಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೂಡ ಸ್ಥಾನ ಪಡೆದಿದೆ. ದಾವಣಗೆರೆ, ಕೊಡಗು ಮತ್ತು ಮಂಡ್ಯ ಆಯ್ಕೆಯಾಗಿರುವ ರಾಜ್ಯದ ಇತರ ಮೂರು ಜಿ.ಪಂ.ಗಳು.
ಹಲವು ಸಾಧನೆಗಳು
ಸಮಗ್ರ ಅಭಿವೃದ್ಧಿಯನ್ನು ಪರಿಗಣಿಸಿ ಜಿ.ಪಂ.ಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಸ್ವತ್ಛತೆ, ಅನುದಾನದ ಸದ್ಬಳಕೆ ಮೊದಲಾದ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ದ.ಕ. ಈಗಾಗಲೇ ಬಯಲು ಶೌಚ ಮುಕ್ತ ಜಿಲ್ಲೆ ಎಂದು ಘೋಷಿಸಲ್ಪಟ್ಟಿದೆ.
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿಯೂ ಗುರುತಿಸಲ್ಪಟ್ಟಿದೆ. ಮಹಾತ್ಮಾಗಾಂಧಿ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಕೂಡ ಉತ್ತಮ ಸಾಧನೆ ದಾಖಲಿಸಿದೆ. ನರೇಗಾ ಯೋಜನೆಯಡಿ ಅಂಗನವಾಡಿ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವುದು, ಶಾಲಾ ಆವರಣ ಗೋಡೆಗಳನ್ನು ನಿರ್ಮಿಸುವುದು, ಬಚ್ಚಲು ಗುಂಡಿಗಳ ನಿರ್ಮಾಣ ಮೊದಲಾದವುಗಳನ್ನು ಯಶಸ್ವಿಯಾಗಿ ನಡೆಸಿ ಮಾದರಿಯಾಗಿದೆ. ಅಲ್ಲದೆ ಘನ ದ್ರವ ತ್ಯಾಜ್ಯ ಘಟಕಗಳ ನಿರ್ಮಾಣದಲ್ಲಿಯೂ ಮುಂಚೂಣಿಯಲ್ಲಿದೆ. 14ನೇ (ಪ್ರಸ್ತುತ 15ನೇ) ಹಣಕಾಸು ಅನುದಾನವನ್ನು ಬಳಕೆ ಮಾಡುವಲ್ಲಿಯೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉತ್ತಮ ಸಾಧನೆ ತೋರಿದೆ.
ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ)ದಲ್ಲಿಯೂ ಗಮನಾರ್ಹ ಸಾಧನೆ ದಾಖಲಾಗಿದೆ.
ಸಮಗ್ರ ಅಭಿವೃದ್ಧಿ ಪರಿಗಣನೆ
ನಿರ್ದಿಷ್ಟವಾಗಿ ಪರಿಗಣಿಸಿಲ್ಲ. ಸ್ವತ್ಛತೆ, ಅನುದಾನಗಳ ಬಳಕೆ ಸೇರಿದಂತೆ ಸಮಗ್ರ ಅಭಿವೃದ್ಧಿಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.
-ಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದ.ಕ. ಜಿ.ಪಂ.
ಉತ್ತಮ ಸಾಧನೆ
ದ.ಕ. ಜಿಲ್ಲೆ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮುಂದುವರಿದಿದೆ. ನರೇಗಾದಲ್ಲಿಯೂ ಉತ್ತಮ ಸಾಧನೆಯಾಗುತ್ತಿದೆ. ಸ್ವತ್ಛತೆಯ ವಿಭಾಗದಲ್ಲಿಯೂ ಕೆಲಸಗಳು ನಡೆಯುತ್ತಿವೆ. ಪಂಚಾಯತ್ ರಾಜ್ ವ್ಯವಸ್ಥೆಯ ಒಟ್ಟಾರೆ ಅನುಷ್ಠಾನ ಕೂಡ ಉತ್ತಮವಾಗಿದೆ. -ಶೀನ ಶೆಟ್ಟಿ, ಮಾಜಿ ಓಂಬುಡ್ಸ್‌ಮನ್, ಜಿಲ್ಲಾ ಸ್ವತ್ಛತಾ ರಾಯಭಾರಿ, ದ.ಕ ಜಿ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.