ಜ.15ರಿಂದ ಉನ್ನತ ಶಿಕ್ಷಣದ ಆಫ್‌ಲೈನ್ ತರಗತಿಗಳು ಪ್ರಾರಂಭ; ಹೊಸ SOP ಜಾರಿ: ಡಿಸಿಎಂ
Team Udayavani, Jan 12, 2021, 8:09 PM IST
ಬೆಂಗಳೂರು: ಜನವರಿ 15ರಿಂದ ಎಲ್ಲ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಆಫ್‌ಲೈನ್ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಎಸ್‌ಒಪಿ ಜಾರಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿ ಮೀರುವಂತಿಲ್ಲ. ಶಿಕ್ಷಣ ಸಂಸ್ಥೆಗಳ ಜತೆಗೆ, ವಿದ್ಯಾರ್ಥಿಗಳು ಕೂಡ ಪಾಲಿಸಬೇಕು ಎಂದು ಹೇಳಿದರು ಅಲ್ಲದೆ ವಿದ್ಯಾರ್ಥಿಗಳು ನೇರ ತರಗತಿಗಳಿಗೂ ಹಾಜರಾಗಬಹುದು, ಇಲ್ಲವೇ ಆನ್‌ಲೈನ್ ತರಗತಿಗೂ ಹಾಜರಾಗಬಹದು. ಆ ಆಯ್ಕೆ ವಿದ್ಯಾರ್ಥಿಗಳಿಗೇ ಇರಲಿದ್ದು. ಎರಡರಲ್ಲಿ ಒಂದಕ್ಕೆ ಹಾಜರಾತಿ ಕಡ್ಡಾಯ ಎಂದು ಅವರು ಹೇಳಿದರು.
ಹೊಸ ಎಸ್‌ಒಪಿಯಲ್ಲಿ ಏನೇನಿದೆ :
– ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಬೇಕು. ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರುವುದಿಲ್ಲ.
– ಮಾರ್ಗಸೂಚಿಯಂತೆ ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ನಿಯಮಗಳನ್ನು ಮೀರುವಂತಿಲ್ಲ. ದೈಹಿಕ ಅಂತರ ಕಡ್ಡಾಯ. ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿಕೊಳ್ಳಬೇಕು.
– ಬೋಧನಾ, ಪ್ರಾಕ್ಟಿಕಲ್, ಪ್ರಾಜೆಕ್ಟ್ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು.
– ನೇರ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳಿಗೆ ಹಾಜರಾಗಬಹುದು. ಇಂಥ ವಿದ್ಯಾರ್ಥಿಗಳಿಗೆ ಪಠ್ಯದ ಬಗ್ಗೆ ಇರುವ ಅನುಮಾನ, ಗೊಂದಲಗಳನ್ನು ನಿವಾರಿಸಲು ಪ್ರತಿದಿನ ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸಬಹುದು. ಇಂಥ ಸಂಪರ್ಕ ತರಗತಿಗಳನ್ನು ನಡೆಸುವಾಗಲೂ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು. ಪ್ರತಿ ಹಂತದಲ್ಲೂ ದೈಹಿಕ ಅಂತರ ಬಹಳ ಮುಖ್ಯವಾಗಿರುತ್ತದೆ.
– ಎಲ್ಲ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಐದು ತಿಂಗಳ ಕಾಲ ಪ್ರತಿ ತರಗತಿಗೆ ಸಂಬಂಧಿಸಿದ ಅಧ್ಯಯನ ಸಾಮಗ್ರಿಯನ್ನು ವಾಟ್ಸಾಪ್, ಇ ಮೇಲ್ ಅಥವಾ ಟೆಲಿಗ್ರಾಂ ಮೂಲಕ ಕಳಿಸಬೇಕು. ಇದು ಕಡ್ಡಾಯ. ಜತೆಗೆ, ವಿಡಿಯೋ ಪಾಠಗಳು, ಪವರ್ ಪಾಯಿಂಟ್ ಪ್ರೆಸೆಂಟೇಶನ್, ಇ-ಪುಸ್ತಕ, ಇ-ನೋಟ್ಸ್, ಆಡಿಯೋ ಪುಸ್ತಕ, ಅಭ್ಯಾಸ ಪ್ರಶ್ನೆಗಳನ್ನು ಇತ್ಯಾದಿ ಅಧ್ಯಯನ ಸಾಮಗ್ರಿಯನ್ನು ಕಡ್ಡಾಯವಾಗಿ ಕಾಲೇಜ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು.
