ದಾವಣಗೆರೆ ಜಿಲ್ಲೆಯಲ್ಲಿ 789 ಮಂದಿ ಗುಣಮುಖ : 183 ಹೊಸ ಪ್ರಕರಣ ಪತ್ತೆ
Team Udayavani, Jun 15, 2021, 6:59 PM IST
ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಕೊರೊನಾದಿಂದ 789 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸತತ ಎರಡನೇ ದಿನ ಸೋಂಕಿತರಿಗಿಂತಲೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿರುವುದು ವಿಶೇಷ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 255 , ಹರಿಹರದಲ್ಲಿ 108, ಜಗಳೂರಿನಲ್ಲಿ 98, ಚನ್ನಗಿರಿಯಲ್ಲಿ 164, ಹೊನ್ನಾಳಿಯಲ್ಲಿ 155 ಹಾಗೂ ಹೊರ ಜಿಲ್ಲೆಯ ಒಂಭತ್ತು ಜನರು ಒಳಗೊಂಡಂತೆ 789 ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ 183 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 69 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 24, ಜಗಳೂರಿನಲ್ಲಿ 7 , ಚನ್ನಗಿರಿಯಲ್ಲಿ 30, ಹೊನ್ನಾಳಿಯಲ್ಲಿ 38 ಹಾಗೂ ಹೊರ ಜಿಲ್ಲೆಯ 15 ಜನರು ಒಳಗೊಂಡಂತೆ 183 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.
ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 25229, ಹರಿಹರದಲ್ಲಿ 6605 , ಜಗಳೂರಿನಲ್ಲಿ 2565, ಚನ್ನಗಿರಿಯಲ್ಲಿ 5862, ಹೊನ್ನಾಳಿಯಲ್ಲಿ 6004, ಹೊರ ಜಿಲ್ಲೆಯ 1403 ಜನರು ಸೇರಿದಂತೆ ಈವರೆಗೆ ಒಟ್ಟು 47,668 ಜನರು ಸೋಂಕಿಗೆ ಒಳಗಾಗಿದ್ದಾರೆ.
ಇದನ್ನೂ ಓದಿ :ಕೊವಿಡ್ ಲಸಿಕೆಯೊಂದಿಗೆ ಹಳ್ಳಿ ಹಳ್ಳಿಗೆ ಸಂಚರಿಸಲಿವೆ NEKRTC ಬಸ್
ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 23246, ಹರಿಹರದಲ್ಲಿ 6133, ಜಗಳೂರಿನಲ್ಲಿ 2412, ಚನ್ನಗಿರಿಯಲ್ಲಿ 5462, ಹೊನ್ನಾಳಿಯಲ್ಲಿ 5223, ಹೊರ ಜಿಲ್ಲೆಯ 1089 ಜನರು ಸೇರಿದಂತೆ 43,565 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3655 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಮಂಗಳವಾರ ಕೊರೊನಾದಿಂದ 7 ಜನರು ಮೃತಪಟ್ಟಿದ್ದಾರೆ. ದಾವಣಗೆರೆಯ ಮುದ್ದಾಭೋವಿ ಕಾಲೋನಿಯ 65 ವರ್ಷದ ವೃದ್ಧ, ಬೀರಲಿಂಗೇಶ್ವರ ಬಡಾವಣೆಯ 27 ವರ್ಷದ ಮಹಿಳೆ, ಎಂಸಿಸಿ ಎ ಬ್ಲಾಕ್‌ನ 72 ವರ್ಷದ ವೃದ್ಧೆ, ಹೊನ್ನಾಳಿ ತಾಲೂಕಿನ ಅರೇಹಳ್ಳಿಯ 33 ವರ್ಷದ ವ್ಯಕ್ತಿ, ಟಿ.ಜಿ. ಹಳ್ಳಿಯ ನಿವಾಸಿ 42 ವರ್ಷದ ವ್ಯಕ್ತಿ, ತಾಕನಹಳ್ಳಿಯ 22 ವರ್ಷದ ವ್ಯಕ್ತಿ, ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ 27 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈವರೆಗೆ ಮಹಾಮಾರಿ ಕೊರೊನಾದಿಂದ ಜಿಲ್ಲೆಯಲ್ಲಿ 448 ಜನರು ಸಾವನ್ನಪ್ಪಿದ್ದಂತಾಗಿದೆ.
ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 133 ಸೋಂಕಿತರು ಸಾಮಾನ್ಯ, 523 ಸೋಂಕಿತರು ಆಕ್ಸಿಜನ್, 25 ಸೋಂಕಿತರು ಎನ್‌ಐವಿ, 49 ಸೋಂಕಿತರು ವೆಂಟಿಲೇಟರ್ 34 ಸೋಂಕಿತರು ವೆಂಟಿಲೇಟರ್ ರಹಿತ, 466 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 761 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.
ಮೂವರಿಗೆ ಬ್ಯ್ಲಾಕ್ ಫಂಗಸ್
ಮಂಗವಾರ ಜಿಲ್ಲೆಯಲ್ಲಿ ಮೂರು ಜನರಲ್ಲಿ ಹೊಸದಾಗಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದೆ. ಕೊರೊನಾದಿಂದ ಗುಣಮುರಾದ ಜಿಲ್ಲಾ ಆಸ್ಪತ್ರೆಯಲ್ಲಿನ 3 ಜನರಿಗೆ ಬ್ಯ್ಲಾಕ್ ಫಂಗಸ್ ವಕ್ಕರಿಸಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 51, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 28, ಬಾಪೂಜಿ ಆಸ್ಪತ್ರೆಯಲ್ಲಿ ಇಬ್ಬರು, ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ಒಬ್ಬರು ಒಳಗೊಂಡಂತೆ 82 ಜನರು ಬ್ಯ್ಲಾಕ್ ಫಂಗಸ್‌ಗೆ ತುತ್ತಾಗಿದ್ದರು. ಅವರಲ್ಲಿ ಈವರೆಗೆ 37 ಜನರು ಗುಣಮುಖರಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ 28, ಎಸ್.ಎಸ್. ಹೈಟೆಕ್‌ನಲ್ಲಿ 15, ಬಾಪೂಜಿ ಮತ್ತು ಕಾಲೇಜ್ ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ತಲಾ ಒಬ್ಬರು ಒಳಗೊಂಡಂತೆ 45 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.