ರಾಜ್ಯದ ಮೊದಲ ಆಕ್ಸಿಜನ್ ಘಟಕಕ್ಕೆ ಡಿಸಿಎಂ ಕಾರಜೋಳ ಚಾಲನೆ
Team Udayavani, May 21, 2021, 7:00 PM IST
ಮುಧೋಳ : ಕೊರೊನಾ ವೈರಸ್ ನಿಯಂತ್ರ ಹಿನ್ನೆಲೆ ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ಆಕ್ಸಿಜನ್ ಘಟಕಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಇಂದು ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾನಾಡಿದ ಅವರು, 18ರಿಂದ 20 ಜಂಬೂ ಸಿಲಿಂಡರ್ ಸಾಮರ್ಥ್ಯದ ಘಟಕದಲ್ಲಿ ಇನ್ನುಮುಂದೆ ನಿತ್ಯ ಆಕ್ಸಿಜನ್ ಉತ್ಪಾದನೆಯಾಗಲಿದ್ದು ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಹೆಚ್ಚಿನ ಸಹಕಾರಿಯಾಗಲಿದೆ ಎಂದು ಹೇಳಿದರು.
ಕೊರೊನಾ ನಿಯಂತ್ರಣಕ್ಕಾಗಿ ಅಧಿಕಾರಿಗಳು ಹಗಲಿರುಳು ಶ್ರಮಿಸಬೇಕು ಎಂದು ಸೂಚಿಸಿದರು.
ಜೆಕೆ ಸಿಮೆಂಟ್ಸ್ ನಿಂದ ವೆಂಟಿಲೇಟರ್ : ತಾಲೂಕಿನ ಜೆಕೆ ಸಿಮೆಂಟ್ಸ್ ನ ಮಾಲೀಕರಿಗೆ 30 ವೆಂಟಿಲೇಟರ್ ಟ್ರಾನ್ಸಿಸ್ಟರ್ ನೀಡುವಂತೆ ಮನವಿ ಮಾಡಿಕೊಂಡಿದ್ದೆ ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಕೂಡಲೇ 12 ವೆಂಟಿಲೇಟರ್ ಟ್ರಾನ್ಸಿಟ್ಸರ್ ಒದಗಿಸಲು ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಟ್ರಾನ್ಸಿಟ್ಸರ್ ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ :ರಾಜ್ಯದಲ್ಲಿಂದು 52,581 ಮಂದಿ ಗುಣಮುಖ; 32,218 ಹೊಸ ಪ್ರಕರಣ ಪತ್ತೆ, 353 ಜನರು ಸಾವು
ಆಕ್ಸಿಜನ್ ಘಟಕ ನಿರ್ವಹಣೆಗಾಗಿ ನುರಿತ ಸಿಬ್ಬಂದಿ ನೇಮಕಕ್ಕಾಗಿ ಕ್ರಮ ಕೈಗೊಂಡಿದ್ದೇವೆ. ಕ್ಷೇತ್ರದಲ್ಲಿ ಯಾರೇ ಕೋರೊನಾ ಸೋಂಕಿತರು ಬಂದರೂ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಮಣ್ಣ ತಳೇವಾಡ, ಬಿಜೆಪಿ ಮುಖಂಡ ಕೆ.ಆರ್. ಮಾಚಪ್ಪನವರ, ರವಿ ನಂದಗಾವಿ, ಜಿಲ್ಲಾಧಿಕಾರಿ ಕ್ಯಾ.ಡಾ.ರಾಜೇಂದ್ರ, ಜಿಲ್ಲಾ ಆರೋಗ್ಯಾಧಿಕಾರಿ ದೇಸಾಯಿ, ತಹಸೀಲ್ದಾರ ಸಂಗಮೇಶ ಬಾಡಗಿ, ತಾಲೂಕು ಪಂಚಾಯಿತಿ ಇಒ ಕಿರಣ ಘೋರ್ಪಡೆ, ಟಿಎಚ್ಒ ವೆಂಕಟೇಶ ಮಲಘಾಣ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೋಹನ ಕೋರಡ್ಡಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.