Budget: ರಾಜ್ಯದ ಜನತೆಯ ಮೇಲೆ ಸಾಲದ ಹೊರೆ- ಬಿ.ಎಸ್.ಯಡಿಯೂರಪ್ಪ
Team Udayavani, Jul 8, 2023, 7:23 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದ, ತೆರಿಗೆ ಹೊರೆ ಇರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು.
86 ಸಾವಿರ ಕೋಟಿ ರೂ. ಸಾಲ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಸಾಲದ ಹೊರೆ ರಾಜ್ಯದ ಜನತೆಯ ಮೇಲೆ ಬೀಳುತ್ತದೆ. ಪ್ರಥಮ ಸಚಿವ ಸಂಪುಟದಲ್ಲಿಯೇ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ ಕಾಂಗ್ರೆಸ್ ಸರ್ಕಾರ, ಇಂದಿನ ಬಜೆಟ್‌ನಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲು ಇಡೀ ಆರ್ಥಿಕ ವರ್ಷ ಬೇಕಾಗಬಹುದು ಎಂದು ಅಧಿಕೃತವಾಗಿ ಹೇಳಿದಂತಾಗಿದೆ. ಅವುಗಳ ಜಾರಿಗೆ ಅಗತ್ಯ ಇರುವ ಸುಮಾರು 52 ಸಾವಿರ ಕೋಟಿ ರೂ.ಗಳನ್ನು ಹೇಗೆ ಹೊಂದಿಸಲಾಗುವುದು ಎಂಬ ಸ್ಪಷ್ಟ ಚಿತ್ರಣವನ್ನು ಅವರು ನೀಡಿಲ್ಲ ಎಂದರು.
ಮುಂದಿನ ದಿನಗಳಲ್ಲಿ ತೆರಿಗೆ ಹೆಚ್ಚಳದ ಮೂಲಕ ಜನರಿಗೆ ಬರೆ ಎಳೆಯುವುದು ಖಚಿತ. ತೆರಿಗೆ ಹೆಚ್ಚಳದ ಹಲವು ಪುಸ್ತಾಪಗಳು ಈ ಬಜೆಟ್‌ನಲ್ಲಿ ಇವೆ. ಇಂದಿನ ಬಜೆಟ್ ಮಂಡನೆ ರಾಜಕೀಯ ಭಾಷಣದಂದಿತ್ತು. ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಅನುದಾನ ಕಡಿಮೆ ಮಾಡಲಾಗಿದೆ. ಆರೋಗ್ಯ ನೀರಾವರಿ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ. ಒಟ್ಟಿನಲ್ಲಿ ಜಲಸಂಪನ್ಮೂಲ ಇಲಾಖೆ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.
ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಸ್ಪಷ್ಟ ಚಿತ್ರಣ ಇಲ್ಲ. ನೀರಾವರಿಗೆ ಹಿಂದಿನ ಬಿಜೆಪಿ ಸರ್ಕಾರ 22,854 ಕೋಟಿ ರೂ. ಬಂಡವಾಳ ಒದಗಿಸಿದ್ದರೆ, ಅದನ್ನು ಈಗ 19 ಸಾವಿರ ಕೋಟಿ ರೂ.ಗೆ ಇಳಿಸಿ ಅನ್ಯಾಯ ಮಾಡಲಾಗಿದೆ. ಸರ್ಕಾರಿ ನೌಕರರಿಗೆ ನೀಡಲಾಗುವ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡುವ ಬಗ್ಗೆ ಹಾಗೂ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.