ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ
ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು
Team Udayavani, Mar 16, 2021, 9:04 PM IST
ಶಬರಿಮಲೆ : ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.
ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.
ಇದೇ ವೇಳೆ ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.
ಪಂದಳಮ್ ಅರಮನೆಗೂ ಭೇಟಿ:
ಇಂದು ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದ ಆಶೀರ್ವಾದ ಪಡೆದರು ಡಿಸಿಎಂ.
ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು; “ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.