ದಾವಣಗೆರೆ ಜಿಲ್ಲೆಯಲ್ಲಿ 398 ಮಂದಿ ಗುಣಮುಖ : 143 ಹೊಸ ಪ್ರಕರಣ ಪತ್ತೆ

Team Udayavani, Jun 6, 2021, 9:10 PM IST

ದಾವಣಗೆರೆ ಜಿಲ್ಲೆಯಲ್ಲಿ 398 ಮಂದಿ ಗುಣಮುಖ : 143 ಹೊಸ ಪ್ರಕರಣ ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಕೊರೊನಾದಿಂದ 398 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 134 , ಹರಿಹರದಲ್ಲಿ 83, ಜಗಳೂರಿನಲ್ಲಿ 17, ಚನ್ನಗಿರಿಯಲ್ಲಿ 88, ಹೊನ್ನಾಳಿಯಲ್ಲಿ 72 ಹಾಗೂ ಹೊರ ಜಿಲ್ಲೆಯ ನಾಲ್ವರು ಒಳಗೊಂಡಂತೆ 398 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಮತ್ತೊಮ್ಮೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದ ಸಂಖ್ಯೆಯೇ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಭಾನುವಾರ 143 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 50 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 13 , ಜಗಳೂರಿನಲ್ಲಿ 6, ಚನ್ನಗಿರಿಯಲ್ಲಿ 30, ಹೊನ್ನಾಳಿಯಲ್ಲಿ 40 ಹಾಗೂ ಹೊರ ಜಿಲ್ಲೆಯ ನಾಲ್ವರು ಒಳಗೊಂಡಂತೆ 143 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಇದನ್ನೂ ಓದಿ :ವಿದ್ಯುತ್ ಆಘಾತದಿಂದ ಮೃತಪಟ್ಟ ವಾನರ : ಮೆರವಣಿಗೆ ಮೂಲಕ ಅಂತ್ಯ ಸಂಸ್ಕಾರ ಮಾಡಿದ ಗ್ರಾಮಸ್ಥರು

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 24087, ಹರಿಹರದಲ್ಲಿ 6262, ಜಗಳೂರಿನಲ್ಲಿ 2387, ಚನ್ನಗಿರಿಯಲ್ಲಿ5342, ಹೊನ್ನಾಳಿಯಲ್ಲಿ 5576, ಹೊರ ಜಿಲ್ಲೆಯ 1304 ಜನರು ಸೇರಿದಂತೆ ಈವರೆಗೆ ಒಟ್ಟು 34,958 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 22214, ಹರಿಹರದಲ್ಲಿ 5716, ಜಗಳೂರಿನಲ್ಲಿ 2145, ಚನ್ನಗಿರಿಯಲ್ಲಿ 4794, ಹೊನ್ನಾಳಿಯಲ್ಲಿ 4609, ಹೊರ ಜಿಲ್ಲೆಯ 1212 ಜನರು ಸೇರಿದಂತೆ 40690 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3877 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ ಆರು ಜನರು ಮೃತಪಟ್ಟಿದ್ದಾರೆ. ಹೊನ್ನಾಳಿಯ ಸಾಗರಪೇಟೆಯ 50 ವರ್ಷದ ಮಹಿಳೆ, ದಾನಿಹಳ್ಳಿಯ 80 ವರ್ಷದ ವೃದ್ಧ, ಹರಳಿಪುರದ 64 ವರ್ಷದ ವೃದ್ಧೆ, ಹೊನ್ನಾಳಿ ಪಟ್ಟಣದ ನೂರಾನಿ ಮಸೀದಿ ಸಮೀಪದ ನಿವಾಸಿ 55 ವರ್ಷದ ವ್ಯಕ್ತಿ, 47 ವರ್ಷದ ವ್ಯಕ್ತಿ, ಮಠದ ರಸ್ತೆ ನಿವಾಸಿ 75 ವರ್ಷದ ವೃದ್ಧ ಮೃತಪಟ್ಟವರು. ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 391 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 217 ಸೋಂಕಿತರು ಸಾಮಾನ್ಯ, 720 ಸೋಂಕಿತರು ಆಕ್ಸಿಜನ್, 28 ಸೋಂಕಿತರು ಎನ್‌ಐವಿ, 52ಸೋಂಕಿತರು ವೆಂಟಿಲೇಟರ್ 34 ಸೋಂಕಿತರು ವೆಂಟಿಲೇಟರ್ ರಹಿತ, 1218 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 1022 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಜಿಲ್ಲೆಯಲ್ಲಿ ಭಾನುವಾರ ಒಬ್ಬರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 26, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 20, ಬಾಪೂಜಿ ಆಸ್ಪತ್ರೆಯಲ್ಲಿ ಇಬ್ಬರು, ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ಒಬ್ಬರು ಒಳಗೊಂಡಂತೆ ಒಟ್ಟು 49 ಜನರು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ ಈವರೆಗೆ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನುಳಿದ 30 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಚಿಗಟೇರಿ, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ತಲಾ 14, ಬಾಪೂಜಿ ಮತ್ತು ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.