ಮುಷ್ಕರ ವಿಚಾರದಲ್ಲಿ ರಾಜಕೀಯ ಬೇಡ: ವಿರೋಧ ಪಕ್ಷಗಳಿಗೆ ಡಿಸಿಎಂ ಕಿವಿಮಾತು
Team Udayavani, Apr 10, 2021, 7:10 AM IST
ಬೆಂಗಳೂರು : ಮುಷ್ಕರನಿರತ ಸಾರಿಗೆ ನೌಕರರಿಗೆ ತಿಳಿವಳಿಕೆ ನೀಡಿ ಅವರನ್ನು ತಕ್ಷಣ ಕರ್ತವ್ಯಕ್ಕೆ ಮರಳುವಂತೆ ಮನವೊಲಿಸುವುದನ್ನು ಬಿಟ್ಟು ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಾ ರಾಜಕೀಯ ಲಾಭಗಳಿಸಿಕೊಳ್ಳುವ ಹುನ್ನಾರ ನಡೆಸುತ್ತಿರುವುದು ದುರ್ದೈವದ ಬೆಳವಣಿಗೆ ಎಂದು ಉಪಮುಖ್ಯಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ವಿಷಾದ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು 6ನೇವೇತನದ ಆಯೋಗದ ಶಿಫಾರಸ್ಸುಗಳನ್ನು ಸಾರಿಗೆ ನೌಕರರಿಗೆ ಅನ್ವಯಿಸಬೇಕು ಎಂದು ಈಗ ಮೊಸಳೆ ಕಣ್ಣೀರು ಸುರಿಸುವ ವಿರೋಧ ಪಕ್ಷಗಳು, ಹಿಂದೆ ತಾವೇ ಅಧಿಕಾರದಲ್ಲಿದ್ದಾಗ ವೇತನ ಆಯೋಗದ ಶಿಫಾರಸ್ಸುಗಳಂತೆ ಎಂದಾದರೂ ನಮ್ಮ ಸಾರಿಗೆ ನೌಕರರಿಗೆ ವೇತನಗಳನ್ನು ನೀಡಿದ ಇತಿಹಾಸವಿದೆಯೇ? ಹಿಂದೆ ಹಲವು ದಶಕಗಳ ಕಾಲ ಆಡಳಿತ ನಡೆಸಿದ ಇದೇ ವಿರೋಧ ಪಕ್ಷಗಳು ಎಂದಾದರೂ ಸಾರಿಗೆ ನಿಗಮಗಳ ನೌಕರರಿಗೆ ವೇತನ ಆಯೋಗದ ಶಿಫಾರಸ್ಸುಗಳ ಪ್ರಕಾರ ಸಂಬಳ ನೀಡಿದ ದಾಖಲೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ :ರಜಾ ದಿನವೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲು ಡಿಕೆಶಿ ಮನವಿ
ಲಾಕ್‍ಡೌನ್ ಸಂಕಷ್ಟದಿಂದಾಗಿ ಸಾರಿಗೆ ನೌಕರರಿಗೆ ಸಂಬಳ ನೀಡುವುದಕ್ಕೂ ಕಷ್ಟವಾದಾಗ ನಮ್ಮ ಮುಖ್ಯಮಂತ್ರಿಗಳು ಸುಮಾರು 2 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೊತ್ತವನ್ನು ಸರ್ಕಾರದಿಂದ ನಾಲ್ಕೂ ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಿದ್ದು ಒಂದು ದಾಖಲೆಯಾಗಿದೆ.ಕೇವಲ ಒಂದೇ ವರ್ಷದಲ್ಲಿ ಇಷ್ಟೊಂದು ಬೃಹತ್ ಮೊತ್ತವನ್ನು ಹಿಂದೆ ಯಾವುದೇ ಸರ್ಕಾರವೂ ಸಾರಿಗೆ ನಿಗಮಗಳಿಗೆ ನೀಡಿದ ನಿದರ್ಶನಗಳಿಲ್ಲ ಈ ಬಗ್ಗೆ ವಿರೋಧ ಪಕ್ಷದವರೇ ಅತ್ಮಾವಲೋಕನ ಮಾಡಿಕೊಂಡು ಮಾತನಾಡಿದರೆ ಒಳ್ಳೆಯದು. ಸಾರಿಗೆಯಂತಹ ಸಾರ್ವಜನಿಕ ಹಿತದೃಷ್ಟಿಯ ವಿಷಯಗಳಲ್ಲಿ ಯಾರೂ ರಾಜಕೀಯ ಬೆರೆಸಬಾರದು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.