– ಇನ್ನು ಆನ್‌ಲೈನ್ ಅಥವಾ ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಆನ್ ಕ್ಯಾಂಪಸ್ ಮತ್ತು ಆಫ್ ಕ್ಯಾಂಪಸ್ ಹಾಸ್ಟೆಲುಗಳಲ್ಲಿ ಉಳಿದುಕೊಳ್ಳಬಹುದು.
ಸಾಮಾನ್ಯ ಮಾರ್ಗಸೂಚಿ:
– ತರಗತಿಗಳ ಆರಂಭಕ್ಕೆ ಮುನ್ನ ಕಾಲೇಜಿನ ಕಟ್ಟಡ, ಮುಖ್ಯದ್ವಾರ, ಗ್ರಂಥಾಲಯ, ಶೌಚಾಲಯ, ಕೊಠಡಿ, ಪೀಠೋಪಕರಣ ಹಾಗೂ ಆಧ್ಯಯನ ಪುಸ್ತಕಗಳನ್ನು ಸ್ಯಾನಿಟೈಸ್ ಮಾಡಬೇಕು. ಜತೆಗೆ, ದ್ವಾರದಲ್ಲಿಯೇ ಎಲ್ಲರ ಥರ್ಮಲ್ ಸ್ಕೀನಿಂಗ್ ಹಾಗೂ ಸ್ಯಾನಿಟೈಸ್ ವ್ಯವಸ್ಥೆ ಕಡ್ಡಾಯ.
– ಎಲ್ಲ ವಿದ್ಯಾರ್ಥಿಗಳು, ಬೋಧಕರು, ಬೋಧಕೇತರ ಸಿಬ್ಬಂದಿ ಕೋವಿಡ್-19 ಪರೀಕ್ಷೆಗೆ ಒಳಪಡುವ ಅಗತ್ಯವಿಲ್ಲ. ಆದರೆ, ಕೋವಿಡ್ ಲಕ್ಷಣಗಳು ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹತ್ತಿರದಲ್ಲೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳೊಂದಿಗೆ ಎಲ್ಲ ಕಾಲೇಜುಗಳು ಮ್ಯಾಪಿಂಗ್ ಮಾಡಿಕೊಳ್ಳಬೇಕು.
– ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ.50 ಮೀರುವಂತಿಲ್ಲ. ಒಂದು ಹಾಜರಾತಿ ಹೆಚ್ಚಿದರೆ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಬೇಕು. ನೇರ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರು ತಂದುಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್ ಕೂಡ ಕಡ್ಡಾಯ. ಬೋಧಕರಿಗೂ, ಇತರೆ ಎಲ್ಲ ಸಿಬ್ಬಂದಿಗೂ ಇದು ಅನ್ವಯವಾಗುತ್ತದೆ.
– ಲೈಬ್ರರಿ, ಕ್ಯಾಂಟೀನ್ ಆರಂಭಕ್ಕೆ ಅಡ್ಡಿ ಇಲ್ಲ. ಆದರೆ ಮಾರ್ಗಸೂಚಿ ಮೀರುವಂತಿಲ್ಲ. ಜತೆಗೆ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಚಟುವಟಿಕೆಗಳನ್ನು ಕೋವಿಡ್ ಮಾರ್ಗಸೂಚಿಯಂತೆ ಆರಂಭಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.