ಪ್ರೀತಂಗೌಡರನ್ನು ಸೋಲಿಸಿ ಹಾಸನದಿಂದ ಓಡಿಸಿ: ಭವಾನಿ
Team Udayavani, Apr 27, 2023, 7:26 AM IST
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಹಿಳೆಯರ ಬಗ್ಗೆ ಅವಹೇಳನ ಮಾಡಿರುವ ಶಾಸಕ ಪ್ರೀತಂಗೌಡ ಅವರನ್ನು ಸೋಲಿಸಿ ಹಾಸನದಿಂದ ಓಡಿಸಬೇಕು ಎಂದು ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ವಾಗ್ಧಾಳಿ ನಡೆಸಿದರು.
ನಗರದ ಗಾಂಧಿ ಬಜಾರ್‌ನಲ್ಲಿರುವ ನಿಲುವಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಬುಧವಾರ ಪತಿ ರೇವಣ್ಣ ಮತ್ತು ಹಾಸನ ಕ್ಷೇತ್ರದ ಜೆಡಿಎಸ್ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ಪರ ವಿವಿಧ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಎಚ್.ಡಿ.ದೇವೇಗೌಡರು ಇಡೀ ರಾಜ್ಯಕ್ಕೆ ತಂದೆ ಸಮಾನರು. ಅವರ ಬಗ್ಗೆ ಹಗುರುವಾಗ ಮಾತನಾಡಿ ಅವರ ಸಾವು ಬಯಸಿ ಮಾತನಾಡಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ನನ್ನ ಬಗ್ಗೆಯೂ ಹಗುರವಾಗಿ ಮಾತನಾಡುವ ಮೂಲಕ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮಂತೆಯೇ ಬಿಜೆಪಿ ಶಾಸಕರಿಂದ ನೋವು ತಿಂದಿರುವ ಕುಟುಂಬಗಳು ಸಾಕಷ್ಟಿವೆ. ಪ್ರತಿಯೊಬ್ಬರೂ ಹಾಸನ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸುವ ಪ್ರತಿಜ್ಞೆ ಮಾಡಬೇಕು. ಈಗಿರುವ ಉತ್ಸಾಹದಲ್ಲಿಯೇ ಜೆಡಿಎಸ್ ಕಾರ್ಯಕರ್ತರು ಮುನ್ನುಗ್ಗಬೇಕು. ಬಿಜೆಪಿ ಶಾಸಕರನ್ನು ಹಾಸನ ಬಿಟ್ಟು ಓಡಿಸ್ತೀವಿ ಎಂದು ಕೂಗು ಹಾಕೋಣ ಎಂದು ಕಾರ್ಯಕರ್ತರನ್ನು ಭವಾನಿ ರೇವಣ್ಣ ಹುರಿದುಂಬಿಸಿದರು.
ಎಲ್ಲರಿಗೂ ಒಬ್ಬರು ತಾಯಿ ಇರ್ತಾರೆ. ಆದರೆ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್‌ಗೆ ಇಬ್ಬರು ತಾಯಂದಿರಿದ್ದಾರೆ. ಲಲಿತಾ ಅವರು ಸ್ವರೂಪ್ ಹೆತ್ತ ತಾಯಿ, ನಾನು ಸ್ವರೂಪ್ ಭಾರ ಹೊತ್ತುಕೊಂಡಿರುವ ತಾಯಿ. ಈ ವಿಚಾರದಲ್ಲಿ ಸ್ವರೂಪ್ ಅದೃಷ್ಟವಂತ.
-ಭವಾನಿ ರೇವಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.