AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
ಮಹಿಳಾ ಹಾಗೂ ಮಕ್ಕಳ ಕಲ್ಯಾಣದಂತಹ ಪ್ರಮುಖ ಖಾತೆಯನ್ನು ಹೊಂದಿದ್ದರು
Team Udayavani, Nov 18, 2024, 1:32 PM IST
ನವದೆಹಲಿ: ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದ ಮಾಜಿ ಸಚಿವ, ಆಪ್ ನ ಪ್ರಭಾವಿ ಮುಖಂಡ ಕೈಲಾಶ್ ಗೆಹ್ಲೋಟ್ (Kailash Gahlot) ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಸೋಮವಾರ (ನ.18) ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ.
ಹರ್ಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ದೆಹಲಿ ಬಿಜೆಪಿ ವರಿಷ್ಠ ವೀರೇಂದ್ರ ಸಚ್ ದೇವ್ ಹಾಗೂ ಇತರ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ನಜಾಫ್ ಗಢ್ ಶಾಸಕ ಕೈಲಾಶ್ ಬಿಜೆಪಿಗೆ ಸೇರ್ಪಡೆಗೊಳ್ಳುವ ಮೂಲಕ ಅವರ ಮುಂದಿನ ರಾಜಕೀಯ ನಡೆ ಕುರಿತ ಊಹಾಪೋಹಕ್ಕೆ ತೆರೆ ಬಿದ್ದಂತಾಗಿದೆ.
ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್ ಗೆ ಆಪ್ತರಾಗಿದ್ದ ಕೈಲಾಶ್ ಗೆಹ್ಲೋಟ್ ಭಾನುವಾರ ತಕ್ಷಣಕ್ಕೆ ಅನ್ವಯವಾಗುವಂತೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ರಾಜೀನಾಮೆಯನ್ನು ಸ್ವೀಕರಿಸಿದ್ದರು.
ಗೆಹ್ಲೋಟ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಂಗ್ಲೋಯ್ ಜಾಟ್ ಕ್ಷೇತ್ರದ ಶಾಸಕ ರಘುವಿಂದರ್ ಶೂಕೀನ್ ಅವರನ್ನು ಸಚಿವ ಸ್ಥಾನಕ್ಕೆ ನೇಮಕ ಮಾಡುವುದಾಗಿ ಆಪ್ (AAP) ಘೋಷಿಸಿದೆ.
ಆಮ್ ಆದ್ಮಿ ಸರ್ಕಾರದಲ್ಲಿ ಕೈಲಾಶ್ ಗೆಹ್ಲೋಟ್ ಅವರು ಸಾರಿಗೆ, ಅಡಳಿತ ಸುಧಾರಣೆ, ಮಾಹಿತಿ ಮತ್ತು ತಂತ್ರಜ್ಞಾನ, ಗೃಹ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣದಂತಹ ಪ್ರಮುಖ ಖಾತೆಯನ್ನು ಹೊಂದಿದ್ದರು.
#WATCH | Delhi: Former Delhi Minister and AAP leader Kailash Gahlot joins BJP, in the presence of Union Minister Manohar Lal Khattar and other BJP leaders. pic.twitter.com/l2Ol8Umxe1
— ANI (@ANI) November 18, 2024
ಈ ಬೆಳವಣಿಗೆ ಕುರಿತು ಮೌನ ಮುರಿದ ಕೇಜ್ರಿವಾಲ್, ಅವರಿಗೆ (ಗೆಹ್ಲೋಟ್) ಮುಕ್ತ ಅವಕಾಶವಿದೆ. ಅವರು ಯಾವ ಪಕ್ಷಕ್ಕೂ ಬೇಕಾದರೂ ಸೇರ್ಪಡೆಯಾಗಬಹುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಸುಮೇಶ್ ಶೂಕೀನ್ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡ ವೇಳೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.